ಬೆಂಗಳೂರು: ರಾಹುಲ್ ಗಾಂಧಿ ಅವರಿಗೆ ಕಾಮನ್ ಸೆನ್ಸ್ ಇಲ್ಲ. ತಮ್ಮ ಮಾತಿನಿಂದಲೇ ಅವರು ಇಡೀ ದೇಶದಲ್ಲಿ ಹೆಚ್ಚು ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ’ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವೈಯಕ್ತಿಕ ದಾಳಿ ನಡೆಸಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಅಕ್ರಮದ ಬಗ್ಗೆ ಕಾಂಗ್ರೆಸ್ ನಾಯಕರು ಮಾಧ್ಯಮಗಳ ಮುಂದೆ ಮಾತಾಡುತ್ತಾರೆಯೇ ಹೊರತು ದಾಖಲೆಗಳನ್ನು ನೀಡಲ್ಲ. ಮಾಲೂರು ಕ್ಷೇತ್ರದಲ್ಲಿ ಅಕ್ರಮ ನಡೆದಿದ್ದು, ಈ ಬಗ್ಗೆ ಮೊದಲು ಮಾತಾಡಲಿ ಎಂದರು.
ಮಹದೇವಪುರ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂದು ಆರೋಪ ಮಾಡಿ ಅದು ಸುಳ್ಳು ಎಂದು ಸಾಬೀತಾಗಿದೆ. ಈಗ ಅಳಂದ ಕ್ಷೇತ್ರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪ ಮಾಡಿದ್ದಾರೆ. ಮಾಲೂರು ಕ್ಷೇತ್ರದಲ್ಲಿ ಮತ ಕಳ್ಳತನ ನಡೆದಿದೆ ಎಂದು ಸಾಬೀತಾಗಿದ್ದು, ಕಾಂಗ್ರೆಸ್ ಶಾಸಕರ ಸದಸ್ಯತ್ವವೇ ರದ್ದಾಗಿದೆ. ಇಲ್ಲಿ ನಮ್ಮ ಬಿಜೆಪಿ ಅಭ್ಯರ್ಥಿ ಅಫಿಡವಿಟ್ ನೀಡಿದ್ದರು. ಜಿಲ್ಲಾಧಿಕಾರಿ ತಪ್ಪು ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇದರ ಬಗ್ಗೆ ಯಾಕೆ ಮಾತಾಡುತ್ತಿಲ್ಲ? ಎಂದು ಪ್ರಶ್ನಿಸಿದರು.
ಬಿಹಾರದಲ್ಲಿ ಸೋಲುತ್ತೇವೆ ಎಂದು ತಿಳಿದಿರುವುದರಿಂದ ಕಾಂಗ್ರೆಸ್ ನಾಯಕರಿಗೆ ಭ್ರಮನಿರಸನವಾಗಿದೆ. ಅದಕ್ಕಾಗಿ ಮೊದಲೇ ಆರೋಪ ಮಾಡಿ ಕೇವಿಯಟ್ ರೀತಿಯಲ್ಲಿ ಮಾಡಿದ್ದಾರೆ. ಆದರೆ, ಇವರು ಹಾಕುವ ಪಟಾಕಿಗಳು ಠುಸ್ ಆಗಿದೆ. ಚುನಾವಣಾ ಆಯೋಗದ 45 ದಿನ ಗಡುವು ನೀಡಿದೆ. ಆ ಸಮಯದಲ್ಲಿ ಇವರು ಮಣ್ಣು ತಿನ್ನುತ್ತಿದ್ದರು. ದಾಖಲೆ ಇದ್ದರೆ ಆಗಲೇ ಕೋರ್ಟ್‌ಗೆ ಹೋಗಬೇಕಿತ್ತು. ಇದಕ್ಕೆ ಕಾಂಗ್ರೆಸ್ ಪಕ್ಷ ಉತ್ತರ ನೀಡಲಿ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC