ಬೆಂಗಳೂರು: ನಟಿ ಹಾಗೂ ಆ್ಯಂಕರ್ ಅನುಶ್ರೀ ಹಾಗೂ ರೋಷನ್ ಅವರ ಕಲ್ಯಾಣ ಮಹೋತ್ಸವವು ಕಗ್ಗಲಿಪುರದ ಬೈಸ್ವಾನ್ ಲೈನ್ ಸ್ಟುಡಿಯೋಸ್ ತಿಟ್ಟಹಳ್ಳಿಯಲ್ಲಿ ಅದ್ಧೂರಿಯಾಗಿ ನೆರವೇರಿದೆ.
ಅನುಶ್ರೀ ಅವರ ವಿವಾಹ ಮಹೋತ್ಸವಕ್ಕೆ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಆಗಮಿಸಿ ಶುಭ ಹಾರೈಸಿದ್ದಾರೆ. ಕೊನೆಗೂ ಅನುಶ್ರೀ ಅವರ ಮದುವೆಯ ಬಗ್ಗೆ ಇದ್ದ ಕುತೂಹಲಕ್ಕೆ ಇಂದು ತೆರೆ ಬಿದ್ದಿದೆ.
ಅನುಶ್ರೀ– ರೋಷನ್ ಅವರ ಮನೆಗಳವರು ಒಪ್ಪಿ ಅದ್ದೂರಿಯಾಗಿ ಮದುವೆ ಮಾಡಿದ್ದಾರೆ. ನಿನ್ನೆಯಿಂದಾನೂ ಅರಿಶಿನ ಶಾಸ್ತ್ರ, ಬಳೆ ಶಾಸ್ತ್ರದಲ್ಲಿ ಅನುಶ್ರೀ ಮಿಂದೆದ್ದಿದ್ದಾರೆ.
ರೋಷನ್ ಮೂಲತಃ ಕೊಡಗಿನವರು. ಬೆಂಗಳೂರಿನಲ್ಲಿಯೇ ಉದ್ಯಮಿಯಾಗಿದ್ದಾರೆ. ಇಂದು ಬೆಳಗ್ಗೆ 10.56ಕ್ಕೆ ರೋಷನ್, ಅನುಶ್ರೀ ಅವರಿಗೆ ಮಾಂಗಲ್ಯ ಧಾರಣೆ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


