ಬೀದರ್: ಕರ್ನಾಟಕ ಸರ್ಕಾರವು ಪೊಲೀಸ್ ಇಲಾಖೆಯು, ಪೊಲೀಸ್ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ, ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಅವರ ಕುಂದುಕೊರತೆಗಳನ್ನು ಪರಿಹರಿಸಲು ಮುಂದಾಗಿದೆ.
ಪೊಲೀಸರು ಜನಸ್ನೇಹಿ ಪೊಲೀಸರಾಗಿ ಕೆಲಸ ಮಾಡಲು, ಸಾರ್ವಜನಿಕರು ಮತ್ತು ಪೊಲೀಸ್ ಇಲಾಖೆಯ ನಡುವೆ ವಿಶ್ವಾಸ ವೃದ್ಧಿಸಲು, ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ನೇರವಾಗಿ ಪೊಲೀಸ್ ಸಿಬ್ಬಂದಿಯ ಗಮನಕ್ಕೆ ತರಲು ಮತ್ತು ಪರಿಹಾರ ಕಂಡುಕೊಳ್ಳಲು ಮನೆ ಮನೆಗೆ ಪೊಲೀಸ್ ಯೋಜನೆಯನ್ನು ಜಾರಿಗೆ ಬಂದಿರುತ್ತದೆ.
ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ನೀಡಿದ ನಿರ್ದೇಶನದಂತೆ ಸಂತಪೂರ ಪೊಲೀಸ್ ಠಾಣೆ ಪಿಎಸ್ ಐ ನಂದಕುಮಾರ ತಮ್ಮ ಠಾಣೆಯ ಸಿಬ್ಬಂದಿಯೊಂದಿಗೆ ತಮ್ಮ ಠಾಣಾ ವ್ಯಾಪ್ತಿಯ ಗ್ರಾಮಗಳಿಗೆ, ಓಣಿಗಳಿಗೆ ಭೇಟಿ ನೀಡಿ, ಅವರ ಕುಂದು ಕೊರತೆಗಳನ್ನು ಆಲಿಸಿ, ಮನೆ ಮನೆಗೆ ಪೊಲೀಸ್ ಯೋಜನೆ ಅನುಷ್ಠಾನದ ಕುರಿತು ಭಿತ್ತಿ ಪತ್ರವನ್ನು ಹಂಚುವ ಮೂಲಕ ಅರಿವು ಮೂಡಿಸಿದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


