ಬೀದರ್: ನಕಲಿ ದಾಖಲೆ ಸೃಷ್ಟಿ ಮಾಡಿ, ಸರಕಾರದ ಅನುದಾನ ದುರುಪಯೋಗ ಮಾಡಿದ್ದಾರೆ ಎಂದು ಆರೋಪಿಸಿ ಇಬ್ಬರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಅವರು ಆದೇಶ ಹೊರಡಿಸಿದ್ದಾರೆ.
ತಾಳಮಡಗಿ ಗ್ರಾಮ ಪಂಚಾಯತ್ ನಲ್ಲಿ, ಸರ್ಕಾರದ ಅನುದಾನದಡಿಯಲ್ಲಿ ದುರುಪಯೋಗವಾಗಿದ್ದು ಮೇಲ್ನೋಟಕ್ಕೆ ಕಂಡು ಬಂದಿರುತ್ತದೆ. ದಾಸ್ತಾನು ವಹಿ, ನಗದು ಪುಸ್ತಕ ಹಾಗೂ ಹಾಜರಾತಿ ಪುಸ್ತಕಗಳನ್ನು ಪರಿಶೀಲನೆ ಮಾಡಲಾಗಿದೆ. ನಗದು ವಹಿಯಲ್ಲಿ ದಿನಾಂಕಗಳು ನಮೂದಿಸಿರುವುದಿಲ್ಲ. ಅನುದಾನವನ್ನು ಪಿಡಿಒ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು ದುರುಪಯೋಗ ಪಡಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಇವರು 15ನೇ ಹಣಕಾಸು ಯೋಜನೆ ಅಡಿಯಲ್ಲಿ 42 ಲಕ್ಷ ರೂ. ಕ್ಕಿಂತ ಹೆಚ್ಚು ಹಾಗೂ ನಿಧಿ–1ರ ಖಾತೆಯಲ್ಲಿ 2 ಲಕ್ಷ ರೂ. ಆರ್ಥಿಕ ದುರ್ನಡತೆ ಎಸಗಿ ಸರ್ಕಾರದ ಬೊಕ್ಕಸಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ತಾಳಮಡಗಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಶ್ವಿನಿ ಅವರನ್ನು ಅಮಾನತುಗೊಳಿಸಲಾಗಿದೆ.
ಹಾಗೆಯೇ ಮಂಗಲಗಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಸಪ್ಪಾ ಅವರು, ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆ ಅಡಿಯಲ್ಲಿ ಕಡತ ನಿರ್ವಹಿಸದೆ ನಕಲಿ ಬಿಲ್ಲುಗಳನ್ನ ಸೃಷ್ಟಿಸಿ ಆರ್ಥಿಕ ದುರ್ನಡತೆ ಎಸಗಿ ಸರ್ಕಾರದ ಬೊಕ್ಕಸಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ಅಮಾನತುಗೊಳಿಸಲಾಗಿದೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


