ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನಲ್ಲಿ ಕೈಗಾರಿಕೆ ಉದ್ದೇಶಕ್ಕೆ ಮಾಡಲಾಗಿದ್ದ ಭೂ ಸ್ವಾಧೀನವನ್ನು ಕೈಬಿಟ್ಟು ಹಸಿರುವಲಯ (ಗ್ರೀನ್ ಬೆಲ್ಟ್ )ವಾಗಿ ಮುಂದುವರೆಸಲಾಗುವುದು ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ವಿರೋಧ ಇರುವ ಒಂದು ಎಕರೆ ಜಮೀನನ್ನು ತೆಗೆದುಕೊಳ್ಳುವುದಿಲ್ಲ. ಆದರೆ ಸ್ವ ಇಚ್ಛೆಯಿಂದ ಯಾರು ಕೃಷಿ ಜಮೀನು ನೀಡಲು ಮುಂದೆ ಬರುತ್ತಾರೆಯೋ ಅಂಥ ಜಮೀನನ್ನು ಪಡೆಯುತ್ತೇವೆ ಎಂದರು.
ವರ್ಷದ ನಂತರ ಭೂಮಿಯ ಬೆಲೆ ದುಬಾರಿಯಾಗಿದೆ. ಹೀಗಾಗಿ ಜಮೀನು ನೀಡಲು ನಿರಾಕರಿಸಿದವರ ಜಮೀನನ್ನು ಭೂಸ್ವಾಧೀನದಿಂದ ಕೈಬಿಡುತ್ತೇವೆ ಎಂದು ಹೇಳಿದರು. ಕೃಷ್ಣ ಮೇಲ್ದಂಡೆ ಯೋಜನೆಯ ಭೂ ಸ್ವಾಧೀನದ ಗೊಂದಲದ ವಿಚಾರ ಈಗ ಒಂದು ಹಂತಕ್ಕೆ ಬಂದಿದೆ. 75 ಸಾವಿರ ಎಕರೆ ಪ್ರದೇಶ ಮುಳುಗಡೆಯಾಗಲಿದೆ. 75 ಸಾವಿರ ಎಕರೆ ಭೂಸ್ವಾಧೀನ ಆಗಬೇಕು. ಅದಕ್ಕೆ ಪರಿಹಾರ ನೀಡಬೇಕಾಗಿದೆ. ಪ್ರತಿ ಎಕರೆ 50 ಲಕ್ಷ ರೂ. ನೀಡಬೇಕೆಂಬ ಬೇಡಿಕೆ ಇದೆ. ಒಟ್ಟಾರೆ 25 ಸಾವಿರ ಕೋಟಿ ರೂ. ಬೇಕಾಗಬಹುದು ಎಂದರು.
ನಾಲೆಗಳಿಗೆ 11 ಕೋಟಿ ಬೇಕಾಗುತ್ತದೆ. ಒಟ್ಟಾರೆ ಯೋಜನೆಗೆ 95 ಸಾವಿರ ರೂ. ವೆಚ್ಚವಾಗಬಹುದೆಂದು ಅಂದಾಜಿಸ ಲಾಗಿದೆ. ಪುನರ್ವಸತಿ ಯಲ್ಲೂ ಸಮಸ್ಯೆಯಿದೆ. ಸರ್ಕಾರ ಎಲ್ಲವನ್ನು ಸರಿ ಮಾಡಲಿದೆ ಎಂದು ಅವರು ಇದೇ ವೇಳೆ ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC