ಸರಗೂರು: ಇಂದಿನ ಯುವ ಪೀಳಿಗೆಗೆ ನಾರಾಯಣ ಗುರುಗಳ ಮಾರ್ಗದರ್ಶನ ಅತ್ಯಗತ್ಯ. ಅವರ ತತ್ವಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಯಶಸ್ವಿ ಆಗಬೇಕು’ ಎಂದು ಆರ್ಯ ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಎಸ್.ಎನ್. ನಾಗರಾಜು ಸಲಹೆ ನೀಡಿದರು.
ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಭಾನುವಾರದಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಹಾಗೂ ನಾರಾಯಣ ಗುರುಗಳ ಫೋಟೋಗೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
ರಕ್ತ ಕ್ರಾಂತಿ ಇಲ್ಲದೆ, ತಮ್ಮ ವಿಚಾರಗಳ ಮೂಲಕವೇ ಸಮಾಜ ಪರಿವರ್ತನೆಗೆ ಕಾರಣರಾದವರು ಬ್ರಹ್ಮಶ್ರೀ ನಾರಾಯಣ ಗುರುಗಳು, ಶತಮಾನದ ಹಿಂದೆ ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುತ್ತಿದ್ದ ಜನರಿಗೆ ನ್ಯಾಯ ಒದಗಿಸಿಕೊಟ್ಟವರು ನಾರಾಯಣ ಗುರುಗಳು. ಅವರ ವಿಚಾರಗಳನ್ನು ಮುಂದಿನ ಪೀಳಿಗೆಗೂ ತಲುಪಿಸುವ ಕೆಲಸವಾಗಬೇಕು ಎಂದರು.
ಪ್ರಾಸ್ತಾವಿಕ ನುಡಿ ವರ್ತಕರ ಮಂಡಳಿ ಮಾಜಿ ಅಧ್ಯಕ್ಷ ಎಸ್.ಎಂ.ಶ್ರೀನಿವಾಸ ಮಾತನಾಡಿ ‘ಶೋಷಿತ ವರ್ಗದವರಿಗೆ ಶಕ್ತಿ ತುಂಬಿದ ಮಹಾನ್ ಮಾನವತಾವಾದಿ ನಾರಾಯಣ ಗುರುಗಳು, ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಜೀವನದುದ್ದಕ್ಕೂ ಪಾಲಿಸೋಣ ಎಂದರು.
‘ಸಮಾನತೆ ಸಂದೇಶ ಸಾರಿದ್ದ ನಾರಾಯಣ ಗುರು ಸ್ಮರಣೀಯರು’‘ಸಮಾನತೆ ಸಂದೇಶ ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜಮುಖಿ ಕೆಲಸ ಮಾಡುವವರಿಗೆ ಆದರ್ಶ’ ಎಂದು ಹೇಳಿದರು
ಪಪಂ ಅಧ್ಯಕ್ಷೆ ರಾಧಿಕಾ ಶ್ರೀನಾಥ್ ಮಾತನಾಡಿ, ಕೇರಳದಲ್ಲಿ ಕಮ್ಯುನಿಸ್ಟರ ನಡುವೆ ಸನಾತನ ಸಂಸ್ಕೃತಿಯನ್ನು ಪಸರಿಸಿದ ಕೀರ್ತಿ ನಾರಾಯಣ ಗುರುಗಳಿಗೆ ಸಲ್ಲುತ್ತದೆ. ಕರಾವಳಿ ಭಾಗದಲ್ಲೂ ಬಡ ಜನರ ಉದ್ಧಾರಕ್ಕೆ ಅವರು ಭದ್ರ ಬುನಾದಿ ಹಾಕಿ ಕೊಟ್ಟರು ಎಂದು ತಿಳಿಸಿದರು.
ಮುಖ್ಯ ಭಾಷಣಕಾರರಾಗಿ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಹಾಲಪ್ಪ ಅವರು ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸುವಲ್ಲಿ ನಾರಾಯಣ ಗುರುಗಳು ನಡೆಸಿದ ಹೋರಾಟ ಸ್ಮರಣೀಯ’ ಎಂದರು.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಳಿಯೂರು ಶಿಕ್ಷಕ ರಂಗನಾಥ ನಿರೂಪಣೆ ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಗ್ರೇಟ್ 2 ತಹಶೀಲ್ದಾರ್ ಪರಶಿವಮೂರ್ತಿ,ಪಪಂ ಸದಸ್ಯರು ನೂರಳಾಸ್ವಾಮಿ, ಚೈತ್ರ ಸ್ವಾಮಿ, ಚೆಲುವ ಕೃಷ್ಣ, ಸಮಾಜದ ಕಾರ್ಯಾಧ್ಯಕ್ಷ ತಿಮ್ಮೇಗೌಡ, ಸಮಾಜದ ಯಜಮಾನ ವೆಂಕಟೇಶ್, ಖಜಾಂಚಿ ಟಿ ಕರಿಯಪ್ಪ,ರವಿ, ಗುತ್ತಿಗೆದಾರು ಶ್ರೀನಿವಾಸ, ಲೋಕನಾಥ್, ಎಸ್ ಎಸ್ ಬಸವರಾಜು, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎಂ.ಕೆಂಡಗಣ್ಣಸ್ವಾಮಿ, ಕ್ರೈಂ ಬ್ರಾಂಚ್ ಇನ್ ಸ್ಪೆಕ್ಟರ್ ಗೋಪಾಲ್, ಕಚೇರಿ ಸಿಬ್ಬಂದಿ ವರ್ಗದವರು ಮನೋಹರ್, ರವಿಚಂದ್ರನ್, ಮುಜೀಬ್, ಷರೀಫ್, ಕುಮಾರ್, ಸುಷ್ಮಿತಾ ಇನ್ನೂ ಮುಖಂಡರು ಸೇರಿದಂತೆ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


