ಔರಾದ್: ಬೀದರ್ ಜಿಲ್ಲೆಯ ಔರಾದ ತಾಲೂಕಿನ ಬೆಳಕುಣಿ ಚೌದ್ರಿ ಗ್ರಾಮದ ವಾರ್ಡ್ ನಂಬರ್ 2ರಲ್ಲಿ ರಸ್ತೆ ಸಮಸ್ಯೆಯ ಬಗ್ಗೆ ನಿನ್ನೆ(ಭಾನುವಾರ) ನಮ್ಮತುಮಕೂರು ಸವಿವರವಾದ ವರದಿಯೊಂದನ್ನು ಪ್ರಕಟಿಸಿತ್ತು. ಈ ವರದಿಯ ಬೆನ್ನಲ್ಲೇ ಎಚ್ಚೆತ್ತುಕೊಂಡ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ರಸ್ತೆ ನಿರ್ಮಾಣದ ಭರವಸೆಯನ್ನು ಸಾರ್ವಜನಿಕರಿಗೆ ನೀಡಿದ್ದಾರೆ.
ಬೀದರ್ ಜಿಲ್ಲೆಯ ಔರಾದ ತಾಲೂಕಿನ ಬೆಳಕುಣಿ ಚೌದ್ರಿ ಗ್ರಾಮದ ವಾರ್ಡ್ ನಂಬರ್ 2 ರಲ್ಲಿ. ಸ್ವಲ್ಪ ಮಳೆ ಬಂದರೂ ಸಹ ರಸ್ತೆ ಕೆಸರುಮಯವಾಗಿ ಅಕ್ಷರಶಃ ಗದ್ದೆಯಾಗಿ ಮಾರ್ಪಡುತ್ತಿದೆ. ಈ ವಿಚಾರದ ಬಗ್ಗೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಗಮನಕ್ಕೆ ಹಲವಾರು ಬಾರಿ ಸಾರ್ವಜನಿಕರು ತಂದರೂ ಅವರು ಕ್ರಮಕೈಗೊಳ್ಳದೇ ನಿರ್ಲಕ್ಷ್ಯವಹಿಸಿರುವುದಾಗಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ: ಗದ್ದೆಯಂತಾದ ರಸ್ತೆ: ಬೆಳಕುಣಿ ಚೌದ್ರಿ ಗ್ರಾಮದ ವಾರ್ಡ್ ನಂಬರ್ 2 ರಲ್ಲಿ ಅವ್ಯವಸ್ಥೆ: ಗಾಢ ನಿದ್ದೆಯಲ್ಲಿರುವ ಅಧಿಕಾರಿಗಳು
ನಿನ್ನೆ ವರದಿ ಪ್ರಕಟಗೊಂಡ ಬೆನ್ನಲ್ಲೇ ಔರಾದ್ ತಾಲ್ಲೂಕು ಪಂಚಾಯಿತಿ ಅಧಿಕಾರಿ ಇಓ ಅವರು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಕರೆ ಮಾಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದ್ದಾರೆ. ಇಂದು ಮುಂಜಾನೆ ಸ್ಥಳಕ್ಕೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪಿಡಿಒ ಆತ್ಮರಾಮ್ ಓಣಿ ಸ್ಥಳಕ್ಕೆ ಭೇಟಿ ನೀಡಿದರು. ಇದೇ ವೇಳೆ ಮಾತನಾಡಿದ ಅವರು, ಈಗಾಗಲೇ ರಸ್ತೆ ಮಂಜೂರಾಗಿದೆ, ಆದಷ್ಟು ಶೀಘ್ರವೇ ರಸ್ತೆ ಮಾಡಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ಕರಬಸಪ್ಪಾ ಸೊರಾಳೆ, ಗ್ರಾಪಂ ಮಾಜಿ ಬಿಲ್ ಕಲೆಕ್ಟರ್ ಪೆಂಟಾ ರೆಡ್ಡಿ, ಶರ್ಪು ಸೌದಾಗರ್, ಮಾಜಿ ಶಿಕ್ಷಕರ ಸತ್ಯನಾರಾಯಣ ರಾಜಪುತ ಇದ್ದರು.
ವರದಿ:ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC