ಮದ್ದೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲ ಮುಸಲ್ಮಾನರ ಕಡೆಗೆ ಹೆಚ್ಚಾಗಿರುವುದರಿಂದ ಅವರನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ನಾಲಿಗೆ ಹರಿಯಬಿಟ್ಟಿದ್ದಾರೆ.
ಪಟ್ಟಣದಲ್ಲಿ ಸಾಮೂಹಿಕ ಗಣೇಶ ವಿಸರ್ಜನಾ ಮೆರವಣಿಗೆ ಅಂಗವಾಗಿ ಬುಧವಾರ ಏರ್ಪಡಿಸಿದ್ದ ವೇದಿಕೆ ಕಾರ್ಯಕ್ರಮದಲ್ಲಿ ರಾಜಕೀಯ ಭಾಷಣ ಮಾಡಿದ ಅವರು, ಕರ್ನಾಟಕವನ್ನ ಇಟಲಿ ಸರ್ಕಾರ, ತಾಲಿಬಾನ್ ಸರ್ಕಾರ, ಮುಲ್ಲಾ ಸರ್ಕಾರ ಆಗಲು ಬಿಡಲ್ಲ ಎಂದ ಅವರು, ರಾಜ್ಯ ಸರ್ಕಾರ ಧರ್ಮಸ್ಥಳ ಮತ್ತು ಚಾಮುಂಡೇಶ್ವರಿ ದೇಗುಲಕ್ಕೆ ಕಳಂಕ ತರಲು ಯತ್ನಿಸಿತು. ಇದೀಗ ಗಣೇಶ ಉತ್ಸವದ ವೇಳೆ ದಾಳಿ ನಡೆಸಿದವರನ್ನು ರಕ್ಷಿಸಲು ಹೊರಟಿದೆ. ಮುಸ್ಲಿಮರ ಓಲೈಸುತ್ತಿರುವ, ಮುಸಲ್ಮಾನರಿಗೆ ಹೆಚ್ಚು ಬೆಂಬಲ ನೀಡುತ್ತಿರುವ ಸಿದ್ದರಾಮಯ್ಯ ಅವರನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕೆಂದು ಹೇಳಿದ್ದಾರೆ.
ರಾಜ್ಯ ಸರ್ಕಾರ ಇದೀಗ ಡಿಜೆ ಬ್ಯಾನ್ ಮಾಡಿದ್ದಾರೆ, ಮುಂದೆ ಮಸೀದಿ ಎದುರು ಗಣೇಶ ಮೂರ್ತಿ ಮೆರವಣಿಗೆಯನ್ನೂ ಬ್ಯಾನ್ ಮಾಡಿ ಕೊನೆಗೆ ಗಣಪತಿ ಹಬ್ಬವನ್ನೇ ನಿಷೇಧಿಸುತ್ತಾರೆ. ಹಿಂದೂ ಸಂಘಟನೆಗಳ ಹೋರಾಟ ರಾಷ್ಟ್ರಮಟ್ಟದಲ್ಲಿ ಗಮನಸೆಳೆಯುತ್ತಿದೆ. ಇದಕ್ಕೇ ಮಂಡ್ಯ ಅಂದ್ರೆ ಇಂಡಿಯಾ ಅನ್ನೋದು ಎಂದರು.
ಮದ್ದೂರು ಜನರು ಸಿದ್ದರಾಮಯ್ಯ, ಡಿಕೆಶಿ ಅವರಿಗೆ ಬೆಂಬಲ ನೀಡುತ್ತಿದ್ದರೆ ಅವರು ನಿಮ್ಮ ತಲೆ ಮೇಲೆ ವಡೆ ತಟ್ಟುತ್ತಾರೆ. ಡಿಕೆಶಿ ಮಂಡ್ಯದವರನ್ನ್ನು ಛತ್ರಿಗಳು ಎಂದಿದ್ದರು. ಈಗ ತಮ್ಮ ಛತ್ರಿ ಕೆಲಸ ತೋರಿಸಿದ್ದಾರೆ. ಇದು ಹಿಂದೂಗಳ ದೇಶ, ಹಿಂದೂಗಳ ಭೂಮಿ. ನೀವು ಪಾಕಿಸ್ತಾನಕ್ಕೆ ಜೈ ಎಂದರೆ, ನಿಮ್ಮ ಹೆಡೆಮುರಿ ಕಟ್ಟಿ ಪಾಕಿಸ್ತಾನಕ್ಕೆ ಕಳುಹಿಸುತ್ತೇವೆ. ಸಿದ್ದರಾಮಯ್ಯ ಮುಲ್ಲಾಗಳ ಟೋಪಿ ಹಾಕಿಕೊಂಡು ಹಿಂದೂಗಳಿಗೆ ಟೋಪಿ ಹಾಕುತ್ತಾರೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC