ಬಳ್ಳಾರಿ: ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮನೆಗೆ ಸುಂದರವಾದ ಬಾಗಿಲು ನಿರ್ಮಿಸಿದ ಮಹಿಳೆಯೊಬ್ಬರು ಸಿಎಂ ಸಿದ್ದರಾಮಯ್ಯನವರ ಚಿತ್ರವನ್ನು ಕೆತ್ತಿಸಿ ಕೃತಜ್ಞತೆ ಸಲ್ಲಿಸಿದ್ದಾರೆ.
ಕೂಡ್ಲಿಗಿ ತಾಲೂಕಿನ ಕೆಂಚಮಲ್ಲನಹಳ್ಳಿ ಗ್ರಾಮದ ಪಾರ್ವತಿ ತಮ್ಮ 15 ತಿಂಗಳ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು ಮನೆ ಬಾಗಿಲು ಅಳವಡಿಕೆ ಮಾಡಿಕೊಂಡಿದ್ದಾರೆ.
ಬಾಗಿಲಿನಲ್ಲಿ ಸಿದ್ದರಾಮಯ್ಯ ಅವರು ನಿಂತಿರುವ ಭಾವಚಿತ್ರ ಕೆತ್ತಿಸಿರುವ ಪಾರ್ವತಿ ಅವರು, ಚಿತ್ರದ ಮೇಲೆ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಲಕ್ಷ್ಮಿ ಯೋಜನೆ ಎಂದು ಬರೆಯಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಯಿಂದ ಬರುವ ಹಣದಿಂದ ಸಾಕಷ್ಟು ಮಹಿಳೆಯರು ಸ್ವಾವಲಂಬನೆ ಬದುಕು ಕಟ್ಟಿಕೊಂಡಿರೋ ನಿದರ್ಶನಗಳಿವೆ. ಈಗ ಅದೇ ರೀತಿ ಗೃಹಲಕ್ಷ್ಮಿ ಹಣದಿಂದಲೇ ಸಿಎಂಗೆ ವಿನೂತನ ರೀತಿಯಲ್ಲಿ ಈ ಬಡ ಕುಟುಂಬ ಅಭಿನಂದನೆ ಸಲ್ಲಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC