ಬೀದರ್: ಜಿಲ್ಲೆಯ ಔರಾದ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗುಂಡಪ್ಪ ವಕೀಲ್ ಅವರು ಡಿಜಿಟಲ್ ಅರೆಸ್ಟ್ 30 ಲಕ್ಷ ರೂ. ಹಣ ಕಳೆದುಕೊಂಡಿದ್ದಾರೆ ಘಟನೆ ಸಂಬಂಧ ಬೆಂಗಳೂರು ಸಿಸಿಬಿ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಸಿಬಿಐ, ಇ.ಡಿ. ಹಾಗೂ ಜಡ್ಜ್ ಹೆಸರಿನಲ್ಲಿ ವಂಚಕರು ಮಾಜಿ ಶಾಸಕರಿಂದ ಹಂತ ಹಂತವಾಗಿ 30 ಲಕ್ಷ ರೂ. ಹಣವನ್ನು ವರ್ಗಾಯಿಸಿಕೊಂಡಿದ್ದಾರೆ
ಆಗಸ್ಟ್ 12ರಂದು ಸಿಬಿಐ ಆಫೀಸರ್ ಎಂದು ಕರೆ ಮಾಡಿದ್ದ ಆನ್ ಲೈನ್ ವಂಚಕರು ನೀವು ನರೇಶ್ ಗೋಯಲ್ ಮನಿ ಲಾಂಡರಿಂಗ್ ಕೇಸ್ ನಲ್ಲಿ ಭಾಗಿಯಾಗಿದ್ದೀರಿ ನರೇಶ್ ಗೋಯಲ್ ಜೊತೆ ಅಕ್ರಮ ವ್ಯವಹಾರ ಮಾಡಿದ್ದೀರಿ ಎಂದು ಹೆದರಿಸಿದ್ದರು.
ಆ.13ರಂದು ಸಿಬಿಐ ಡಿಸಿಪಿ ಎಂದು ಮತ್ತೋರ್ವ ಕರೆ ಮಾಡಿ, ನೀವು ಡಿಜಿಟಲ್ ಅರೆಸ್ಟ್ ಆಗಿದ್ದೀರಿ, ಕಾಲ್ ಕಟ್ ಮಾಡಬೇಡಿ ಎಂದು ಭಯಪಡಿಸಿದ್ದ ಬಳಿಕ ಆನ್ ಲೈನ್ ನಲ್ಲಿ ಫೇಕ್ ಜಡ್ಜ್ ಮುಂದೆ ಹಾಜರುಪಡಿಸಿದ್ದ ಖದೀಮರು ಕೋರ್ಟ್ ಹಾಲ್ ರೀತಿ ಸೆಟಪ್ ಮಾಡಿ ನಂಬಿಕೆ ಹುಟ್ಟಿಸಿದ್ದರು.
ನಮ್ಮದು ತಪ್ಪಿಲ್ಲ ಎಂದು ಮುಚ್ಚಳಿಕೆ ಬರೆದುಕೊಡಿ ಎಂದು ಮೊದಲು 10 ಲಕ್ಷ ರೂ. ಹಣ ವರ್ಗಾಯಿಸಿಕೊಂಡಿದ್ದರು. ಬಳಿಕ ಪ್ರಾಪರ್ಟಿ ತನಿಖೆ ಮಾಡಬೇಕೆಂದು 20 ಲಕ್ಷ ರೂ. ಡೆಪಾಸಿಟ್ ಮಾಡಿಸಿಕೊಂಡಿದ್ದರು. ಹೀಗೆ ಆನ್ ಲೈನ್ ವಂಚಕರ ಮಾತು ನಂಬಿ ಹಂತ — ಹಂತವಾಗಿ 30.99 ಲಕ್ಷ ರೂ. ಹಣ ವರ್ಗಾವಣೆ ಮಾಡಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


