nammatumakuru

    Subscribe to Updates

    Get the latest creative news from FooBar about art, design and business.

    What's Hot

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!

    July 13, 2026
    Facebook Twitter Instagram
    ಟ್ರೆಂಡಿಂಗ್
    • 14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR
    • ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ
    • ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!
    • ಸರಗೂರು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶಂಭುಮೂರ್ತಿ
    • ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ: ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್‌
    • ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!
    • ತುಮಕೂರು: ಎಸ್ ಐಆರ್ ಗೊಂದಲ, ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ
    • ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಷ್ಣುವರ್ಧನ್​​, ಸರೋಜಾ ದೇವಿ ಅವರಿಗೆ ಕರ್ನಾಟಕ ರತ್ನ ಘೋಷಿಸಿ: ಸಿಎಂ, ಡಿಸಿಎಂಗೆ ಕನ್ನಡದ ಹಿರಿಯ ನಟಿಯರಿಂದ ಮನವಿ
    ರಾಜ್ಯ ಸುದ್ದಿ September 6, 2025

    ವಿಷ್ಣುವರ್ಧನ್​​, ಸರೋಜಾ ದೇವಿ ಅವರಿಗೆ ಕರ್ನಾಟಕ ರತ್ನ ಘೋಷಿಸಿ: ಸಿಎಂ, ಡಿಸಿಎಂಗೆ ಕನ್ನಡದ ಹಿರಿಯ ನಟಿಯರಿಂದ ಮನವಿ

    By adminSeptember 6, 2025No Comments2 Mins Read
    siddaramaiah

    ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲಾ, ಶ್ರುತಿ ಮತ್ತು ಮಾಳವಿಕಾ ಅವಿನಾಶ್ ಅವರಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​​ ಅವರನ್ನು ಭೇಟಿ ಮಾಡಿ ದಿ.ನಟ ವಿಷ್ಣುವರ್ಧನ್ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

    ಮಂಗಳವಾರದಂದು ಟ್ವೀಟ್​ ಶೇರ್ ಮಾಡಿದ್ದ ಮುಖ್ಯಮಂತ್ರಿ, ”ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲ, ಶ್ರುತಿ ಮತ್ತು ಮಾಳವಿಕಾ ಅವಿನಾಶ್ ಅವರು ಇಂದು ನನ್ನನ್ನು ಭೇಟಿಯಾಗಿ ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು. ಇದೇ ವೇಳೆ, ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ.ಸರೋಜಾ ದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರಂನ ರಸ್ತೆಗೆ ನಾಮಕರಣ ಮಾಡುವಂತೆಯೂ ಮನವಿ ಮಾಡಿದರು” ಎಂದು ತಿಳಿಸಿದ್ದಾರೆ.

    ಇಂದು ಭೇಟಿಯ ಫೋಟೋಗಳನ್ನು ತಮ್ಮ ಅಧಿಕೃತ ಎಕ್ಸ್​​ ಖಾತೆಯಲ್ಲಿ ಹಂಚಿಕೊಂಡ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ”ಖ್ಯಾತ ನಟಿಯರಾದ ಜಯಮಾಲಾ, ಶ್ರುತಿ ಹಾಗೂ ಮಾಳವಿಕಾ ಅವಿನಾಶ್ ಅವರು ಇಂದು ನನ್ನನ್ನು ಗೃಹ ಕಚೇರಿಯಲ್ಲಿ ಭೇಟಿಯಾಗಿ, ಮೇರು ನಟ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಹಾಗೂ ಅವರ ಸ್ಮಾರಕ ನಿರ್ಮಾಣ ಸಂಬಂಧ ಮನವಿ ಸಲ್ಲಿಸಿದರು. ಇದೇ ವೇಳೆ, ಇತ್ತೀಚೆಗೆ ನಿಧನರಾದ ನಟಿ ಬಿ.ಸರೋಜಾ ದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರಂನ ರಸ್ತೆಗೆ ನಾಮಕರಣ ಮಾಡುವಂತೆಯೂ ಮನವಿ ಮಾಡಿದರು” ಎಂದು ಬರೆದುಕೊಂಡಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ  ನಟಿ ಮಾಳವಿಕಾ ಅವಿನಾಶ್, ಇತ್ತೀಚೆಗೆ, ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ್ದೆವು. ವಿಷ್ಣುವರ್ಧನ್ ಹಾಗೂ ಸರೋಜಾ ದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸುವಂತೆ ಮನವಿ‌ ಮಾಡಿದ್ದೆವು. ಭರವಸೆ ಕೊಟ್ಟಿದ್ದಾರೆ. ಏನು ಮಾಡಬೇಕೋ ಅದನ್ನು ಮಾಡುತ್ತೇವೆಂದು ತಿಳಿಸಿದ್ದರು. ಇದೀಗ ಉಪಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದ್ದೇವೆ. ಇಬ್ಬರೂ ಮನವಿಗೆ ಸ್ಪಂದಿಸಿದ್ದಾರೆ ಎಂದಿದ್ದಾರೆ.

    ಇತ್ತೀಚೆಗೆ ನಟಿ ಭಾರತಿ ವಿಷ್ಣುವರ್ಧನ್ ಹಾಗೂ ಅಳಿಯ ಅನಿರುದ್ಧ್ ಜತ್ಕರ್ ಅವರು ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ 10 ಗುಂಟೆ ಜಾಗವನ್ನು ಮೀಸಲಿಡಬೇಕು. ವಿಷ್ಣು ಹುಟ್ಟುಹಬ್ಬದೊಳಗೆ ಸರ್ಕಾರ ಭೂಮಿಗೆ ಅನುಮತಿ ನೀಡಬೇಕು. ವಿಷ್ಣುವರ್ಧನ್ ಅವರಿಗೆ ‘ಕರ್ನಾಟಕ ರತ್ನ’ ಘೋಷಿಸಬೇಕೆಂದು ಮನವಿ ಮಾಡಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!

    July 13, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಹುಬ್ಬಳ್ಳಿ: 14 ವರ್ಷದ ಅಪ್ರಾಪ್ತ ಬಾಲಕಿಯೋರ್ವಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಬೆರಗುಗೊಳಿಸುವ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಈ…

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!

    July 13, 2026

    ಸರಗೂರು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶಂಭುಮೂರ್ತಿ

    July 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.