ಬೆಂಗಳೂರು: ಡ್ರಗ್ ಮಾಫಿಯಾ ಸೇರಿದಂತೆ ಇನ್ನಿತರ ಅಕ್ರಮ ದಂಧೆಯ ಜೊತೆ ಪೊಲೀಸರು ಶಾಮೀಲಾಗಿರುವುದು ಕಂಡು ಬಂದರೆ, ಇನ್ನು ಮುಂದೆ ಎಚ್ಚರಿಕೆ ಕೊಡುವುದಿಲ್ಲ, ಕ್ರಮ ತೆಗೆದುಕೊಳ್ಳುತ್ತೇವೆ. ಎಚ್ಚರಿಕೆ ಕೊಡುವುದೆಲ್ಲ ಒಂದು ಹಂತದಲ್ಲಿ ಮುಗಿದಿದೆ. ಈಗ ಏನಿದ್ದರು ಕ್ರಮ ಆಗಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಖಡಕ್ ಸೂಚನೆ ಕೊಟ್ಟರು.
ವಿಧಾನಸೌಧಲ್ಲಿ ಕಾನೂನು ಸುವ್ಯವಸ್ಥೆ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ರೌಡಿಗಳು ಪುಂಡಾಟ, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ, ಬ್ಯಾಂಕ್ ದರೋಡೆ ಪ್ರಕರಣಗಳ ತನಿಖೆಯ ಬಗ್ಗೆ ಅಧಿಕಾರಿಗಳೊಂದಿಗೆ ಕೂಲಂಕಷವಾಗಿ ಚರ್ಚೆ ಮಾಡಲಾಗಿದೆ. ಪರಿಶಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳ ಬಗ್ಗೆ ಪರಿಶೀಲನೆ ಮಾಡಲಾಗಿದೆ. ಕಳೆದ ಮೂರು ವರ್ಷಗಳಿಗೆ ಹೋಲಿಸಿದರೆ ಶಿಕ್ಷೆ ಪ್ರಮಾಣ ಶೇ.10ರಷ್ಟಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪರಿಶೀಲನೆ ಮಾಡಲಾಗಿದೆ. ಪೊಲೀಸ್ ನೇಮಕಾತಿ, ಕಾರಾಗೃಹ ಸಿಬ್ಬಂದಿಗಳ ನೇಮಕಾತಿ ಬಗ್ಗೆ ಚರ್ಚಿಸಲಾಗಿದೆ. ನೇಮಕಾತಿ ಪೂರ್ಣಗೊಳಿಸಬೇಕು ಎಂದು ಸೂಚಿಸಲಾಗಿದೆ ಎಂದರು.
ಈಗಾಗಲೇ 545 ಪಿಎಸ್ ಐ ಹುದ್ದೆಗಳ ನೇಮಕಾತಿ ಪೂರ್ಣಗೊಳಿಸಲಾಗಿದೆ. 402 ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ 398 ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ 10 ರಿಂದ 15 ಸಾವಿರ ಪೊಲೀಸ್ ಪೇದೆ ಹುದ್ದೆಗಳು ಖಾಲಿ ಇವೆ. ಕೆಎಸ್‌ಆರ್‌ಪಿ, ನಾಗರಿಕ, ಸಶಸ್ತ್ರ ಮೀಸಲು ಪಡೆ ಎಲ್ಲ ನೇಮಕಾತಿಯಾಗಬೇಕು. ಯಾವ ರೀತಿ ನೇಮಕಾತಿ ನಡೆಯಬೇಕು ಎಂಬುದರ ಕುರಿತು ಕೆಲ ಸೂಚನೆಗಳನ್ನು ನೀಡಿದ್ದೇನೆ. ವಿವರವಾದ ಚರ್ಚೆಗಳನ್ನು ಮಾಡಿ ಏನೆಲ್ಲ ಸೂಚನೆಗಳನ್ನು ಕೊಡಬೇಕು, ಕೊಟ್ಟಿದ್ದೇನೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC