ಸರಗೂರು: ದಸರಾ ಚಲನಚಿತ್ರೋತ್ಸವ ಉಪಸಮಿತಿ ರಚನೆಯಲ್ಲಿ ಎಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದ ಸುನೀಲ್ ಬೋಸ್ ಅಭಿಮಾನಿಗಳ ಬಳಗದ ತಾಲೂಕು ಅಧ್ಯಕ್ಷ ದೇವಲಾಪುರ ಸಿದ್ದರಾಜು ರವರನ್ನು ಉಪಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ನಂತರ ಮಾತನಾಡಿದ ಸುನೀಲ್ ಬೋಸ್ ಅಭಿಮಾನಿಗಳ ಬಳಗದ ತಾಲೂಕು ಅಧ್ಯಕ್ಷ ದೇವಲಾಪುರ ಸಿದ್ದರಾಜು, ಈ ಬಾರಿ, ಮಾಲ್ ಆಫ್ ಮೈಸೂರ್ ನ ನೆಲಮಹಡಿಯಲ್ಲಿ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ಸೆ.13ರಂದು ಬೆಳಿಗ್ಗೆ 11ಕ್ಕೆ ನೆರವೇರಿಸಲಿದ್ದಾರೆ. ಇದರೊಂದಿಗೆ, ನಾಡಹಬ್ಬಕ್ಕೂ ಮುನ್ನವೇ ಚಲನಚಿತ್ರೋತ್ಸವ ಗರಿಗೆದರಲಿದೆ ಎಂದು ತಿಳಿಸಿದರು.
ದಸರಾ ಚಲನಚಿತ್ರೋತ್ಸವ ಉಪಸಮಿತಿ ರಚನೆಯಲ್ಲಿ ಎಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಪಕ್ಷದ ಕಾರ್ಯಕರ್ತರಿಗೆ ಹೆಚ್ಚಿನ ಮಾನ್ಯತೆ ನೀಡುವ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಹಾಗೂ ಮೈಸೂರು ಉಸ್ತುವಾರಿ ಸಚಿವ ಡಾ.ಎಸ್.ಸಿ. ಮಹದೇವಪ್ಪ ಹಾಗೂ ಸಂಸದ ಸುನೀಲ್ ಬೋಸ್ ಮತ್ತು ಶಾಸಕ ಅನಿಲ್ ಚಿಕ್ಕಮಾದು ಹೆಚ್ಚಿನ ರೀತಿಯಲ್ಲಿ ಅವಕಾಶವನ್ನು ನೀಡುತ್ತ ಬರುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಅಭಿನಂದನೆ ಸಲ್ಲಿಸಿದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC