ಯಾದಗಿರಿ: ಒಂದೇ ಕುಟುಂಬದ ಇಬ್ಬರು ಸಹೋದರರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿಯಲ್ಲಿ ನಡೆದಿದೆ.
ಮೃತರನ್ನು ಶಂಶೋದ್ದೀನ್ (42) ಮತ್ತು ಇರ್ಫಾನ್ (38) ಎಂದು ಗುರುತಿಸಲಾಗಿದೆ. ಕೆಂಭಾವಿ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.
ತಮ್ಮ ಇರ್ಫಾನ್ ಗೆ ಎದೆನೋವು ಕಾಣಿಸಿಕೊಂಡು ಹೃದಯಾಘಾತವಾದ ಸುದ್ದಿ ತಿಳಿದ ಕೂಡಲೇ ಅಣ್ಣ ಶಂಶೋದ್ದೀನ್ ಗೂ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಇಬ್ಬರನ್ನೂ ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC