ತುರುವೇಕರೆ: ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧ ಪಕ್ಷದ ಟೀಕೆ ಟಿಪ್ಪಣಿಗಳಿದ್ದರು ಗ್ಯಾರಂಟಿ ಯೋಜನೆಯಿಂದ ಲಕ್ಷಾಂತರ ಬಡಜನರಿಗೆ ಅನುಕೂಲವಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು.
ಪಟ್ಟಣದ ತಾಲೂಕು ಕಚೇರಿ ಆಚರಣದಲ್ಲಿ ಜಿಲ್ಲಾಡಳಿತ ಹಾಗೂ ಪಟ್ಟಣ ಪಂಚಾಯತಿ ವತಿಯಿಂದ ನೂತನವಾಗಿ ನಿರ್ಮಾಣವಾಗಿರುವ ಇಂದಿರಾ ಕ್ಯಾಂಟೀನ್ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ರಾಜ್ಯ ಕಾಂಗ್ರೇಸ್ ಸರ್ಕಾರ ಬಡ ಜನತೆಯ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿ ಮಾಡಿದೆ. ಬಡವ, ಶ್ರೀಮಂತ, ಜಾತಿ, ಧರ್ಮ ಹಾಗೂ ಪಕ್ಷ ರಹಿತವಾಗಿ ಗೃಹ ಲಕ್ಷ್ಮೀ ಹಣ 2 ಸಾವಿರ ಹಣ ನೀಡುತ್ತಿದ್ದೇವೆ. ಹಣ ಉಳ್ಳವರು ನಾವು ಕೇಳಿದ್ದೇವಾ ಎಂಬ ಮಾತು ಆಡಬಹುದು ಆದರೆ ಬಡ ಹೆಣ್ಣು ಮಕ್ಕಳಿಗೆ ಬಹಳ ಅನುಕೂಲವಾಗಿದೆ ಎಂದರು.
ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ 2003ರಲ್ಲಿ ಬಡ ಕೂಲಿ ಕಾರ್ಮಿಕರಿಗೆ ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬೆಂಗಳೂರು ನಗರದಲ್ಲಿ 5 ರೂ. ತಿಂಡಿ, 10 ರೂ ಊಟ ನೀಡುವಂತಹ ಇಂದಿರಾ ಕ್ಯಾಂಟೀನ್ ತೆರೆಯಲಾಯಿತು. ನಂತರ ಶಾಸಕರ ಒತ್ತಾಯದ ಮೇರೆಗೆ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲಾಯಿತು. ಇಂದು ದಿನ ನಿತ್ಯ ಸಾವಿರಾರು ಜನರ ಹಸಿವು ನೀಗಿಸುವ ಕೆಲಸ ಮಾಡುತ್ತಿದೆ ಎಂದರು.
ದಿನಾಲೂ ರುಚಿ, ಶುಚಿ ಇರಬೇಕು, ನಾವು ಬಂದಿದ್ದೀವಿ ಎಂದು ಇವತ್ತು ಇಲ್ಲಿ ಕೇಸರಿ ಬಾತ್ ಚೆನ್ನಾಗಿ ರುಚಿಯಾಗಿ ಮಾಡಿದ್ದೀರಿ. ಪ್ರತಿ ದಿನ ಇದೇ ರೀತಿ ರುಚಿಯಾಗಿ ಇರಬೇಕು. ಇಲ್ಲವಾದರೇ ಗುತ್ತಿಗೆಯನ್ನು ರದ್ದು ಮಾಡುವ ಎಚ್ಚರಿಕೆ ನೀಡಿದ ಅವರು, ನನಗೆ ಮಾಹಿತಿ ನೀಡಿದ ಪ್ರಕಾರ ಪ್ರತಿ ದಿನ ಬೆಳಿಗ್ಗೆ ತಿಂಡಿ 200, ಮಧ್ಯಾಹ್ನ ಊಟ 200, ರಾತ್ರಿ ಊಟ 200 ಜನರಿಗೆ ಸೇರಿ ಒಟ್ಟು 600 ಜನರಿಗೆ ನೀಡಲಾಗುವುದು ಎಂದು ತಿಳಿಸಲಾಗಿದೆ. ಇನ್ನು ಹೆಚ್ಚು ಜನರಿಗೆ ನೀಡಲು ಸರ್ಕಾರಕ್ಕೆ ಪ್ರಸ್ಥಾವನೆ ಸಲ್ಲಿಸಬೇಕು ಎಂದು ತಿಳಿಸಿದರು.
ಶಾಸಕ ಎಂ.ಟಿ.ಕೃಷ್ಣಪ್ಪ ಮಾತನಾಡಿ, ಪ್ರತಿ ದಿನ ಉತ್ತಮವಾದ ತಿಂಡಿ, ಊಟವನ್ನು ನೀಡಬೇಕು. ಈ ಯೋಜನೆಯಿಂದ ಕೂಲಿ ಕಾರ್ಮಿಕರಿಗೆ ಬಹಳ ಅನುಕೂಲವಾಗಲಿದೆ. ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಜನರು ಸದುಪಯೋಗ ಪಡಿಸಿಕೊಳ್ಳಲಿ ಎಂದ ಅವರು, ಸರಿಯಾದ ಕ್ಯಾಲಿಟಿ ಆಹಾರ ನೀಡದಿದ್ದರೇ, ಜನರು ದೂರು ನೀಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಇದೇ ವೇಳೆ ಸರ್ಕಾರಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲಿಸಲಾಗ್ತಿಲ್ಲ ಎಂದು ಅವರು ಆರೋಪಿಸಿದರು.
ಈ ವೇಳೆ ವಿಧಾನ ಪರಿಷತ್ ಮಾಜಿ ಸದಸ್ಯರಾದ ಬೆಮೆಲ್ ಕಾಂತರಾಜು, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು, ತಿಪಟೂರು ಉಪವಿಭಾಗಧಿಕಾರಿ ಸಪ್ತಶ್ರೀ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC