ಮಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ಹೇಳಿದ್ದ ಸಾಕ್ಷಿ ದೂರುದಾರ ಸಿ.ಎನ್.ಚಿನ್ನಯ್ಯ ಅಲಿಯಾಸ್ ಚೆನ್ನನ ಎಸ್ ಐಟಿ ಕಸ್ಟಡಿ ನಿನ್ನೆಗೆ ಅಂತ್ಯವಾಗಿದ್ದು, ಈ ಹಿನ್ನೆಲೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ನ್ಯಾಯಾಲಯ ಶನಿವಾರ ಆದೇಶ ಹೊರಡಿಸಿದೆ.
ಭದ್ರತೆ ದೃಷ್ಟಿಯಿಂದ ಶಿವಮೊಗ್ಗ ಸೆಂಟ್ರಲ್ ಜೈಲಿಗೆ ಚಿನ್ನಯ್ಯನನ್ನು ಎಸ್ ಐಟಿ (SIT) ಪೊಲೀಸರು ಸ್ಥಳಾಂತರಿಸಿದ್ದಾರೆ.
ಅತ್ತ ನ್ಯಾಯಾಂಗ ಬಂಧನಕ್ಕೊಳಗಾಗುತ್ತಿದ್ದಂತೆ ಇತ್ತ ಉಚಿತ ಕಾನೂನು ಸೇವೆಗಳ ಪ್ರಾಧಿಕಾರ ನೇಮಿಸಿದ್ದ ಚಿನ್ನಯ್ಯ ಪರ ವಕೀಲರಿಂದ ಜಾಮೀನು ಕೋರಿ ಬೆಳ್ತಂಗಡಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಸೆಪ್ಟೆಂಬರ್ 9ಕ್ಕೆ ಮುಂದೂಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


