nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

    October 12, 2026

    ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!

    October 12, 2026

    ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

    October 12, 2026
    Facebook Twitter Instagram
    ಟ್ರೆಂಡಿಂಗ್
    • ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
    • ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!
    • ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ
    • ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ
    • ಕೆರೆಯಲ್ಲಿ ಮುಳುಗಿ ಪಿಯುಸಿ ವಿದ್ಯಾರ್ಥಿ ಸಾವು: ಕಣ್ಣು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಅರ್ಜುನ್
    • ಅಖಿಲ ಭಾರತ ಪ್ರತಿಭಟನಾ ದಿನ : AIDSO
    • ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ
    • ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರಶಸ್ತಿಗಳು ಜವಾಬ್ದಾರಿಯನ್ನು ಹೆಚ್ಚಿಸುತ್ತವೆ : ಸಿಪಿಐ ಆರ್.ಪಿ.ಅನಿಲ್
    ಕೊರಟಗೆರೆ September 5, 2025

    ಪ್ರಶಸ್ತಿಗಳು ಜವಾಬ್ದಾರಿಯನ್ನು ಹೆಚ್ಚಿಸುತ್ತವೆ : ಸಿಪಿಐ ಆರ್.ಪಿ.ಅನಿಲ್

    By adminSeptember 5, 2025No Comments2 Mins Read
    r p anil

    ಕೊರಟಗೆರೆ: ಸಾಧನೆಯ ಪ್ರಶಸ್ತಿಗಳು ನಮ್ಮ ಜವಾಬ್ದಾರಿಯನ್ನು ಇನ್ನು ಹೆಚ್ಚಿಸುತ್ತದೆ ಅದನ್ನು ಉಳಿಸಿಕೊಳ್ಳುವ ಮತ್ತು ಬೆಳೆಸಿಕೊಳ್ಳುವ ಕರ್ತವ್ಯ ಮಹತ್ವವಾದದ್ದು ಎಂದು ರಾಷ್ಟ್ರಪತಿ ಪದಕ ಪುರಸ್ಕೃತ ಕೊರಟಗೆರೆ ಪೊಲೀಸ್ ಇಲಾಖೆಯ ಸಿಪಿಐ ಆರ್.ಪಿ.ಅನಿಲ್ ತಿಳಿಸಿದರು.

    ಕೊರಟಗೆರೆ ಪಟ್ಟಣದ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಂಘದ ಕಛೇರಿಯಲ್ಲಿ ಏರ್ಪಡಿಸಿದ್ದ ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತರಾದ ಸಿಪಿಐ ಆರ್.ಪಿ.ಅನಿಲ್ ರವರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಪೊಲೀಸ್ ಇಲಾಖೆಯಲ್ಲಿ ರಾಷ್ಟ್ರಪತಿ ಪ್ರಶಸ್ತಿ ಅತ್ಯುತ್ತಮವಾದುದು ಈ ಪ್ರಶಸ್ತಿ ರಾಜ್ಯದಲ್ಲಿ ಪ್ರತಿ ವರ್ಷ 37  ಮಂದಿಗೆ ಮಾತ್ರ ದೊರೆಯುತ್ತದೆ, ಇಂತಹ ಪ್ರಶಸ್ತಿಗಳಿಂದ ನಮ್ಮ ಮೇಲಿನ ಜವಾಬ್ದಾರಿ ಹೆಚ್ಚಾಗುತ್ತದೆ, ಕೊರಟಗೆರೆ ತಾಲೂಕಿನಲ್ಲಿ ಪೊಲೀಸ್ ಮತ್ತು ಪತ್ರಕರ್ತರ ಸಂಘ ಉತ್ತಮವಾಗಿ ಸ್ನೇಹಮಯವಾಗಿ ಕೆಲಸ ಮಾಡುತ್ತಿದೆ, ಎಷ್ಟೋ ಅಪಘಾತ ಕೊಲೆ ಪ್ರಕರಣಗಳಲ್ಲಿ ಪತ್ರಕರ್ತರು ಸಹಕಾರದಿಂದ ಪ್ರಕರಣಗಳು ಪತ್ತೆಯಾಗಲು ಸಹಕಾರಿಯಾಗಿದೆ, ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ರವರ ತವರು ಕ್ಷೇತ್ರದಲ್ಲಿ ಅವರ ಸಮ್ಮುಖದಲ್ಲಿ ಇಂತಹ ಪ್ರಶಸ್ತಿಯನ್ನು ಪಡೆಯುತ್ತಿರುವುದು ಹೆಮ್ಮೆ ಎನ್ನಿಸಿದೆ, ನನ್ನನ್ನು ಸನ್ಮಾನಿಸಿದ ತಾಲೂಕು ಕರ್ನಾಟಕ ಕಾರ್ಯನಿತರ ಪತ್ರಕರ್ತರ ಸಂಘಕ್ಕೆ ಧನ್ಯವಾದಗಳನ್ನು ತಿಳಿಸಿದರು.

    ತಹಶೀಲ್ದಾರ್ ಮಂಜುನಾಥ್ ಕೆ. ಮಾತನಾಡಿ, ಸಿಪಿಐ ಅನಿಲ್ ರವರ ಕಾರ್ಯದಕ್ಷತೆಯನ್ನು ನಾನು ಹಲವು ವರ್ಷಗಳ ಹಿಂದೆ ಬೆಂಗಳೂರಿನ ಶ್ರೀರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೋಡಿದ್ದೇನೆ, ಅನೇಕ ಠಾಣಾ ವ್ಯಾಪ್ತಿಗೆ ಬರದ ಪ್ರಕರಣಗಳನ್ನು ಸಹ ಪತ್ತೆಹಚ್ಚಿ ಇತ್ಯರ್ಥಗೊಳಿಸಿದ್ದಾರೆ, ಇತ್ತೀಚೆಗೆ ದೆಹಲಿ ಮಾದರಿಯಲ್ಲಿ ಅತ್ತೆಯನ್ನು ತುಂಡರಿಸಿ ತಾಲೂಕಿನ ಮೂಲೆ ಮೂಲೆಗೆ ಎಸೆದಿದ್ದ ವೈದ್ಯ ಅಳಿಯನ ಪ್ರಕರಣವನ್ನು ಸಿಪಿಐರವರು ಅವರ ತಂಡದೊಂದಿಗೆ ಕೆಲವೇ ದಿನಗಳಲ್ಲಿ ಭೇದಿಸಿ ಆರೋಪಿಯನ್ನು ಬಂಧಿಸಿದರು. ಆ ಪ್ರಕರಣ ಮಾಧ್ಯಮಗಳಲ್ಲಿ ಹೆಚ್ಚು ಪ್ರಚಾರ ಪಡೆಯಲೇ ಇಲ್ಲ, ಅಧಿಕಾರಿಗಳಿಗೆ ಯಾವುದೇ ಪ್ರಶಂಸೆ ಸಿಗಲಿ ಬಿಡಲಿ ಅವರ ಕರ್ತವ್ಯವನ್ನು ಮಾಡಿಯೇ ಮಾಡುತ್ತಾರೆ, ತಾಲೂಕಿನಲ್ಲೂ ಸಹ ನಾನು ಮತ್ತು ಅನಿಲ್ ರವರು ಭ್ರಾತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿದ್ದೇವೆ, ಕೊರಟಗೆರೆ ತಾಲೂಕಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಉತ್ತಮವಾಗಿ ಕೆಲಸ ಮಾಡಿಕೊಂಡು ಬರುತ್ತಿದ್ದು ಇಂದು ಆರ್.ಪಿ.ಅನಿಲ್ ರವರ ಗೌರವ ಸನ್ಮಾನ ಉತ್ತಮವಾದ ಕೆಲಸ ಎಂದರು.

    ಸಂಘದ ಅಧ್ಯಕ್ಷ ಕೆ.ವಿ.ಪುರುಷೋತ್ತಮ್ ಮಾತನಾಡಿ, ನಮ್ಮಗಳ ಹಲವು ವರ್ಷಗಳ ಪತ್ರಿಕಾ ಜೀವನದ ಬದುಕಿನಲ್ಲಿ ರಾಷ್ಟ್ರ ಪ್ರಶಸ್ತಿ ಪಡೆದ ಪೊಲೀಸ್ ಇಲಾಖೆಯ ಅಧಿಕಾರಿಯನ್ನು ಗೌರವಿಸುತ್ತಿರುವುದು ಸಂತಸ ತಂದಿದೆ, ಗೃಹ ಸಚಿವರ ತವರು ಕ್ಷೇತ್ರದಲ್ಲಿ ಅವರ ಇಲಾಖೆಯ ಅಧಿಕಾರಿಗಳ ಸಾಧನೆ ಗೃಹ ಸಚಿವರಿಗೆ ಹೆಮ್ಮೆ ತಂದುಕೊಡುತ್ತದೆ, ಇತ್ತೀಚಿನ ಪರಿಸ್ಥಿತಿಗಳಲ್ಲಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವುದು ಕಷ್ಟವಾಗಿದೆ. ಇಂತಹ ಪರಿಸ್ಥಿತಿಯಲ್ಲೂ ಸಾಧನೆಯ ಪ್ರಶಸ್ಥಿ ಪಡೆಯುವುದು ಸವಾಲಿನ ಸಂಗತಿಯಾಗಿದೆ, ನಮ್ಮ ತಾಲೂಕಿನ ಪೊಲೀಸ್ ಇಲಾಖೆಯ ವೃತ್ತ ಆರಕ್ಷಕ ನಿರೀಕ್ಷಕರಾದ ಅರ್.ಪಿ.ಅನಿಲ್ ರವರಿಗೆ ಗೌರವಿಸುತ್ತಿರುವುದು ಸಂಘದ ಕರ್ತವ್ಯವಾಗಿದ್ದು, ನಮ್ಮ ಸಂಘವು ಕರ್ತವ್ಯದೊಂದಿಗೆ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಸೇವೆಯಲ್ಲೂ ತೋಡಗಿಸಿಕೊಂಡಿದ್ದು ಕೊರಟಗೆರೆ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕಿನಲ್ಲಿ ತನ್ನದೇ ಅದ ಪ್ರತಿಷ್ಠೆ ಹಾಗೂ ಕೀರ್ತಿಯನ್ನು ಹೊಂದಿದೆ ಎಂದರು.

    ಕೊರಟಗೆರೆ ಪಿಎಸೈ ತೀರ್ಥೇಶ್ ಮಾತನಾಡಿ, ಅನಿಲ್‌ ರವರ ಕಾರ್ಯದಕ್ಷತೆ ನಮಗೆಲ್ಲಾ ಮಾರ್ಗದರ್ಶನವಾಗಿದೆ, ಸಣ್ಣಕೆಲಸವಾಗಲಿ ಅಥವಾ ದೊಡ್ಡ ಕೆಲಸವಾಗಲಿ ಅದನ್ನು ನಿಷ್ಠೆಯಿಂದ ಎಲ್ಲರ ಜೋತೆಗೂಡಿ ಮಾಡಿ ಮುಗಿಸುತ್ತಾರೆ, ಇಂತಹವರ ಜೋತೆಯಲ್ಲಿ ಮಾರ್ಗದರ್ಶನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದು ನನ್ನ ಸೌಭಾಗ್ಯವಾಗಿದ್ದು ಅವರಿಂದ ಕಲಿತು ಕೊಳ್ಳುವುದು ಹಾಗೂ ತಿಳಿದುಕೊಳ್ಳುವುದು ಸಾಕಷ್ಠು ಇದೆ ಎಂದರು.

    ಈ ಸಂದರ್ಭದಲ್ಲಿ ಪತ್ರಕರ್ತರ ಸಂಘದಿಂದ ಪ್ರಶಸ್ತಿ ಪುರಸ್ಕೃತ ಆರ್.ಪಿ.ಅನಿಲ್ ರವರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಗೃಹ ಸಚಿವರ ಆಪ್ತ ಸಹಾಯಕ ಅರವಿಂದ್, ಆರ್ ಐ ಬಸವರಾಜು, ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯದರ್ಶಿ ರಂಗಧಾಮಯ್ಯ, ನಿರ್ದೇಶಕ ಎನ್.ಮೂರ್ತಿ, ತಾಲೂಕು ಸಂಘದ ಉಪಾಧ್ಯಕ್ಷ ಹೆಚ್.ಎನ್.ನಾಗರಾಜು, ಪ್ರಧಾನ ಕಾರ್ಯದರ್ಶಿ ಎ.ಆರ್.ಚಿದಂಬರ, ಖಜಾಂಚಿ ಕೆ.ಬಿ.ಲೋಕೇಶ್, ನಿದೇಶಕರುಗಳಾದ ಎನ್.ಪದ್ಮನಾಭ್, ಸೊಗಡು ಶ್ರೀನಿವಾಸ್, ಜಿ.ಎಂ.ಶಿವಾನಂದ್, ಡಿ.ಎಂ.ರಾಘವೇಂದ್ರ, ಮಂಜುನಾಥ್, ಕೆ.ಎನ್.ಸತೀಶ್, ಬಿ.ಹೆಚ್.ಹರೀಶ್ ಬಾಬು, ನವೀನ್‌ ಕುಮಾರ್, ಕೆ.ಎಲ್.ಲಕ್ಷ್ಮೀಶ, ನರಸಿಂಹಮೂರ್ತಿ, ಲಕ್ಷ್ಮೀಕಾಂತ, ದೇವರಾಜು, ವಿಜಯ್‌ಶಂಕರ್, ಸತೀಶ್, ಮುತ್ತುರಾಜ್, ರಾಜು, ಬಾಬುನಾಯ್ಕ, ಮುಖಂಡ ವೀರಣ್ಣಗೌಡ ಸೇರಿದಂತೆ ಇನ್ನಿತರರು ಹಾಜರಿದ್ದರು.

    ವರದಿ:  ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    Comments are closed.

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

    October 12, 2026

    ಮೈಸೂರು: ದೇಶದಲ್ಲಿ ಪ್ರಜಾಪ್ರಭುತ್ವವಿದೆಯೇ ಅಥವಾ ತುರ್ತು ಪರಿಸ್ಥಿತಿಯೇ ಎಂಬುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಿಗೆ ಉತ್ತರ ನೀಡಬೇಕು…

    ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!

    October 12, 2026

    ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

    October 12, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.