nammatumakuru

    Subscribe to Updates

    Get the latest creative news from FooBar about art, design and business.

    What's Hot

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026
    Facebook Twitter Instagram
    ಟ್ರೆಂಡಿಂಗ್
    • ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!
    • ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!
    • ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ
    • ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ
    • ಇಂಧನ ದರ ಏರಿಕೆ: ರಾಜಕೀಯ ಮಾಡದೆ ವ್ಯಾಟ್ ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಒತ್ತಾಯ
    • ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಎಚ್ಚರಿಕೆ!
    • ಬೇಸಿಗೆ ಕಾಲದಲ್ಲಿ ಲಿಂಬೆಹಣ್ಣುಗಳನ್ನು ದೀರ್ಘಕಾಲದವರೆಗೆ ತಾಜಾವಾಗಿಡುವುದು ಹೇಗೆ?
    • ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಲ್ಯ ಶಿಕ್ಷಣದ ಗುಣಮಟ್ಟ ಬಲಪಡಿಸಲು ಸಮುದಾಯದ ಪಾತ್ರ ಬಹುಮುಖ್ಯ: ರವಿಕುಮಾರ್
    ಜಿಲ್ಲಾ ಸುದ್ದಿ September 13, 2025

    ಬಾಲ್ಯ ಶಿಕ್ಷಣದ ಗುಣಮಟ್ಟ ಬಲಪಡಿಸಲು ಸಮುದಾಯದ ಪಾತ್ರ ಬಹುಮುಖ್ಯ: ರವಿಕುಮಾರ್

    By adminSeptember 13, 2025No Comments2 Mins Read
    anganavadi

    ಸರಗೂರು:  ಅಂಗನವಾಡಿಗಳಲ್ಲಿ ಶಾಲಾ ಪೂರ್ವ ಶಿಕ್ಷಣದ ಪ್ರಾಮುಖ್ಯತೆಯನ್ನು ಸಮುದಾಯಕ್ಕೆ ತಿಳಿಸುವ ಸಲುವಾಗಿ ಹಾಗೂ ಆರಂಭಿಕ ಬಾಲ್ಯ ಶಿಕ್ಷಣದ ಗುಣಮಟ್ಟವನ್ನು ಬಲಪಡಿಸಲು ಸಮುದಾಯದ ಪಾತ್ರ ಬಹುಮುಖ್ಯವಾದದ್ದು ಎಂಬುದನ್ನು ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ರವಿಕುಮಾರ್ ತಿಳಿಸಿದರು.

    ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಶುಕ್ರವಾರದಂದು ಮಕ್ಕಳ ಜಾಗೃತಿ ಸಂಸ್ಥೆ, ಮುಳ್ಳೂರು ಗ್ರಾಮ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,  ಹೆಚ್‌ ಸಿಎಲ್ ಪೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ಮುಳ್ಳೂರು ವೃತದ ಅಂಗನವಾಡಿ ಹಬ್ಬ ಕಾರ್ಯಕ್ರಮವನ್ನು ಮುಳ್ಳೂರಿನ ಶ್ರೀ ಅಭಯ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದು ಗಣ್ಯರು ಕಾರ್ಯಕ್ರಮವನ್ನು ಟೇಪ್ ಕಟ್ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ಇಂತಹ ಕಾರ್ಯಕ್ರಮಗಳು ಆರು ತಿಂಗಳಿಗೊಮ್ಮೆ ಪ್ರತಿಯೊಂದು ಗ್ರಾಮ ಪಂಚಾಯಿತಿ ಮಟ್ಟದಲ್ಲೂ ನಡೆಯಬೇಕು. ಇದರಿಂದ ಮಕ್ಕಳಿಗೆ ಹಾಗೂ ಪೋಷಕರಿಗೆ ಒಂದು ಅರಿವು ಉಂಟಾಗುತ್ತದೆ. ಹಾಗೂ ಎಲ್ಲಾ ಕ್ಷೇತ್ರದ ಬೆಳವಣಿಗೆಗಳು ಸಾಧ್ಯವಾಗುತ್ತದೆ.  ಮಕ್ಕಳ ಜಾಗೃತಿ ಸಂಸ್ಥೆಯು ಒಂದು ಉತ್ತಮ ಕಾರ್ಯಕ್ರಮವನ್ನು ಮಾಡುತ್ತ ಬಂದಿದ್ದು, ಇದು ತುಂಬಾ ಶ್ಲಾಘನೀಯವಾಗಿದೆ ಎಂದು ತಿಳಿಸಿದರು.

    ಮುಳ್ಳೂರು ಗ್ರಾಮ ಪಂಚಾಯಿತಿ ಅಧಿಕಾರಿ ನಾಗೇಂದ್ರ ಮಾತನಾಡಿ,  ಈ ಹಬ್ಬದಲ್ಲಿ ಭಾರತೀಯ ಸಂಸ್ಕೃತಿ ಹಾಗೂ ಪರಂಪರೆಯನ್ನು ಪ್ರತಿಬಿಂಬಿಸುವ ಅರಿಶಿಣ, ಕುಂಕುಮ, ಬಳೆ,  ಹೂಗಳನ್ನು ನೀಡುವ ಮೂಲಕ ಎಲ್ಲರನ್ನು ಸ್ವಾಗತಿಸಲಾಯಿತು. ಮಕ್ಕಳಲ್ಲಿ ಪ್ರಮುಖವಾಗಿ ಆಗುವ ದೈಹಿಕ, ಮಾತು ಮತ್ತು ಭಾಷೆ, ಬೌದ್ಧಿಕ, ಸಾಮಾಜಿಕ  ಹಾಗೂ ಭಾವನಾತ್ಮಕ ಬೆಳವಣಿಗೆಗಳು, ಪೋಷಣೆ, ಪೋಷಕರಿಗೆ ಕ್ರಿಯಾತ್ಮಕ ಆಟಗಳ ಸ್ಟಾಲ್ ಗಳನ್ನು ಆಯೋಜಿಸಲಾಗಿತ್ತು. ಪ್ರತಿಯೊಂದು ಸ್ಟಾಲ್ ನಲ್ಲೂ ಮಕ್ಕಳ ಬೆಳವಣಿಗೆಗೆ ಸಂಬಂಧಿಸಿದ ಚಟುವಟಿಕೆಗಳು ಮತ್ತು ಪೋಸ್ಟರ್ ಗಳನ್ನೂ ಮುಳ್ಳೂರು ವೃತ್ತದ ಶಿಕ್ಷಕಿಯರು, ಮಕ್ಕಳ ಜಾಗೃತಿ ಸಂಸ್ಥೆಯ ಸಂಯೋಜಕ ರೊಡಗೂಡಿ ಪೋಷಕರಿಗೆ ವಿವರಿಸಿದರು. ಮತ್ತು ಮಕ್ಕಳಿಗೆ,ಪೋಷಕರಿಗೆ ಚಟುವಟಿಕೆಗಳನ್ನು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

    ಈ ಕಾರ್ಯಕ್ರಮಕ್ಕೆ ಎಚ್.ಡಿ.ಕೋಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ದೀಪಾ ಮಾತನಾಡಿ ಒಟ್ಟಾರೆ 200ಕ್ಕೂ ಹೆಚ್ಚು ಪೋಷಕರು, ಮುಳ್ಳೂರು ವೃತ್ತದ ಶಿಕ್ಷಕಿಯರು ಹಾಗೂ ಸಹಾಯಕಿಯರು, ಸರಗೂರು ವೃತ್ತದ ಸಹಾಯಕಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಂಗನವಾಡಿಯಲ್ಲಿ ಮಕ್ಕಳಿಗೆ ಶಾಲಾಪೂರ್ವ ಶಿಕ್ಷಣದಲ್ಲಿ ಮಕ್ಕಳ ಬೆಳವಣಿಗೆಗೆ ಪೂರಕವಾದ ಚಟುವಟಿಕೆಗಳನ್ನು ಪರಿಚಯ ಮಾಡಿಸುವುದರ ಮೂಲಕ ಪೋಷಕರು ಅಂಗನವಾಡಿ ಕಡೆ ತಿರುಗಿ ನೋಡುವಂತೆ ಮಾಡಲು ಮಕ್ಕಳ ಜಾಗೃತಿಗೆ ಸಾಕಷ್ಟು ಬೆಂಬಲವನ್ನು ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ ಎಂದು ತಿಳಿಸಿದರು.

    ಕಾರ್ಯಕ್ರಮ ಮುನ್ನ ಬಾಳೆ, ತಳಿರು, ತೋರಣ, ರಂಗವಲ್ಲಿಯಿಂದ ಹಬ್ಬದ ಸಂಭ್ರಮ ಕಳೆಕಟ್ಟಿತು. ದ್ವನಿವರ್ಧಕದ ಮೂಲಕ ಭಕ್ತಿ ಗೀತೆಗಳು ಹರಿದು ಬಂದವು. ಶಿಕ್ಷಕಿಯರು ಕುಣಿದು, ಕುಪ್ಪಳಿಸಿ ತಮ್ಮ ಸಂತೋಷವನ್ನು ವ್ಯಕ್ತ ಪಡಿಸಿದರು.

    ಈ ಸಂದರ್ಭದಲ್ಲಿ ಮುಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚಿನ್ನಮ್ಮ ರಾಮನಾಯಕ, ಅಂಗನವಾಡಿ ಮೇಲ್ವಿಚಾರಕಿ ಚಿನ್ನಮ್ಮ, ಗಾಯತ್ರಿ  ಕಲ್ಲಂಬಾಳು ಗ್ರಾಪಂ ಅಭಿವೃದ್ಧಿ ಅಧಿಕಾರಿ ಜ್ಯೋತಿ, ಕಲ್ಲಂಬಾಳು ಗ್ರಾಪಂ ಸದಸ್ಯೆ ರೇಖಾನಿಲಕಂಠ, ಮುಳ್ಳೂರು ಗ್ರಾಪಂ ಸದಸ್ಯ  ಶ್ರೀನಿವಾಸ್,ಜಯಮ್ಮ ,ರವಿ,ಗ್ರಾಮದ ಮುಖಂಡರು ರಾಜಶೇಖರ್, ಕುಮಾರ್, ಮಲ್ಲೇಶ್ ಮುಳ್ಳೂರು ವೃತ್ತದ ಯೂನಿಯನ್ ಲೀಡರ್  ಸುಮಾ, ಮಕ್ಕಳ ಜಾಗೃತಿ ಸಂಸ್ಥೆಯ ವ್ಯವಸ್ಥಾಪಕ ದಿವ್ಯ, ನವೀನ್ ಕುಮಾರ್ , ಹಾಗೂ ಮುಳ್ಳೂರು ವೃತ್ತದ ಸಂಯೋಜಕ ಪುನೀತ್ ಅಂಬಳೆ, ಸಿದ್ದರಾಜು ,ಮುಳ್ಳೂರು ವೃತ್ತದ ಅಂಗನವಾಡಿ ಮಕ್ಕಳು ಹಾಗೂ ಮುಳ್ಳೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಮುಳ್ಳೂರು ಪಿ.ಎಂ. ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ಹಾಗೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!

    May 26, 2026

    ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಎಚ್ಚರಿಕೆ!

    May 26, 2026

    ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

    May 23, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ನವದೆಹಲಿ/ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆ’ಗೆ ಕೇಂದ್ರ ಗೃಹ ಸಚಿವಾಲಯ…

    ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ

    May 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.