ಚಾಮರಾಜನಗರ: ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಳ್ಳೇಗಾಲದ ಯಳಂದೂರು ಮಾರ್ಗಮಧ್ಯದ ಎಳೆ ಪಿಳ್ಳಾರಿ ದೇವಸ್ಥಾನದ ಬಳಿ ಘಟನೆ ನಡೆದಿದೆ.
ಸುಮಂತ್ (22), ನಿತಿನ್ ಕುಮಾರ್ (16) ಸಾವನ್ನಪ್ಪಿದ ದುರ್ದೈವಿಗಳು. ಲಾರಿಗೆ ಟೊಮ್ಯಾಟೊ ತುಂಬಿಕೊಂಡು ಹೋಗುತ್ತಿದ್ದ ಆಟೋ ಡಿಕ್ಕಿ ಹೊಡೆದಿದೆ. ಅಪಘಾತವಾಗುತ್ತಿದ್ದಂತೆ ರಸ್ತೆಗೆ ಟೊಮ್ಯಾಟೊ ಬಾಕ್ಸ್ ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಎಳೆಪಿಳ್ಳಾರಿ ಸಮೀಪದ ಜಮೀನಿನಿಂದ ಕಬ್ಬು ತುಂಬಿಸಿಕೊಂಡ ಲಾರಿ ಕಾರ್ಖಾನೆಗೆ ತೆರಳಲು ರಸ್ತೆಯ ಬಳಿ ನಿಂತಿತ್ತು. ಈ ಸಂದರ್ಭದಲ್ಲಿ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ ಹಿಂಬದಿಂದ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಈ ಸಂಬಂಧ ಯಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC