ಬೀದರ್: ಜಿಲ್ಲೆಯ ಔರಾದ್ ತಾಲ್ಲೂಕಿನ ಹಾಗೂ ಕಮಲನಗರ ತಾಲೂಕಿನಲ್ಲಿ ಬುಧವಾರ ಹಾಗೂ ಗುರುವಾರ ಭಾರೀ ಮಳೆಗೆ ಸೇತುವೆಗಳು ಕೊಚ್ಚಿ ಹೋದ ಘಟನೆ ನಡೆದಿದೆ.
ಜಿಲ್ಲಾದ್ಯಂತ ಅಧಿಕ ಮಳೆಯಿಂದ ರೈತರು ಬೆಳೆದ ಬೆಳೆಗಳು ಹಾಳಾಗಿದೆ. ಔರಾದ್ ತಾಲ್ಲೂಕು ಹಾಗೂ ಕಮಲನಗರ ತಾಲೂಕಿನ ಭಾರೀ ಮಳೆಯಿಂದಾಗಿ ಹತ್ತಿ, ಉದ್ದು ಮತ್ತು ತೊಗರಿ, ಸೋಯಾ ಬೆಳೆಗೆ ಹೆಚ್ಚಿನ ಹಾನಿಯಾಗಿದೆ. ಇದರಿಂದಾಗಿ ರೈತರು ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ. ಕೂಡಲೇ ರಾಜ್ಯ ಸರ್ಕಾರ ಶೀಘ್ರದಲ್ಲಿ ಬೆಳೆ ಹಾನಿ ಪರಿಹಾರ ಘೋಷಿಸಬೇಕೆಂದು ರೈತರು ಆಗ್ರಹಿಸಿದ್ದಾರೆ.
ತಾಲೂಕಿನ ಬೆಳಕುಣಿ (ಚೌದ್ರಿ) ಸಮೀಪದ ಸೇತುವೆ ಮಳೆಗೆ ಕುಸಿದಿದೆ ಗ್ರಾಮಕ್ಕೆ ಗ್ರಾಮಲೆಕ್ಕ ಅಧಿಕಾರಿ ಪಂಡಿತ್ ಸಿಂಧೆ ಭೇಟಿ ನೀಡಿದರು.
ಔರಾದ್ ತಾಲ್ಲೂಕಿನ ಗ್ರಾಮಗಳ ಮನೆಗಳಿಗೆ ಹಾನಿಯಾಗಿದೆ ಹಾಗೂ ಸೇತುವೆಗಳು ಮುಳುಗಿ, ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಹಾನಿಯಾಗಿರುವ ಗ್ರಾಮಗಳಿಗೆ ತಹಶೀಲ್ದಾರ್ ಮಹೇಶ್ ಪಾಟೀಲ್ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC