ಬೀದರ್: ಮನೆಯಲ್ಲಿ ಆಟವಾಡುತಿದ್ದ 6 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬಸವಕಲ್ಯಾಣ ತಾಲೂಕಿನಲ್ಲಿ ನಡೆದಿದ್ದು, ಮಂಗಳವಾರ ಪ್ರಕರಣ ದಾಖಲಾಗಿದೆ.
ಸೆ. 6ರಂದು ಬಾಲಕಿಯನ್ನು ಮನೆಯಲ್ಲಿ ಬಿಟ್ಟು ಪಾಲಕರು ಜಮೀನಿಗೆ ತೆರಳಿದ್ದರು. ಈ ವೇಳೆ ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿದ 24 ವರ್ಷದ ಯುವಕನೊಬ್ಬ ಸಂಜೆ ಸಮಯದಲ್ಲಿ ಬಾಲಕಿಯನ್ನು ಪುಸಲಾಯಿಸಿ ಆಕೆಯ ಮನೆಯಿಂದ ತನ್ನ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ.
ಘಟನೆಯಿಂದ ಆಘಾತಕ್ಕೆ ಒಳಗಾಗಿದ್ದ ಪಾಲಕರು ಸೆ.9 ರಂದು ದೂರು ನೀಡಿದ್ದು, ಮುಡಬಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


