ಸರಗೂರು: ಜನ ಸಂಪರ್ಕ ಸಭೆ ಅಂದರೆ, ಬರಿ ಆಶ್ವಾಸನೆ ಸಭೆ ಆಗಬಾರದು, ಅದು ಕಾರ್ಯರೂಪಕ್ಕೆ ಬರಬೇಕು ಮತ್ತು ಪ್ರತಿ ಇಲಾಖೆಯ ವತಿಯಿಂದ ಸಾರ್ವಜನಿಕರಿಗೆ ಸಿಗುವ ಸೌಲಭ್ಯಗಳು ಸಿಗಬೇಕು ಎಂದು ಶಾಸಕ ಅನಿಲ್ ಚಿಕ್ಕಮಾದು ಹೇಳಿದರು.
ಪಟ್ಟಣದ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಜನ ಸಂಪರ್ಕ ಸಭೆ ಪೂರ್ವಭಾವಿ ಸಭೆಯನ್ನು ಶುಕ್ರವಾರದಂದು ಶಾಸಕರು ಅನಿಲ್ ಚಿಕ್ಕಮಾದು ಅಧ್ಯಕ್ಷತೆಯಲ್ಲಿ ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರ ಸಭೆ ಕರೆದು, ಚರ್ಚಿಸಿ ಮಾತನಾಡಿದರು.
ನನಗೆ ಈ ಬಾರಿ ತಾಲ್ಲೂಕಿನಲ್ಲಿ ಶಿಕ್ಷಣ ಇಲಾಖೆವತಿಯಿಂದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆ ಹೆಚ್ಚಿನ ಫಲಿತಾಂಶ ಬರಬೇಕು. ಸರ್ಕಾರದ ಸೌಲಭ್ಯಗಳನ್ನು ಅಳವಡಿಸಿಕೊಂಡು ಉತ್ತಮ ಫಲಿತಾಂಶ ದೊರೆಯುವ ನಿಟ್ಟಿನಲ್ಲಿ ಶಿಕ್ಷಕರು ಕೆಲಸ ಮಾಡಬೇಕು ಎಂದು ಬಿಇಓ ರವರಿಗೆ ಸೂಚನೆ ನೀಡಿದರು.
ಸರ್ಕಾರಿ ಶಾಲೆಗಳಲ್ಲಿ ಸರ್ಕಾರಿ ನೌಕರರಾದ ಶಿಕ್ಷಕರು ಮಕ್ಕಳಿಗೆ ಇಲ್ಲಿ ವ್ಯಾಸಂಗ ಮಾಡಬೇಡಿ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡಿ ಎಂದು ಹೇಳಿರುವ ನನ್ನ ಗಮನಕ್ಕೆ ಬಂದಿದೆ ಎಂದು ತರಾಟೆಗೆ ತೆಗೆದುಕೊಂಡರು.
ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಲು ಯೋಗ್ಯತೆ ಇಲ್ಲ ಅವರಿಗೆ. ಮಕ್ಕಳನ್ನು ಹೋಗಿ ಎನ್ನುವ ಬದಲು ಇವರೇ ಸರ್ಕಾರಿ ಬಿಟ್ಟು ಖಾಸಗಿ ಹೋಗಿ ಶಾಲೆಗೆ ಸೇರಿಕೊಳ್ಳಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಬಿಇಓಗೆ ಸೂಚಿಸಿದರು. ನೀವುಗಳು ಕ್ರಮ ಕೈಗೊಂಡಿಲ್ಲ ಎಂದರೆ ನಾನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
02 ರಂದು ಜನ ಸಂಪರ್ಕ ಸಭೆ ಕರೆದಿದ್ದು, ಈ ಸಭೆಯನ್ನು ಮುಂದೂಡಲಾಗಿದೆ. ಪ್ರತಿ ಇಲಾಖೆ ವತಿಯಿಂದ ವಸ್ತು ಪ್ರದರ್ಶನ, ಆಯೋಜಿಸಬೇಕು, ದೊಡ್ಡ ಮಟ್ಟದಲ್ಲಿ ಜನಸಂಪರ್ಕ ಸಭೆಯನ್ನು ಆಯೋಜನೆ ಮಾಡುವ ದೃಷ್ಟಿಯಿಂದ, ಜನ ಸಂಪರ್ಕ ಸಭೆಯನ್ನು ದಿನಾಂಕ, 19_09_2025 ಕ್ಕೆ ಮುಂದೂಡಲಾಗಿದೆ ಎಂದು ತಿಳಿಸಿದರು.
ಅಧಿಕಾರಿಗಳು ಸರಗೂರು ತಾಲೂಕಿನ ಪ್ರತಿ ಗ್ರಾಮಗಳಿಗೂ ಸಹ ಭೇಟಿ ನೀಡಬೇಕು. ಹಾಗೂ ನಮ್ಮ ಕಾಂಗ್ರೆಸ್ ಸರ್ಕಾರವು ಘೋಷಣೆ ಮಾಡಿರುವ ಭರವಸೆಗಳನ್ನು ತಾಲೂಕಿನ ಬಡಜನರಿಗೆ ತಲುಪುವ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಕೆಲಸ ನಿರ್ವಹಿಸಬೇಕು. ರಾಜ್ಯದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದ್ದು, ಜನತೆಯು ನನ್ನ ಮೇಲೆ ಬಹಳ ವಿಶ್ವಾಸವಿಟ್ಟು ಮತ್ತೊಮ್ಮೆ ಶಾಸಕರಾಗಿ ಆಯ್ಕೆಮಾಡಿದ್ದಾರೆ. ಅವರ ನಿರೀಕ್ಷೆಗೆ ಮೀರಿದ ಕೆಲಸ ಮಾಡಬೇಕಾಗಿದೆ. ಆದುದರಿಂದ ಎಲ್ಲಾ ಅಧಿಕಾರಿಗಳು ನನ್ನ ಜೋತೆ ಕೈ ಜೋಡಿಸಬೇಕು ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ನನ್ನ ಗುರಿ ನನ್ನ ಉದ್ದೇಶ ನಮ್ಮ ತಾಲೂಕು ಹಿಂದುಳಿದ ತಾಲೂಕು ಎಂಬ ಹಣೆಪಟ್ಟಿಯನ್ನು ಕಳಚಿಹಾಕಬೇಕು ಅದೊಂದೇ ನನ್ನ ಗುರಿ ನನ್ನ ಉದ್ದೇಶ ಎಂದು ತಿಳಿಸಿದರು.
ಎಲ್ಲಾ ಇಲಾಖೆ ಅಧಿಕಾರಿಗಳಿಗೆ ಸಾರ್ವಜನಿಕರು ಹಾಗೂ ರೈತರಿಗೆ ತೊಂದರೆಯಾಗುತ್ತಿದೆ, ನೋಡಿ ಕೊಳ್ಳುವ ಕೆಲಸ ಮಾಡುವುದರಿಂದ ತಾಲೂಕಿನ ಅಭಿವೃದ್ಧಿ ಕೆಲಸ ಮಾಡಲು ಸಾಧ್ಯ. ನಾವು ಜನ ಸಂಪರ್ಕ ಸಭೆ ಒಂದು ಕಟ್ಟಡದಲ್ಲಿ ಮಾಡುವುದರಿಂದ ಯಾರಿಗೂ ಗೊತ್ತಾಗುವುದಿಲ್ಲ. ಅದರಿಂದ ತಾಲೂಕಿನ ಜಯಚಾಮರಾಜೇಂದ್ರ ಒಡೆಯರ್ ಕ್ರೀಡಾಂಗಣದಲ್ಲಿ ದೊಡ್ಡ ಮಟ್ಟದಲ್ಲಿ ಜನ ಸಂಪರ್ಕ ಸಭೆ ಮಾಡಬೇಕು. ಅದರಲ್ಲಿ ಯಾವ ಯಾವ ಇಲಾಖೆಯಿಂದ ಬರುವ ಸೌಲಭ್ಯವನ್ನು ಸಾರ್ವಜನಿಕರಿಗೆ ತಲುಪುವ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಸಭೆ ಮುಗಿದ ಮೇಲೆ ಸಾರ್ವಜನಿಕರ ಕುಂದು ಕೊರತೆಗಳನ್ನು ಅರ್ಜಿಯನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಮೋಹನಕುಮಾರಿ, ಇಓ ಪ್ರೇಮ್ ಕುಮಾರ್, ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್, ಪಿಎಸ್ ಐ ಕಿರಣ್, ಕಬಿನಿ ಜಲಾಶಯ ಕಾರ್ಯಪಾಲಕ ಅಭಿಯಂತರರು ಕೆ ಆರ್ ಉಷಾ, ಸಮಾಜ ಕಲ್ಯಾಣ ಪರಿಶಿಷ್ಟ ಪಂಗಡ ಮಹೇಶ್, ರಾಮಸ್ವಾಮಿ, ಪಪಂ ಮುಖ್ಯಾಧಿಕಾರಿ ಎಸ್ ಕೆ ಸಂತೋಷ ಕುಮಾರ್, ಶಶಿಕಲಾ, ಬಿ ಡಬ್ಲ್ಯೂ ಡಿ ಅಧಿಕಾರಿ ರಮೇಶ್, ಅಬಕಾರಿ ಇಲಾಖೆ ಅಧಿಕಾರಿ ಶಿವರಾಜು, ಕೆಇಬಿ ಕಾರ್ಯಪಾಲಕ ಅಭಿಯಂತರರು ಎಸ್ ರಮೇಶ್, ಇನ್ನೂ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC