ಚಾಮರಾಜನಗರ: ಸರ್ಕಾರಿ ಹಾಗೂ ಅನುದಾನಿತ ಶಾಲೆಗಳೂ ಸೇರಿದಂತೆ ಮತ್ತೆ ಹೆಚ್ಚುವರಿಯಾಗಿ 18,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ಶೀಘ್ರವೇ ಆರಂಭವಾಗಲಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ 13,500 ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದೇವೆ. ಆದರೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇವಲ 5,428 ಶಿಕ್ಷಕರನ್ನು ಮಾತ್ರ ನೇಮಕ ಮಾಡಿತ್ತು ಎಂದರು.
ಶಾಲಾ ಕೊಠಡಿಗಳ ಶಿಥಿಲಾವಸ್ಥೆ ವಿಚಾರವಾಗಿ ಪ್ರತಿಕ್ರಿಯಿಸಿ, ಇದು ಕೇವಲ ನಮ್ಮ ಸರಕಾರದ ಅವಧಿಯಲ್ಲಿ ಸೃಷ್ಟಿಯಾದ ಸಮಸ್ಯೆಯಲ್ಲ. ರಾಜ್ಯದಲ್ಲಿ 46 ಸಾವಿರ ಶಾಲೆಗಳಿದ್ದು, ಎಲ್ಲಾ ಶಾಲೆಗಳಲ್ಲೂ ಸಮಸ್ಯೆಗಳಿಲ್ಲ ಎಂದು ಹೇಳುತ್ತಿಲ್ಲ. ಈ ಹಿಂದಿನ ಸರಕಾರ ಯಾವುದೇ ಕೊಠಡಿಯನ್ನು ಕಟ್ಟಿಲ್ಲ. ನೇಮಕ ಕೂಡ ಮಾಡಿಲ್ಲ. ನಾವೂ ಅಧಿಕಾರಕ್ಕೆ ಬಂದ ಮೇಲೆ ವಿವೇಕ ಯೋಜನೆಯಡಿ 8,200 ಕೊಠಡಿ ಪೂರ್ಣ ಮಾಡಿದ್ದೇವೆ. ಮತ್ತೆ 3000 ಸಾವಿರ ಕೊಠಡಿ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ. ಅಲ್ಲದೇ ನೂತನವಾಗಿ 800 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC