ದಾವಣಗೆರೆ: ಜಿಲ್ಲೆಯಲ್ಲಿ ಬೀದಿ ನಾಯಿಗಳ ಉಪಟಳಕ್ಕೆ ಸಾರ್ವಜನಿಕರು ಕಂಗಾಲಾಗಿದ್ದಾರೆ. ಹೊನ್ನಾಳಿ ತಾಲೂಕಿನ ಮಾವಿನ ಕೋಟೆ ಮತ್ತು ಸಾಸ್ವೆಹಳ್ಳಿಯಲ್ಲಿ ಐವರ ಮೇಲೆ ಬೀದಿನಾಯಿಗಳು ಮಾರಣಾಂತಿಕವಾಗಿ ದಾಳಿ ನಡೆದಿದೆ.
ಮಾವಿನಕೋಟೆಯಲ್ಲಿ ಓರ್ವ ವೃದ್ಧ, ಮೂವರು ಮಕ್ಕಳು ಹಾಗೂ ಸಾಸ್ವೆಹಳ್ಳಿಯ ಓರ್ವ ಬಾಲಕನ ಮೇಲೆ ನಾಯಿಗಳು ದಾಳಿ ಮಾಡಿವೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಬೀದಿ ನಾಯಿಗಳ ಸಂಖ್ಯೆ ಮೀತಿಮೀರುತ್ತಿದೆ. ಗ್ರಾಮ ಪಂಚಾಯತ್ ಮಾತ್ರ ಕಣ್ಮುಚ್ಚಿ ಕುಳಿತಿದೆ ಎಂದು ಗ್ರಾಮ ಪಂಚಾಯತ್ ಸಿಬ್ಬಂದಿ ಹಾಗೂ ಸದಸ್ಯರ ವಿರುದ್ಧ ಗ್ರಾಮಸ್ಥರೊಬ್ಬರು ಆಕ್ರೋಶ ವ್ಯಕ್ತಪಡಿಸಿದರು. ತ್ವರಿತ ಕ್ರಮಕ್ಕೆ ಮುಂದಾಗದಿದ್ದರೆ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


