nammatumakuru

    Subscribe to Updates

    Get the latest creative news from FooBar about art, design and business.

    What's Hot

    ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ

    September 28, 2025

    ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ

    September 28, 2025

    ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ

    September 27, 2025
    Facebook Twitter Instagram
    ಟ್ರೆಂಡಿಂಗ್
    • ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ
    • ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ
    • ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ
    • ಸರಗೂರು | ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ
    • ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅವಿರೋಧ ಆಯ್ಕೆ
    • ಸೆ.28ರಂದು ಪಾವಗಡದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ: ಯತ್ನಾಳ್ ಭಾಗಿ
    • ಇಳಿಯುವ ಮುನ್ನವೇ ಚಲಿಸಿದ ಬಸ್: ಮಗಳ ಮನೆಗೆ ಹೋಗಿ ಬರುತ್ತಿದ್ದ ಮಹಿಳೆ ಸಾವು!
    • ಬೀದರ್ | 1. 34 ಕೋಟಿ ರೂ.ಗೂ ಅಧಿಕ ಮೌಲ್ಯದ ಮಾದಕ ವಸ್ತು ನಾಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮತಗಳ್ಳತನದಿಂದ ಆಯ್ಕೆಯಾಗಿ ಅಧಿಕಾರಕ್ಕೆ ಬಂದಿರೋದು ಅಂತ ಕಾಂಗ್ರೆಸ್ ಒಪ್ಪಿಕೊಳ್ಳಲಿ:  ಬಿ.ವೈ.ವಿಜಯೇಂದ್ರ
    ರಾಜ್ಯ ಸುದ್ದಿ September 5, 2025

    ಮತಗಳ್ಳತನದಿಂದ ಆಯ್ಕೆಯಾಗಿ ಅಧಿಕಾರಕ್ಕೆ ಬಂದಿರೋದು ಅಂತ ಕಾಂಗ್ರೆಸ್ ಒಪ್ಪಿಕೊಳ್ಳಲಿ:  ಬಿ.ವೈ.ವಿಜಯೇಂದ್ರ

    By adminSeptember 5, 2025No Comments2 Mins Read
    b y vijayendra

    ಬೆಂಗಳೂರು:  ಮುಂದಿನ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಯಂತ್ರ ಬದಿಗಿಟ್ಟು ಬ್ಯಾಲಟ್‌ ಪೇಪರ್‌ ಬಳಕೆಗೆ ನಿರ್ಧರಿಸಿರುವ ಕಾಂಗ್ರೆಸ್‌‍ ಸರ್ಕಾರದ ಸಂಪುಟದ ತೀರ್ಮಾನ ತಾವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವುದೇ ಮತಗಳ್ಳತನದಿಂದ ಎಂದು ಸ್ವಯಂ ಪ್ರಮಾಣೀಕರಿಸಿಕೊಂಡಂತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.

    ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ Xನಲ್ಲಿ ಸರ್ಕಾರದ ವಿರುದ್ಧ ಪೋಸ್ಟ್‌ ಮಾಡಿರುವ ಅವರು, ಇವಿಎಂ ಮತಯಂತ್ರ ಬಳಸಿ ರಾಜ್ಯದಲ್ಲಿ 2023ರ ಚುನಾವಣೆಯಲ್ಲಿ ಆರಿಸಿ ಬಂದಿರುವ 136 ಕಾಂಗ್ರೆಸ್‌‍ ಶಾಸಕರಿಂದ ಮೊದಲು ರಾಜೀನಾಮೆ ಕೊಡಿಸಲಿ, ರಾಜ್ಯದಿಂದ ಆಯ್ಕೆಯಾದ ಒಂಬತ್ತು ಕಾಂಗ್ರೆಸ್‌‍ ಲೋಕಸಭಾ ಸದಸ್ಯರಿಂದ ರಾಜೀನಾಮೆ ಕೊಡಿಸಲಿ, ಮತಪತ್ರ ಬಳಸಿ ಮತ್ತೆ ಚುನಾವಣೆಯಿಂದ ಗೆದ್ದು ಬರಲಿ, ಇಲ್ಲದಿದ್ದರೆ ಮತಗಳ್ಳತನದಿಂದ ನಾವು ಆಯ್ಕೆಯಾಗಿ ಅಧಿಕಾರಕ್ಕೆ ಬಂದಿರುವುದು ಎಂದು ಒಪ್ಪಿಕೊಳ್ಳಲಿ ಎಂದು ಸವಾಲು ಹಾಕಿದ್ದಾರೆ.


    Provided by
    Provided by
    Provided by

    ದೇಶದಲ್ಲಿ ಅತಿಹೆಚ್ಚು ಅಕ್ರಮ ಮತದಾನ, ಮತಗಳ್ಳತನದ ದೂರುಗಳು, ಚುನಾವಣಾ ದೌರ್ಜನ್ಯದ ಘಟನೆಗಳು, ಚುನಾವಣಾ ಅಕ್ರಮಗಳು ನಡೆದ ಬಗ್ಗೆ ನ್ಯಾಯಾಲಯಗಳಲ್ಲಿ ದೂರುಗಳು ಅತಿ ಹೆಚ್ಚು ದಾಖಲಾಗಿದ್ದರೆ ಅದು ಮತಪತ್ರ ಆಧರಿಸಿ ನಡೆಸಿದ ಚುನಾವಣೆಗಳಲ್ಲಿ , ಅದೂ ಕಾಂಗ್ರೆಸ್ಸಿಗರ ಮೇಲೇ ಹೆಚ್ಚು ಎಂಬುದನ್ನು ಕಾಂಗ್ರೆಸ್ಸಿಗರು ಇತಿಹಾಸದ ಪುಟಗಳನ್ನು ತೆರೆದು ನೋಡಲಿ. ಇಂದಿರಾ ಗಾಂಧಿಯವರು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಲು ಕಾರಣವಾಗಿದ್ದು ಅವರು ನಡೆಸಿದ ಮತಗಳ್ಳತನ ಹಾಗೂ ಅಕ್ರಮ ಚುನಾವಣೆಯ ಹಿನ್ನೆಲೆಯಲ್ಲಿ ನ್ಯಾಯಾಲಯ ನೀಡಿದ ತೀರ್ಪಿನಿಂದ ಎಂಬ ಇತಿಹಾಸವನ್ನು ದೇಶದ ಜನ ಮರೆತಿಲ್ಲ ಎಂದು ಎಚ್ಚರಿಸಿದ್ದಾರೆ.

    ಮತ ಪತ್ರ ಆಧರಿಸಿದ ಚುನಾವಣೆಗಳಲ್ಲಿ ಅಕ್ರಮ ಹಾಗೂ ಮತಗಳ್ಳತನ ನಡೆಸುವುದರಲ್ಲಿ ನಿಷ್ಣಾತರಾದ ಕಾಂಗ್ರೆಸ್ಸಿಗರು ಚುನಾವಣೆಗಳ ನಿರಂತರ ಸೋಲುಗಳಿಂದ ಮೂಲೆಗುಂಪಾಗುತ್ತಿರುವ ಪರಿಸ್ಥಿತಿಯಿಂದ ಕಂಗೆಟ್ಟು ಹೋಗಿದ್ದಾರೆ. ಈ ಕಾರಣದಿಂದಾಗಿ ಆಧಾರ ರಹಿತ, ಅಪ್ರಬುದ್ಧ, ವಿತಂಡ ವಾದವನ್ನು ಮುಂದಿಟ್ಟುಕೊಂಡು ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಮತಗಳ್ಳತನದ ಹೆಸರಿನಲ್ಲಿ ಬಾಲಿಶ ವಿವಾದ ಹುಟ್ಟು ಹಾಕಲು ಹೊರಟಿದ್ದಾರೆ.

    ಇದನ್ನು ಬೆಂಬಲಿಸಲು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌‍ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರವನ್ನು ಬಳಸಿ ಚುನಾವಣೆ ನಡೆಸುವುದಾಗಿ ನಿರ್ಣಯ ಕೈಗೊಂಡಿದೆ. ಇಡೀ ದೇಶ, ಜಗತ್ತು ತಂತ್ರಜ್ಞಾನವನ್ನು ಆಧರಿಸಿ ವೇಗವಾಗಿ ನಡೆಯುತ್ತಿದ್ದರೆ, ಕರ್ನಾಟಕದ ಕಾಂಗ್ರೆಸ್‌‍ ಸರ್ಕಾರ ತಂತ್ರಜ್ಞಾನವನ್ನು ಅಪಮಾನಿಸಿ ಹೆಬ್ಬೆಟ್ಟಿನ ದಿನಗಳನ್ನು ನೆನಪಿಸಲು ಹೊರಟಿದೆ ಎಂದು ಕಿಡಿಕಾರಿದ್ದಾರೆ.

    ಕಾಂಗ್ರೆಸ್‌‍ ಸರ್ಕಾರ ಅಧಿಕಾರವಿದ್ದ ಅವಧಿಯಲ್ಲಿ ಮತಪತ್ರ ಬಳಸಿ ನಡೆದ ಚುನಾವಣೆಗಳಲ್ಲಿ ಎಷ್ಟು ಅಕ್ರಮ ನಡೆದಿದೆ ಎನ್ನುವುದಕ್ಕೆ ಇವತ್ತಿಗೂ ದಾಖಲೆಗಳಿವೆ. 90ರ ದಶಕದಲ್ಲಿ ದಾವಣಗೆರೆಯಲ್ಲಿ ಜಯಗಳಿಸಿದ್ದ ಲೋಕಸಭಾ ಬಿಜೆಪಿ ಅಭ್ಯರ್ಥಿಯನ್ನು ಮರು ಎಣಿಕೆಯಲ್ಲಿ ಸೋಲಿಸಿ ಕಾಂಗ್ರೆಸ್‌‍ ಅಭ್ಯರ್ಥಿಯನ್ನು ಗೆಲ್ಲಿಸಲಾಯಿತು. ಬಿಜೆಪಿ ಅಭ್ಯರ್ಥಿಯ ಮತ್ರ ಪತ್ರಗಳನ್ನು ಹೇಗೆ ತಿರಸ್ಕೃತಗೊಳಿಸಲಾಯಿತು ಎಂಬುದಕ್ಕೆ ಅಂದು ದಾವಣಗೆರೆಯ ಮತ ಎಣಿಕೆ ಕೇಂದ್ರದ ಶೌಚಾಲಯಗಳಲ್ಲೆಲ್ಲಾ ಬಿಜೆಪಿ ಅಭ್ಯರ್ಥಿಯ ಮತ ಪತ್ರಗಳು ಚೆಲ್ಲಾಡಿರುವುದನ್ನು ಅಂದು ಮಾಧ್ಯಮಗಳು ವರದಿ ಮಾಡಿದ್ದವು ಎಂಬುದನ್ನು ನೆನಪಿಸಿದ್ದಾರೆ.

    ಮತಪತ್ರಗಳ ಬಳಕೆಯಿಂದ ಚುನಾವಣಾ ಅಕ್ರಮ ಎಸಗಬಹುದು, ಮತಗಟ್ಟೆಗಳಲ್ಲಿ ದೌರ್ಜನ್ಯ ಮೆರೆಯಬಹುದು, ಎಗ್ಗಿಲ್ಲದೇ ಕಳ್ಳ ಮತದಾನವನ್ನೂ ಮಾಡಬಹುದು ಎಂಬ ಏಕೈಕ ಕಾರಣಕ್ಕಾಗಿ ಕಾಂಗ್ರೆಸ್‌‍ ಮತ ಪತ್ರ ಆಧರಿಸಿದ ಚುನಾವಣೆಯನ್ನು ರಾಹುಲ್‌ ಗಾಂಧಿಯವರ ನೇತೃತ್ವದಲ್ಲಿ ಬೆಂಬಲಿಸುತ್ತಿದೆ, ಅದನ್ನು ಕರ್ನಾಟಕದ ಕಾಂಗ್ರೆಸ್‌‍ ಸರ್ಕಾರ ಜಾರಿಗೊಳಿಸಲು ಮೊದಲ ಹೆಜ್ಜೆ ಇಡಲು ಹೊರಟಿದೆ, ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಪಾರದರ್ಶಕ ಚುನಾವಣೆಯನ್ನು ಧಿಕ್ಕರಿಸುವುದೇ ಕಾಂಗ್ರೆಸ್‌‍ನ ಅಜೆಂಡಾ ಹಾಗೂ ಗುರಿಯಾಗಿದೆ ಎಂದು ವಿಜಯೇಂದ್ರ ಸರ್ಕಾರದ ವಿರುದ್ದ ವಾಗ್ದಳಿ ನಡೆಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕಾವೇರಿ ಆರತಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಚಾಲನೆ

    September 27, 2025

    ಸೀರೆ ಕದ್ದವಳಿಗೆ ಒದ್ದ ಅಂಗಡಿ ಮಾಲಿಕ: ಮಾಲಿಕ, ಸಹಾಯಕನ ಬಂಧನ

    September 26, 2025

    ನಟ ಉಪೇಂದ್ರ, ಪ್ರಿಯಾಂಕಾ ದಂಪತಿಯ ಮೊಬೈಲ್ ಹ್ಯಾಕ್ ಕೇಸ್: ಹ್ಯಾಕರ್ ಗಳ ಮೂಲ ಪತ್ತೆ

    September 26, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ

    September 28, 2025

    ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಪಟ್ಟಣದಲ್ಲಿ ಶನಿವಾರ ಮಹರ್ಷಿ ವಾಲ್ಮೀಕಿ ವಿಗ್ರಹ ಅನಾವರಣ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಮಾಜಿ ಸಚಿವರು, ಜನಪ್ರತಿನಿಧಿಗಳು…

    ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ

    September 28, 2025

    ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ

    September 27, 2025

    ಸರಗೂರು | ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ

    September 27, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.