ತುಮಕೂರು: ನೀರು ಹಾಗೂ ಮೂಲಭೂತ ಸೌಕರ್ಯ ಕೇಳಿದ್ದಕ್ಕಾಗಿ ದಲಿತ ಸಮುದಾಯದ (ಆದಿ ಕರ್ನಾಟಕ ಸಮುದಾಯಕ್ಕೆ) ಸೇರಿದ ಆನಂದ್ ಬಿನ್ ರಾಮಾಂಜಿನಪ್ಪ ಎಂಬ ವ್ಯಕ್ತಿಯನ್ನು ಬರ್ಬರವಾಗಿ ಕೊಲೆಗೈದ ಘಟನೆ ನಡೆದಿದೆ.
ಪೋಲೆನಹಳ್ಳಿ ಗ್ರಾಮದ ವಾಸಿ ಆನಂದ್ ಅವರು, ಮನೆಯ ಬಳಿ ಇರುವ ಕುಡಿಯುವ ನೀರಿನ ನಲ್ಲಿಯಲ್ಲಿ ನೀರು ಬರುತ್ತಿಲ್ಲ ಹಾಗೂ ಗ್ರಾಮ ಪಂಚಾಯತಿಯಿಂದ ಮನೆ ಮಂಜೂರು ಮಾಡಿ ಕೊಡಿ ಎಂದು ಬಿಲ್ ಕಲೆಕ್ಟರ್ ರಾಮಕೃಷ್ಣಯ್ಯ ಹಾಗೂ ಅವರ ಮಗ ಗ್ರಾಮ ಪಂಚಾಯತಿ ಸದಸ್ಯ ನಾಗೇಶ್ ಅವರ ಮನೆಯ ಬಳಿ ಹೋಗಿ ಆಕ್ರೋಶ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಇದರಿಂದ ಮಾತಿಗೆ ಮಾತು ಬೆಳೆದು ಕೊಲೆಯಲ್ಲಿ ಅಂತ್ಯವಾಗಿದೆ ಎಂದು ತಿಳಿದು ಬಂದಿದೆ.
ಕುಡಿಯುವ ನೀರಿನ ವಿಚಾರವಾಗಿ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ರಾಮಕೃಷ್ಣಪ್ಪ ಹಾಗೂ ಮಗ ಗ್ರಾಮ ಪಂಚಾಯಿತಿ ಸದಸ್ಯ ನಾಗೇಶ, ನಾಗಮಣಿ ಇತರರು ಸೇರಿ ಮಚ್ಚು ದೊಣ್ಣೆ ಗಳಿಂದ ಹಲ್ಲೆ ಮಾಡಿ ಬುಲೆರೋ ಜೀಪ್ ನಿಂದ ಗುದ್ದಿ ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ.
ತುಮಕೂರು ಜಿಲ್ಲೆ ಮಧುಗಿರಿ ತಾಲೂಕು ಕೊಡಗೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಪೋಲೆನಳ್ಳಿ ಗ್ರಾಮದಲ್ಲಿ ನಡೆದಿದೆ. ಎಸ್.ಟಿ. ಸಮುದಾಯದ ಗ್ರಾಮ ಪಂಚಾಯಿತಿ ಮೆಂಬರ್ ಇದೇ ಗ್ರಾಮದ ದಲಿತ ಮಾದಿಗ ಸಮುದಾಯದ ಹುಡುಗರು ಮನೆ ಮಂಜೂರು ಮಾಡಿ ಕುಡಿಯುವ ನೀರು ಕಲ್ಪಿಸಿ ಕೊಡಲು ಕೇಳಿದ್ದಕ್ಕೆ ಮುಚ್ಚು ದೊಣ್ಣೆಯಿಂದ ಒಡೆದು ಕೊಲೆ ಮಾಡಿ ತದನಂತರ ಬುಲೆರೋ ವಾಹನದಿಂದ ಗುದ್ದಿ ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ವರದಿ: ನಂದೀಶ್ ನಾಯ್ಕ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC