ಸರಗೂರು: ಜೆಡಿಎಸ್ ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡುತ್ತಿದ್ದೇವೆ ಎಂದು ಜೆಡಿಎಸ್ ಮುಖಂಡ ಕೆ.ಎಂ. ಕೃಷ್ಣನಾಯಕ ತಿಳಿಸಿದರು.
ತಾಲೂಕಿನ ಸಮೀಪದ ಬೀರಂಬಳ್ಳಿ ಗ್ರಾಮಕ್ಕೆ ಸೋಮವಾರದಂದು ಭೇಟಿ ನೀಡಿ ಅಂಬೇಡ್ಕರ್ ಪ್ರತಿಮೆ ಜೀರ್ಣೋದ್ಧಾರ ಮಾಡಲು ಮುಂದಾಗಿರುವ ಗ್ರಾಮಸ್ಥರಿಗೆ ಜೆಡಿಎಸ್ ಪಕ್ಷದ ಮುಖಂಡ ಕೆ.ಎಂ.ಕೃಷ್ಣನಾಯಕ ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ 25 ಸಾವಿರ ಧನ ಸಹಾಯ ಮಾಡಿ ನಂತರ ಮಾತನಾಡಿದರು.
ತಾಲೂಕಿನಲ್ಲಿ ಜೆಡಿಎಸ್ ಸಂಘಟಿಸುವ ನಿಟ್ಟಿನಲ್ಲಿ ಪಕ್ಷದ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡಗಳ ಸಮ್ಮುಖದಲ್ಲಿ ವಿವಿಧ ಗ್ರಾಮಗಳಿಗೆ ಭೇಟಿ ನೀಡುತ್ತಿದ್ದೇನೆ ಎಂದ ಅವರು, ಕೋಟೆಗೆ ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರ ಸ್ವಾಮಿ ಆಗಮಿಸಲಿದ್ದು, ಬೃಹತ್ ವೇದಿಕೆ ‘ಕಾರ್ಯಕ್ರಮ ಆಯೋಜಿಸಲಾಗುವುದು. ಕಾರ್ಯಕ್ರಮದಲ್ಲಿ ಸಾವಿರಾರು ಕಾಂಗ್ರೆಸ್ — ಕಾರ್ಯಕರ್ತರು ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಮತ್ತಷ್ಟು ಸಂಘಟಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದರು.
ತಾ.ಪಂ., ಜಿ.ಪಂ. ಚುನಾವಣೆ ಬರುವುದರಿಂದ ಜೆಡಿಎಸ್ ಪಕ್ಷವನ್ನು ಬಲಗೊಳಿಸಲು ತಾಲೂಕಿನ ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ ಪಕ್ಷವನ್ನು ಅಧಿಕಾರಕ್ಕೆ ತರಲು ಮುಂದಾಗಿ ತಾಲೂಕಿನ ಜನತೆಗೆ ಸೇವೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.
ಈ ವೇಳೆ ಕೃಷ್ಣನಾಯಕ ಅವರನ್ನು ಗ್ರಾಮಸ್ಥರು ಸನ್ಮಾನಿಸಿದರು. ಸರಗೂರು ತಾಲೂಕು ಜೆಡಿಎಸ್ ಅಧ್ಯಕ್ಷ ಗೋಪಾಲ ಸ್ವಾಮಿ, ಯುವ ಮುಖಂಡ ಚರಣ್, ಹೆಗ್ಗನೂರು ಗ್ರಾಪಂ ಸದಸ್ಯ ಹಾಗೂ ಒಕ್ಕಲಿಗ ಸಂಘದ ತಾಲೂಕು ಅಧ್ಯಕ್ಷ ಸುಧೀರ್, ವಕೀಲರಾದ ಯೋಗೇಶ್, ಪ್ರಶಾಂತ್, ಗ್ರಾಮದ ಯಜಮಾನರು ರಮೇಶ್, ಕಾಳಯ್ಯ, ಬಸವರಾಜು ಹಾಗೂ ಗ್ರಾಮಸ್ಥರು ಹನುಮಯ್ಯ, ರಾಜಯ್ಯ, ದಾಸರಾಜು, ಶೇಖರ್, ಶಿವಣ್ಣ, ಜಯಣ್ಣ, ಶ್ಯಾಮಸುಂದರ್, ಶಿವಯ್ಯ, ನಾಗರಾಜು, ಜಯಸೂರ್ಯ, ರವಿ, ಚನ್ನಪ್ಪಾಜಿ, ಕೃಷ್ಣಮೂರ್ತಿ, ನಿಂಗರಾಜು ಡಾ.ರಾಮರಾಜು ಹಾಗೂ ಗ್ರಾಮಸ್ಥರೆಲ್ಲರೂ ಉಪಸ್ಥಿತರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


