ಬೀದರ್: ಜಿಲ್ಲೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 8 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಕಮಲನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಔರಾದ್–ಕಮಲನಗರ್ ರಸ್ತೆ ಮೂಲಕ ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಸಾಗಿಸುತ್ತಿರುವ ಮಾಹಿತಿ ಮೇರೆಗೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ಅವರ ನಿರ್ದೇಶನದಲ್ಲಿ, ಪಿಎಸ್ ಐ ಆಶಾ ಹಾಗೂ ಸಿಬ್ಬಂದಿ ದಾಳಿ ನಡೆಸಿದರು.
ದಾಳಿಯ ವೇಳೆ 8 ಕ್ವಿಂಟಾಲ್ ಪಡಿತರ ಅಕ್ಕಿ ಹಾಗೂ ಸಾಗಾಣಿಕೆಗೆ ಬಳಸಿದ ವಾಹನವನ್ನು ವಶಕ್ಕೆ ಪಡೆಯಲಾಯಿತು. ಆದರೆ, ವಾಹನ ಚಾಲಕ ಪೊಲೀಸ್ ವಾಹನವನ್ನು ಕಂಡ ತಕ್ಷಣ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಈ ಕುರಿತು ಕಮಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ವರದಿ: ಅರವಿಂದ ಮಲ್ಲಿಗೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC