ಮಂಗಳೂರು: ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ ಎಸ್ ಐಟಿ ಶೋಧ ವೇಳೆ 5 ತಲೆ ಬುರುಡೆ ಸಹಿತ ನೂರಾರು ಮೂಳೆ ಸಿಕ್ಕಿದೆ ಎನ್ನಲಾಗಿರುವ ಘಟನೆಗೆ ಸಂಬಂಧಿಸಿದಂತೆ ಮೃತರ ಪೈಕಿ ಒಬ್ಬರ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಕೊಡಗು ಮೂಲದ ಯು.ಬಿ ಅಯ್ಯಪ್ಪ ಎಂಬ ವ್ಯಕ್ತಿ ಮೃತಪಟ್ಟ ವ್ಯಕ್ತಿಗಳಲ್ಲಿ ಒಬ್ಬರು ಎಂದು ತಿಳಿದು ಬಂದಿದೆ. ಘಟನಾ ಸ್ಥಳದಲ್ಲಿ ಪತ್ತೆಯಾದ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಯು.ಬಿ ಅಯ್ಯಪ್ಪ ಎಂಬುವವರಿಗೆ ಐಡಿ ಕಾರ್ಡ್ ಹಾಗೂ ತ್ರಿಲೆಗ್ ಬ್ಯಾಲೆನ್ಸ್ ಸ್ಟಿಕ್ (ವಾಕಿಂಗ್ ಸ್ಟಿಕ್) ಬಂಗ್ಲೆಗುಡ್ಡದಲ್ಲಿ ಪತ್ತೆಯಾಗಿದೆ.
7 ವರ್ಷಗಳ ಹಿಂದೆ ಮೈಸೂರಿಗೆ ಚಿಕಿತ್ಸೆಗೆಂದು ತೆರಳಿದ್ದ ಅಯ್ಯಪ್ಪ ಅವರು ಬಳಿಕ ನಾಪತ್ತೆಯಾಗಿದ್ದಾರೆ ಎಂದು ಕುಟುಂಬಸ್ಥರು ಕುಟ್ಟ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.
ಇದೀಗ ಬಂಗ್ಲೆಗುಡ್ಡದಲ್ಲಿ ಎಸ್ ಐಟಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಅಯ್ಯಪ್ಪ ಅವರ ಐಡಿ ಕಾರ್ಡ್ ಹಾಗೂ ವಾಕಿಂಗ್ ಸ್ಟಿಕ್ ಗಳು ಸಿಕ್ಕಿದ್ದು, ಪ್ರಕರಣ ರೋಚಕ ತಿರುವು ಪಡೆದುಕೊಂಡಿದೆ. ಕುಟುಂಬಸ್ಥರು ದಾಖಲಿಸಿದ್ದ ಮಿಸ್ಸಿಂಗ್ ಕಂಪ್ಲೆಂಟ್ ನಲ್ಲಿ ವಾಕಿ ಸ್ಟಿಕ್ ಬಗ್ಗೆ ಉಲ್ಲೇಖ ಮಾಡಲಾಗಿದೆ ಅಂತ ವರದಿಗಳಿಂದ ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC