ಸರಗೂರು: ಸರ್ಕಾರ ಪ್ರತಿ ಕುಟುಂಬದಲ್ಲಿರುವ ಅರ್ಹರಿಗೆ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಅನುಮೋದನೆ ಪತ್ರವನ್ನು ಮನೆ ಬಾಗಿಲಿಗೆ ತಲುಪಿಸುವ ಯೋಜನೆ ಜಾರಿ ಮಾಡಿದೆ. ಅರ್ಹರು ಇದರ ಸದುಪಯೋಗ ಪಡೆದು ಕೊಳ್ಳಬೇಕು ಎಂದು ರಾಜಸ್ವ ನಿರೀಕ್ಷಕ ರವಿಚಂದ್ರನ್ ತಿಳಿಸಿದರು.
ತಾಲೂಕಿನ ಇಟ್ನ ಗ್ರಾಪಂ ವ್ಯಾಪ್ತಿಯ ಇಟ್ನ ಗ್ರಾಮದ ಪಂಚಾಯಿತಿ ಸಭಾಂಗಣದಲ್ಲಿ ಕಂದಾಯ ಇಲಾಖೆ ವತಿಯಿಂದ ಆಯೋಜಿಸಿದ್ದ ಗ್ರಾಪಂ ಮಟ್ಟದ ಪೌತಿ ಖಾತೆ ಆಂದೋಲನ ಕಾರ್ಯಕ್ರಮವನ್ನು ಶುಕ್ರವಾರ ದಂದು ಹಮ್ಮಿಕೊಂಡಿದ್ದು ಕಾರ್ಯಕ್ರಮ ಚಾಲನೆ ನೀಡಿ ಮಾತನಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರ ಸಾವಿರಾರು ಕೋಟಿ ರೂ. ಸಾಮಾಜಿಕ ಭದ್ರತಾ ಯೋಜನೆಯಲ್ಲಿ ಅನುದಾನ ಬಿಡುಗಡೆಗೊಳಿಸುತ್ತಿದೆ. ಆದರೆ ಇದು ಸಮರ್ಪಕವಾಗಿ ವಿತರಣೆ ಯಾಗುತ್ತಿಲ್ಲ ಎಂಬ ಕಾರಣದಿಂದ ಪ್ರತಿ ತಿಂಗಳ 15 ರೊಳಗೆ ಜನರ ಬಳಿ ಹೋಗಿ ಅರ್ಹರನ್ನು ಗುರುತಿಸಿ ಮನೆ ಬಾಗಿಲಿಗೆ ಪಿಂಚಣಿ ಅನು ಮೋದನೆ ಪತ್ರ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ.
ಕಂದಾಯ ನಿರೀಕ್ಷಕರು ಗ್ರಾಮಲೆಕ್ಕಿಗರಿಗೆ ತಮ್ಮ ಅರ್ಜಿ ಸಲ್ಲಿಸಬಹುದು. ಸ್ಥಳೀಯ ಮುಖಂಡರು ಅರ್ಹರನ್ನು ಗುರುತಿಸಲು ಇಲಾಖೆ ಅಧಿಕಾರಿಗಳಿಗೆ ಸಹಕರಿಸಬೇಕು ಎಂದರು.
ಸಂಧ್ಯಾ ಸುರಕ್ಷಾ ಯೋಜನೆ, ವಿಧವಾ ವೇತನ, ಅಂಗವಿಕಲ ವೇತನ ಸೇರಿದಂತೆ ನಾಲ್ಕು ವಿಭಾಗದಲ್ಲಿ ಸಾಮಾಜಿಕ ಭದ್ರತಾ ಯೋಜನೆ ಅಳವಡಿಸಲಾಗಿದೆ.
ಆದರೆ ಫಲಾನುಭವಿಗಳು ಸ್ಥಳಿಯ ಬ್ಯಾಂಕ್ ಗಳಲ್ಲಿ ಬ್ಯಾಂಕ್ ಖಾತೆ ಆರಂಭಿಸಿದರೆ ನೇರವಾಗಿ ಹಣ ಖಾತೆಗೆ ಜಮಾವಣೆಯಾಗಲಿದೆ. ಅರ್ಹರಿಗೆ ಪಿಂಚಣಿ ಪಡೆಯಲು ಸೂಕ್ತ ದಾಖಲಾತಿ ನೀಡಿ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದರು.
ಫಲಾನುಭವಿಗಳಿಗೆ ಪಿಂಚಣಿ ಯೋಜನೆಯಡಿ ಆದೇಶ ಪತ್ರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಚನ್ನನಾಯಕ, ಸದಸ್ಯ ಆರ್ ಕಾಳಲಿಂಗನಾಯಕ, ಜಯರಾಮ್, ಮುಖಂಡರು ರವಿಕುಮಾರ್,ಈರನಾಯಕ, ಬಸವನಾಯಕ, ಚನ್ನನಾಯಕ, ಚಿಕ್ಕನಾಯಕ, ರಾಜಣ್ಣ, ಪಿಡಿಒ ಚಿನ್ನಸ್ವಾಮಿ, ಗ್ರಾಮಲೆಕ್ಕಿಗರ ಉಷಾ, ಗ್ರಾಮಸೇವಕ ಚಂದ್ರ ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC