ಬೆಂಗಳೂರು: ಸಿನಿಮಾ ಟಿಕೆಟಿಗೆ ಗರಿಷ್ಟ 200 ರೂ. ದರ ನಿಗದಿಪಡಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ನ್ಯಾ. ರವಿ ಹೊಸಮನಿ ಅವರಿದ್ದ ಪೀಠ ಮಧ್ಯಂತರ ತಡೆ ನೀಡಿದೆ.
ಮಲ್ಟಿಪ್ಲೆಕ್ಸ್ ಸೇರಿ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಯ ಚಲನಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಟಿಕೆಟ್ ದರ ಗರಿಷ್ಠ 200 ಏಕರೂಪ ದರ ನಿಗದಿಪಡಿಸಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ನಿಯಮಗಳಿಗೆ ತಡೆ ನೀಡಬೇಕೆಂದು ಕೋರಿ ಅರ್ಜಿದಾರರು ಮನವಿ ಮಾಡಿದ್ದರು.
ಟಿಕೆಟ್ ದರ ನಿಗದಿ ಸಂಬಂಧ ಜಾರಿಗೆ ತಂದಿರುವ ‘ಕರ್ನಾಟಕ ಸಿನಿಮಾ (ನಿಯಂತ್ರಣ)(ತಿದ್ದುಪಡಿ) ನಿಯಮಗಳು–2025’ ಪ್ರಶ್ನಿಸಿ ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್, ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾದ ಪ್ರತಿನಿಧಿ ಶುಭಂ ಠಾಕೂರ್, ಪಿವಿಆರ್ ಐನಾಕ್ಸ್ ಲಿಮಿಟೆಡ್‌ನ ಷೇರುದಾರ ಸಂತನು ಪೈ, ಕೀಸ್ಟೋನ್ ಎಂಟರ್ಟೈನ್ಮೆಂಟ್ ಹಾಗೂ ವಿ.ಕೆ. ಫಿಲ್ಮ್ಸ್ ತಕಾರರು ಅರ್ಜಿ ತ್ಯರ್ಥವಾಗುವವರೆಗೆ ಸರ್ಕಾರ ಜಾರಿಗೆ ತಂದಿರುವ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿದ್ದರು.
ಅರ್ಜಿದಾರರು ಹಾಗೂ ಸರ್ಕಾರದ ಪರ ವಕೀಲರ ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಪೀಠ ಇಂದು ಮಧ್ಯಂತರ ತಡೆ ನೀಡಿ ಆದೇಶ ಪ್ರಕಟಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC