ಔರಾದ: ತಾಲೂಕಿನ ಆರೋಗ್ಯಾಧಿಕಾರಿಗಳಾದ ಡಾ.ಗಾಯತ್ರಿದೇವಿ ಅವರು ಉತ್ತಮ ಸೇವೆ ಸಲ್ಲಿಸುತ್ತಿದ್ದು, ಅವರ ವಿರುದ್ಧ ವಿನಾಕಾರಣ ಕೆಲ ಸಂಘಟನೆಗಳು ಸುಳ್ಳು ಆರೋಪ ಮಾಡುತ್ತಿವೆ ಎಂದು ಕನ್ನಡ ಸೇನೆ ತಾಲೂಕಾಧ್ಯಕ್ಷರಾದ ಶಿವಶಂಕರ್ ನಿಸ್ಪತೆ ಅವರು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಹೆಸರಿಗೆ ಬರೆದ ಪತ್ರ ತಹಶೀಲ್ದಾರ್ ಮಹೇಶ್ ಪಾಟೀಲ್ ಅವರಿಗೆ ಸಲ್ಲಿಸಿದರು.
ನಂತರ ಮಾತನಾಡಿದ ಅವರು, ಔರಾದ ತಾಲೂಕು ವೈದ್ಯಾಧಿಕಾರಿಗಳಾದ ಡಾ.ಗಾಯತ್ರಿದೇವಿ ಅವರು ತಾಲೂಕಿನಲ್ಲಿ ಸುಮಾರು 18 ವರ್ಷಗಳಿಂದ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ತೀರಾ ಹಿಂದುಳಿದ ಮತ್ತು ಗಡಿಭಾಗವೆನಿಸಿಕೊಂಡ ನಮ್ಮ ತಾಲೂಕಿನಲ್ಲಿ ಉತ್ತಮ ಸೇವೆ ಸಲ್ಲಿಸುತ್ತಾ ತಾಲೂಕಿನ ಜನರ ಮನ ಗೆದ್ದಿದ್ದಾರೆ.
ಇವರ ವಿರುದ್ಧ ಷಡ್ಯಂತ್ರ ಮಾಡಿ, ಇವರ ಹೆಸರಿಗೆ ಕಳಂಕ ತಂದು ತಾಲೂಕಿನಿಂದ ವರ್ಗಾವಣೆಗೊಳಿಸಬೇಕೆಂದು ಕೆಲವರು ಪ್ರಯತ್ನಿಸುತ್ತಿದ್ದಾರೆ ಎಂದು ಕನ್ನಡ ಸೇನೆ ತಾಲೂಕ ಅಧ್ಯಕ್ಷರಾದ ಶಿವಶಂಕರ್ ಅವರು ಆರೋಪ ಮಾಡಿದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


