nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ

    August 27, 2026

    ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

    August 27, 2026
    Facebook Twitter Instagram
    ಟ್ರೆಂಡಿಂಗ್
    • ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ
    • ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ
    • ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
    • ಈದ್ ಮಿಲಾದ್: ಮೆರವಣಿಗೆಯಲ್ಲಿ ಭಾಗಿಯಾಗಿ ಶುಭಕೋರಿದ ಹಾಸನ ಸಂಸದ ಶ್ರೇಯಸ್ ಪಟೇಲ್
    • ತುಮಕೂರು: ವಿವಿಧ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
    • ಹಾಸನ: ಮುಸುಕಿನ ಜೋಳಕ್ಕೆ ‘ಬಿಳಿಸುಳಿ’ ರೋಗ ಬಾಧೆ: 7 ತಾಲೂಕು ಬರಪೀಡಿತ ಎಂದು ಘೋಷಿಸಿ: ಸಿಎಂಗೆ ಸಚಿವ ಶಿವಲಿಂಗೇಗೌಡ ಮನವಿ
    • ಹೆಡಗಾಪೂರದಲ್ಲಿ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ: ಕೂಲಿಕಾರ್ಮಿಕರಿಗೆ ಹಳ್ಳಿಯಲ್ಲೇ ಸಿಗಲಿದೆ ಹೆಚ್ಚಿನ ಉದ್ಯೋಗಾವಕಾಶ
    • ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಂಡಿತ್ ವೆಂಕಟೇಶ್ ಕುಮಾರ್​ ಗೆ ಸಂಗೀತ ವಿದ್ವಾನ್ ಪ್ರಶಸ್ತಿ: ಒಲಿಂಪಿಕ್ಸ್ ಪದಕ ವಿಜೇತರಿಗೆ 6 ಕೋಟಿ ರೂ. ಬಹುಮಾನ ಘೋಷಣೆ
    ರಾಜ್ಯ ಸುದ್ದಿ September 23, 2025

    ಪಂಡಿತ್ ವೆಂಕಟೇಶ್ ಕುಮಾರ್​ ಗೆ ಸಂಗೀತ ವಿದ್ವಾನ್ ಪ್ರಶಸ್ತಿ: ಒಲಿಂಪಿಕ್ಸ್ ಪದಕ ವಿಜೇತರಿಗೆ 6 ಕೋಟಿ ರೂ. ಬಹುಮಾನ ಘೋಷಣೆ

    By adminSeptember 23, 2025No Comments2 Mins Read
    dasara

    ಮೈಸೂರು: ಮುಂದಿನ ಒಲಿಂಪಿಕ್ಸ್ ಪದಕ ವಿಜೇತರಿಗೆ ಕರ್ನಾಟಕ ಸರ್ಕಾರ 6 ಕೋಟಿ ರೂ. ನಗದು ಬಹುಮಾನ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟವನ್ನು ಸೋಮವಾರ ಉದ್ಘಾಟಿಸಿ ಸಿಎಂ ಮಾತನಾಡಿದರು.

    ಈ ಕ್ರೀಡಾಕೂಟದಲ್ಲಿ ಒಂದು ವಿಭಾಗದಿಂದ 720 ಕ್ರೀಡಾಪಟುಗಳಂತೆ 5 ವಿಭಾಗಗಳಿಂದ ಒಟ್ಟು 3,600 ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲ ಕ್ರೀಡಾಪಟುಗಳಿಗೆ ಶುಭಕೋರಿದ ಮುಖ್ಯಮಂತ್ರಿಗಳು, ಸೋಲು ಗೆಲುವುಗಳಿಗಿಂತ, ಕ್ರೀಡಾಮನೋಭಾವ ಮುಖ್ಯ. ಇಂದು ಚಾಮುಂಡಿವಿಹಾರ ಕ್ರೀಡಾಂಗಣದ ಗ್ಯಾಲರಿ ಹಾಗೂ ಈಜುಕೊಳಗಳಿಗೆ ಅತ್ಯಾಧುನಿಕ ಟೆನ್ಸೈಲ್ ಮೆಂಬ್ರೇನ್ ಛಾವಣಿ ಅಳವಡಿಸುವ ಮತ್ತು ಫುಟ್ಬಾಲ್ ಅಂಕಣ ನಿರ್ಮಿಸುವ ಕಾಮಗಾರಿಯನ್ನು ರೂ. 20.78 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

    ಸಮಾರಂಭದಲ್ಲಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಪುರಸ್ಕೃತೆ ಅಂತಾರಾಷ್ಟ್ರೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಭಾಗವಹಿಸಿರುವುದು ವಿಶೇಷ. ಕುಸ್ತಿ ಕೇವಲ ಪುರುಷರ ಕ್ರೀಡೆ ಎಂದು ಪರಿಗಣಿಸಲಾಗಿದ್ದ ಕಾಲದಲ್ಲಿ ಸಾಮಾಜಿಕ ಅಡೆತಡೆಗಳು ಮತ್ತು ಹಿನ್ನಡೆಗಳನ್ನು ಅನುಭವಿಸಿದರೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಾಗಿದ್ದಾರೆ. ಒಲಿಂಪಿಕ್ಸ್​ ಕ್ರೀಡಾಕೂಟದಲ್ಲಿ ಭಾಗವಹಿಸಿ, ಭಾರತದ ಕೀರ್ತಿ ಮೆರೆದ ವಿನೇಶ್ ಅವರು ಹರಿಯಾಣ ರಾಜ್ಯದಲ್ಲಿ ಶಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.

    ಕ್ರೀಡಾಪಟುಗಳಿಗೆ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡುತ್ತಿದೆ. ಮುಂದಿನ ಒಲಿಂಪಿಕ್ಸ್​ಗೆ ತರಬೇತಿ ಪಡೆಯಲು ರಾಜ್ಯದ 60 ಅತ್ಯಂತ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ವಾರ್ಷಿಕ ತಲಾ 10.00 ಲಕ್ಷ ರೂ. ಸಹಾಯಧನ ನೀಡಿ ತರಬೇತಿ ನೀಡಲಾಗುವುದು. ಅಲ್ಲದೇ ಒಲಿಂಪಿಕ್ಸ್​ ಕ್ರೀಡಾಕೂಟದಲ್ಲಿ ಪದಕವಿಜೇತ ಕ್ರೀಡಾಪಟುಗಳಿಗೆ ಸರ್ಕಾರ 6 ಕೋಟಿ ರೂ. ನಗದು ಬಹುಮಾನ ನೀಡಲಿದೆ. ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ ಒದಗಿಸಲು ಎಲ್ಲ ಇಲಾಖೆಗಳಲ್ಲಿ ಶೇ.2 ರಷ್ಟು ಮೀಸಲಾತಿಯನ್ನೂ ಹಾಗೂ ಪೊಲೀಸ್ ಇಲಾಖೆಯಲ್ಲಿ 2 ರಿಂದ ಶೇ.3 ರಷ್ಟು ಕ್ರೀಡಾಮೀಸಲಾತಿಯನ್ನೂ ನೀಡಲಾಗುತ್ತಿದೆ ಎಂದು ತಿಳಿಸಿದರು.

    ಇಂದಿನ ಯುವಜನತೆ ಶಿಕ್ಷಣ ಹಾಗೂ ಕ್ರೀಡೆಗೆ ಹೆಚ್ಚು ಒತ್ತು ನೀಡಿದರೆ ಅವರ ದೈಹಿಕ ಹಾಗೂ ಮಾನಸಿಕ ವಿಕಸನಕ್ಕೆ ಸಹಕಾರಿಯಾಗಿದೆ. ಸದೃಢ ಆರೋಗ್ಯಕ್ಕೆ ಕ್ರೀಡೆ ಹಾಗೂ ವ್ಯಾಯಾಮ ಅತ್ಯಗತ್ಯ ಎಂದು ಸಿಎಂ ಒತ್ತಿ ಹೇಳಿದರು.

    ಪಂಡಿತ್ ವೆಂಕಟೇಶ್ ಕುಮಾರ್ ಅವರಿಗೆ ಸಂಗೀತ ವಿದ್ವಾನ್ ಪ್ರಶಸ್ತಿ ಪುರಸ್ಕಾರ ಆಗಿರುವುದು ಕೇವಲ ಅವರ ಸಂಗೀತ ಸಾಧನೆಗೆ ಸಿಕ್ಕ ಗೌರವ ಅಲ್ಲ, ನಮ್ಮನ್ನು ನಾವೇ ಗೌರವಿಸಿಕೊಂಡಂತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ವುಗೆ ವ್ಯಕ್ತಪಡಿಸಿದರು.

    ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿ, ಪಂಡಿತ್ ವೆಂಕಟೇಶ್ ಕುಮಾರ್ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

    ದಸರಾ ಪ್ರಯುಕ್ತ ಪ್ರತಿ ವರ್ಷ ಸಂಗೀತ ವಿದ್ವಾನ್ ಪ್ರಶಸ್ತಿ ನೀಡಲಾಗುತ್ತಿದ್ದು, ಈ ಬಾರಿ ಪುಟ್ಟರಾಜ ಗವಾಯಿಗಳ ಗರಡಿಯಲ್ಲಿ ಪಳಗಿದ ಪಂಡಿತ್ ವೆಂಕಟೇಶ್ ಕುಮಾರ್ ಅವರಿಗೆ ನೀಡಲಾಗಿದೆ. ಅತಿ ಬಡತನದ ಕುಟುಂಬದಿಂದ ಬಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಸಂಗೀತ ಕ್ಷೇತ್ರದ ಕೀರ್ತಿಯನ್ನು ಹೆಚ್ಚಿಸಿದ ವೆಂಕಟೇಶ್ ಕುಮಾರ್ ಸಂಗೀತ ವಿದ್ವಾನ್ ಪುರಸ್ಕಾರಕ್ಕೆ ಅತೀ ಅರ್ಹರು. ಇದು ನಮಗೇ ಸಲ್ಲುವ ಗೌರವ ಎಂದರು.

    ಕಲಾನಿಧಿ ವಿದ್ವಾನ್ ವಾಸುದೇವಾಚಾರ್ಯ ಅವರ ಹೆಸರಿನಲ್ಲಿ ಕಾರ್ಯಕ್ರಮ ರೂಪಿಸಬೇಕು ಎನ್ನುವ ಶಾಸಕ ಶ್ರೀವತ್ಸ ಅವರ ಬೇಡಿಕೆಯಂತೆ ಕಾರ್ಯಕ್ರಮ ರೂಪಿಸಲಾಗುವುದು ಎಂದು ಸಿಎಂ ಭರವಸೆ ನೀಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ

    August 26, 2026

    ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ

    August 25, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಬೆಂಗಳೂರು: ನೇಪಾಳ ಮತ್ತು ಟಿಬೆಟ್ ಗಡಿ ಭಾಗದಲ್ಲಿ ಸಂಭವಿಸಿರುವ ಭೀಕರ ಪ್ರವಾಹ ಹಾಗೂ ಭೂಕುಸಿತದ ಹಿನ್ನೆಲೆಯಲ್ಲಿ, ಅಲ್ಲಿ ಸಂಕಷ್ಟಕ್ಕೆ ಸಿಲುಕಿರುವ…

    ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ

    August 27, 2026

    ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

    August 27, 2026

    ಈದ್ ಮಿಲಾದ್: ಮೆರವಣಿಗೆಯಲ್ಲಿ ಭಾಗಿಯಾಗಿ ಶುಭಕೋರಿದ ಹಾಸನ ಸಂಸದ ಶ್ರೇಯಸ್ ಪಟೇಲ್

    August 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.