ಸರಗೂರು: ಗ್ರಾಮೀಣ ಭಾಗದ ರೈತರ ಜಮೀನು ಹಕ್ಕನ್ನು ಭದ್ರಪಡಿಸಲು ಸರ್ಕಾರ ಪೌತಿ ಆಂದೋಲನ ಹಮ್ಮಿಕೊಂಡಿದ್ದು, ರೈತರು ಇದರ ಸದುಪಯೋಗ ಪಡೆಯಬೇಕು’ ಎಂದು ರಾಜಸ್ವ ನಿರೀಕ್ಷಕ ರವಿಚಂದ್ರನ್ ಹೇಳಿದರು.
ತಾಲೂಕಿನ ಮನುಗನಹಳ್ಳಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಪೌತಿ ಖಾತೆ ಆಂದೋಲನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಸಾಲ ಸೌಲಭ್ಯ, ವಿಮೆ ಪರಿಹಾರ ಸೇರಿದಂತೆ ಸರ್ಕಾರದ ಪ್ರತಿಯೊಂದು ಸೌಲಭ್ಯ ಪಡೆಯಲು ಅವಶ್ಯಕವಾದ ಪೌತಿ ಖಾತೆಯನ್ನು ಸರ್ಕಾರ ಆಂದೋಲನದ ಮೂಲಕ ರೈತರಿಗೆ ನೀಡುತ್ತಿದ್ದು, ಮೃತ ರೈತರ ವಾರಸುದಾರರು ಕೂಡಲೇ ತಮ್ಮ ಜಮೀನುಗಳ ದಾಖಲಾತಿಗಳನ್ನು ವರ್ಗಾಯಿಸಿಕೊಳ್ಳಬೇಕು’ ಎಂದರು.
ಗ್ರಾಮೀಣ ಭಾಗದ ಜನರಿಗೆ ಸರಕಾರದ ಹಲವು ಸೇವೆಗಳು ಅವರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರದ ನೂತನ ಯೋಜನೆಗಳಲ್ಲಿ ಪೌತಿ ಖಾತೆ ಆಂದೋಲನವು ಒಂದಾಗಿದೆ. ಪೌತಿ ಖಾತೆ ಆಂದೋಲನ ಎಂದರೆ ಪಿತ್ರಾರ್ಜಿತ ಆಸ್ತಿ ಹಕ್ಕನ್ನು ರೈತರ ಹೆಸರಿಗೆ ಮಾಡಿಕೊಡುವುದು. ಈ ಪೌತಿ ಖಾತೆ ಆಂದೋಲನದ ಮೂಲ ಉದ್ದೇಶವಾಗಿದೆ.
ಕಂದಾಯ ನಿರೀಕ್ಷಕ ಎಂ.ಚೈತ್ರಾ ಮಾತನಾಡಿ, ‘ತಕರಾರು ಹಾಗೂ ಕಾನೂನು ತೊಡಕು ಇದ್ದ ಜಮೀನುಗಳನ್ನು ಹೊರತುಪಡಿಸಿ ಉಳಿದ ಎಲ್ಲ ರೈತರು ತಮ್ಮ ಜಮೀನುಗಳ ಖಾತೆಗಳನ್ನು ಸರಿಪಡಿಸಿಕೊಳ್ಳಬೇಕು’ ಎಂದರು.
ಸರಕಾರದಿಂದ ಸಿಗಬಹುದಾದ ಹಲವಾರು ಪ್ರಯೋಜನೆಗಳಿಂದ ವಂಚಿತರಾಗುತ್ತಾರೆ. ಅಲ್ಲದೇ ಜಮೀನಿನ ಅಭಿವೃದ್ಧಿಗೆ ಸಂಬಂಧಿಸಿ ಬ್ಯಾಂಕ್ ಸಾಲಗಳು, ಬೆಳೆ ಹಾನಿ ಪರಿಹಾರ, ಬೆಳೆ ವಿಮೆಯಂತಹ ಅನೇಕ ಸೌಲಭ್ಯಗಳನ್ನು ಕಳೆದುಕೊಳ್ಳುತ್ತಿದ್ದಾರೆ.
ಈ ನಿಟ್ಟಿನಲ್ಲಿ ನಿಗದಿಪಡಿಸಿದ ದಿನದಂದು ಗ್ರಾಮ ಆಡಳಿತ ಅಧಿಕಾರಿಗಳು ಈ ಮೊದಲೇ ಈಗಾಗಲೇ ಜಿಲ್ಲೆಯಾದ್ಯಂತ ಕಂದಾಯ ವೃತ್ತವಾರು ತಮ್ಮ ಹಳ್ಳಿಗೆ ಬಂದು ಪೌತಿ ಖಾತೆ ಆಂದೋಲನ ಮೂಲಕ ವಾರಸಾ ಖಾತೆ ದಾಖಲಿಸಿಕೊಳ್ಳಲು ಕ್ರಮ ವಹಿಸಲಾಗುತ್ತದೆ.
ಈ ಸಂಬಂಧ ತಾವುಗಳು ಪೌತಿ ಖಾತೆದಾರರ ಮರಣ ಪ್ರಮಾಣ ಪತ್ರ, ವಂಶವೃಕ್ಷ ದೃಢೀಕರಣ, ಎಲ್ಲ ವಾರಸುದಾರರ ಆಧಾರ್ ಕಾರ್ಡ್ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಪೌತಿ ಖಾತೆ ಬದಲಾವಣೆಗೆ ಕ್ರಮ ಕೈಗೊಳ್ಳಲು ಪೌತಿ ಖಾತೆ ಆಂದೋಲನದ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಲವು ವಾರಸಾ ಪೌತಿ ಖಾತಾ ನಕಲುಗಳನ್ನು ರೈತರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಚಿಕ್ಕಕಾಳಮ್ಮ, ಉಪಾಧ್ಯಕ್ಷ ಲಂಕೆ ರಮೇಶ್, ಸದಸ್ಯರು ಮಹೇಶ್ ಎಚ್.ಡಿ., ಸಿದ್ದರಾಜು, ಕರಿಸ್ವಾಮಿ, ಪಿಡಿಒ ಯೋಗೇಂದ್ರ, ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC