ಸರಗೂರು: ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮದಲ್ಲಿ ಹೆಗ್ಗಡೆ ದೇವನ ಕೋಟೆಯ ಕನಕ ಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಸರಗೂರಿನ ಅನುದಾನ ರಹಿತ ಶಾಲೆಯಾದ ಲಯನ್ಸ್ ಅಕಾಡೆಮಿ ಶಾಲೆಯ ಮುಖ್ಯ ಶಿಕ್ಷಕ ಬಿ.ಡಿ. ದಾಸಾಚಾರಿ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಶಿಕ್ಷಣ ಇಲಾಖೆಯ ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಸರ್ಕಾರಿ ಶಿಕ್ಷಕರಂತೆ ಅನುದಾನ ರಹಿತ ಶಾಲಾ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿರುವುದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಗೌರವವನ್ನು ಹೆಚ್ಚಿಸಿದೆ ಎಂದು ಅವರು ತಿಳಿಸಿದರು.
ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆಯನ್ನು ಮಾಡುತ್ತಿರುವ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜುರವರು ಸರ್ಕಾರಿ ಅನುದಾನಿತ ಶಾಲೆಗಳಂತೆಯೇ ಅನುದಾನ ರಹಿತ ಶಾಲೆಗಳು ಕೂಡ ತಾಲೂಕಿನ ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚು ಒತ್ತನ್ನು ನೀಡುತ್ತಿದ್ದು, ಅಲ್ಲಿನ ಶಿಕ್ಷಕರು ನಮ್ಮ ಶಿಕ್ಷಕರೇ ಎಂಬ ಸಮಾನ ಮನೋಭಾವವನ್ನು ಹೊಂದಿರುವುದು ನಮ್ಮ ಹೆಗ್ಗಳಿಕೆ ಎಂದು ಪ್ರಶಸ್ತಿ ಪಡೆದ ಲಯನ್ಸ್ ಅಕಾಡೆಮಿ ಶಾಲೆಯ ಮುಖ್ಯ ಶಿಕ್ಷಕ ಬಿ.ಡಿ.ದಾಸಾಚಾರಿ ಅಭಿಪ್ರಾಯ ಪಟ್ಟಿದ್ದಾರೆ. ಇದೇ ಸಂದರ್ಭದಲ್ಲಿ ಶಾಲೆಯ ಆಡಳಿತ ಮಂಡಳಿಯು ಪ್ರಶಸ್ತಿ ಪಡೆದ ಶಿಕ್ಷಕರನ್ನು ಮತ್ತು ಶಿಕ್ಷಣಾಧಿಕಾರಿಗಳನ್ನು ಅಭಿನಂದಿಸಿದೆ.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


