ಬೆಂಗಳೂರು: ಬಹಳ ದಿನಗಳ ಬಳಿಕ ಧರ್ಮಸ್ಥಳದ ಬಂಗ್ಲಗುಡ್ಡದಲ್ಲಿ ವಿಶೇಷ ತನಿಖಾ ದಳ(ಎಸ್ ಐಟಿ) ಪರಿಶೀಲನೆಗೆ ನಡೆಸಿದ್ದು, ಸೌಜನ್ಯ ಅವರ ಮಾವ ವಿಠಲ್ ಗೌಡ ಬಂಗ್ಲಗುಡ್ಡ ಪ್ರದೇಶದಲ್ಲಿ ಮೂಳೆಗಳು ಪತ್ತೆಯಾಗಿರುವ ಬಗ್ಗೆ ನೀಡಿರುವ ಹೇಳಿಕೆಯ ಬೆನ್ನಲ್ಲೇ ಈ ಕಾರ್ಯಾಚರಣೆ ಆರಂಭವಾಗಿದೆ.
ಸುಮಾರು 50 ರಿಂದ 60 ಮಂದಿಯ ತಂಡ ಬಂಗ್ಲೆಗುಡ್ಡ ದಟ್ಟ ಅರಣ್ಯ ಪ್ರದೇಶವನ್ನು ಪ್ರವೇಶಿಸಿ ಶೋಧ ನಡೆಸುತ್ತಿದೆ. ಎಸ್ ಐಟಿಯ ತನಿಖಾಧಿಕಾರಿ ಜಿತೇಂದ್ರಕುಮಾರ ದಯಾಮ ಹಾಗೂ ಎಸ್‌ಪಿ ಸೈಮನ್ ಅವರ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ಹಾಗೂ ಪಂಚನಾಮೆ ಮಾಡಲಾಗಿದೆ.
ತಂಡದಲ್ಲಿ ಅರಣ್ಯ ಇಲಾಖೆಯ 13ಕ್ಕೂ ಹೆಚ್ಚು ಅಧಿಕಾರಿ ಹಾಗೂ ಸಿಬ್ಬಂದಿಗಳಿದ್ದರು. ಕ್ರೈಂ ಸೀನ್‌ನ 9ಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು. ಬಾಂಬ್ ಪತ್ತೆಗಾಗಿ ಬಳಸುವ ಮೆಟಲ್ ಡಿಟೆಕ್ಟರ್ ಯಂತ್ರಗಳನ್ನು ಉಪಯೋಗಿಸಲಾಗಿದೆ.
ವೈದ್ಯರು, ಕಂದಾಯ ಇಲಾಖೆಯ ಕೆಲ ಹಂತದ ಅಧಿಕಾರಿಗಳು, ಗ್ರಾಮ ಪಂಚಾಯಿತಿಯ ಪೌರ ಕಾರ್ಮಿಕರು, ಗ್ರಾಮ ಪಂಚಾಯಿತಿ ಜನ ಪ್ರತಿನಿಧಿಗಳು ಈ ತಂಡದಲ್ಲಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC