nammatumakuru

    Subscribe to Updates

    Get the latest creative news from FooBar about art, design and business.

    What's Hot

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!

    July 13, 2026
    Facebook Twitter Instagram
    ಟ್ರೆಂಡಿಂಗ್
    • 14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR
    • ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ
    • ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!
    • ಸರಗೂರು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶಂಭುಮೂರ್ತಿ
    • ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ: ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್‌
    • ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!
    • ತುಮಕೂರು: ಎಸ್ ಐಆರ್ ಗೊಂದಲ, ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ
    • ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾವತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ ರದ್ದು
    ಕೊರಟಗೆರೆ September 23, 2025

    ಮಾವತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ ರದ್ದು

    By adminSeptember 23, 2025No Comments3 Mins Read
    samanya sabhe

    ಕೊರಟಗೆರೆ : ತಾಲೂಕಿನ ಮಾವತ್ತೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆಗೆ ಸರ್ವ ಸದಸ್ಯರಿಗೆ ಆಹ್ವಾನ ಪತ್ರಿಕೆ ನೀಡದ ಕಾರಣಕ್ಕೆ ಸಭೆ ರದ್ದಾಗಿದೆ.

    ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿ ಮಾವತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ೨೦೨೪–೨೫ನೇ ಸಾಲಿನ ವಾರ್ಷಿಕ ಮಹಾಸಭೆಯನ್ನ ಏರ್ಪಡಿಸಲಾಗಿತ್ತು. ವಾರ್ಷಿಕ ಸಭೆ ನಡೆಸಲು ಸರ್ವ ಸದಸ್ಯರಿಗೆ ೧೫ ದಿನ ಮುಂಚೆಯೇ ಆಹ್ವಾನ ಪತ್ರಿಕೆ ನೀಡಬೇಕಾಗಿತ್ತು ಸಂಘದ ಎರಡು ಬಣದ ಸದಸ್ಯರ ನಡುವೆ ಮಾತಿನ ಜಟಾಪಟಿಯಿಂದ ರೈತರಿಗೆ ಸೇರಿದ ೩೦ ಸಾವಿರಕ್ಕೂ ಹೆಚ್ಚಿನ ಹಣ ಖರ್ಚು ಮಾಡಿ ಆಯೋಜಿಸಿದ್ದ ಸಭೆಯನ್ನ ರದ್ದುಪಡಿಸಲಾಗಿದೆ.

    ರೈತರಿಗೆ ಕಳೆದ ೪ ವರ್ಷದಿಂದ ಸಹಕಾರ ಸಂಘದಿಂದ ಯಾವುದೇ ಸಾಲ ಸೌಲಭ್ಯ ನೀಡಲಾಗಿದೆ ಎಂದು ರೈತರ ಪಹಣಿಯಲ್ಲಿ ಉಲ್ಲೇಖವಾಗಿದೆ. ಹಾಗೂ ಒಂದು ಮೂಟೆ ಗೊಬ್ಬರವನ್ನು ಮಾರಾಟ ಮಾಡಿಲ್ಲ ಎಂದು ರೈತರು ಸಭೆಯಲ್ಲಿ ಸದಸ್ಯರನ್ನ ತರಾಟೆ ತೆಗೆದುಕೊಂಡರು. ಇದರ ಜೊತೆಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಧನಂಜಯ ಅವರು ಸಂಘ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಕಾರ್ಯನಿರ್ವಾಹಣಾಧಿಕಾರಿ ಮತ್ತು ಅಧ್ಯಕ್ಷರ ಬೇಜಾವಬ್ದಾರಿತನವೇ ಇಂದಿನ ಸಭೆ ರದ್ದಾಗಲು ಕಾರಣ ಎಂದು ರೈತರು ಬೇಸರ ವ್ಯಕ್ತಪಡಿಸಿದರು.

    ವಿಎಸ್‌ ಎಸ್‌ ಎನ್ ಮಾಜಿ ಅಧ್ಯಕ್ಷ ಶಂಕರಣ್ಣ ಮಾತನಾಡಿ, ನಾಲ್ಕು ವರ್ಷದ ಹಿಂದೆ ನಾನು ಅಧ್ಯಕ್ಷ ಆಗಿದ್ದ ಸಂದರ್ಭದಲ್ಲಿ ಸಹಕಾರ ಸಂಘದ ಜಿಲ್ಲಾ ಅಧ್ಯಕ್ಷರಾದ ಕೆ.ಎನ್.ರಾಜಣ್ಣ ಅವರನ್ನ ಭೇಟಿ ಮಾಡಿ ಸಾಲ ಮಂಜೂರು ಮಾಡಿಕೊಂಡು ಬಂದಿದ್ದೆ. ಆದರೆ ಈಗಿನ ಅಧ್ಯಕ್ಷರಾದ ಧನಂಜಯ ಅವರು ಸ್ವಲ್ಪ ತಡವಾಗಿ ಸಾಲ ನೀಡಲಾಗುತ್ತದೆ ಎಂದು ತಿಳಿಸಿದಾಗ ಕೆ.ಎನ್.ರಾಜಣ್ಣ ಅವರ ಅಪ್ಪನ ಮನೆಯಿಂದ ಸಾಲ ಕೊಡಲ್ಲ ಎಂದು ಉದ್ದಟನದ ಮಾತಿನಿಂದ ಇಲ್ಲಿಯವರೆಗೂ ನಮ್ಮ ಸಂಘಕ್ಕೆ ಒಂದು ರೂಪಾಯಿ ಸಾಲ ಮಂಜೂರು ಆಗಿಲ್ಲ ಎಂದು ತಿಳಿಸಿದರು.

    ಡಿಸಿಸಿ ಬ್ಯಾಂಕ್ ಮೇಲ್ವಿಚಾರಕರಾದ ಬೋರಣ್ಣ ಮಾತನಾಡಿ ೨೦೨೪– ೨೫ನೇ ಸಾಲಿನ ವಾರ್ಷಿಕ ಸಾಮಾನ್ಯ ಮಹಾಸಭೆಯನ್ನ ಆಯೋಜನೆ ಮಾಡಲಾಗಿತ್ತು. ಸಹಕಾರ ಸಂಘದ ಸದಸ್ಯರಿಗೆ ಆಹ್ವಾನ ಪತ್ರಿಕೆ ನೀಡಿಲ್ಲ ಎಂದು ಸಭೆಯಲ್ಲಿ ತಿಳಿಸಲಾಗಿದೆ. ನನಗೂ ಸಹ ಯಾವುದೆ ಆಮಂತ್ರಣ ನೀಡಿಲ್ಲ. ಸಂಘದ ಆಡಳಿತ ಮಂಡಳಿ ರೈತರ ಪಹಣಿಯಲ್ಲಿ ಸಾಲ ಮಂಜೂರು ಆಗಿರುವುದು ನನ್ನ ಗಮನಕ್ಕೆ ಬಂದಿದೆ. ಈ ಹಿಂದೆ ಸಾಲ ನೀಡುವ ಸಂದರ್ಭದಲ್ಲಿ ಪಹಣಯಲ್ಲಿ ಸಾಲ ಮಂಜೂರು ಆಗಿದೆ ಎಂದು ಬಂದಿದ್ದು, ನಾನೇ ಖುದ್ದು ನಿಂತು ಅದನ್ನ ತೆಗೆಸಲಾಗುವುದು. ಸಭೆ ರದ್ದಾದ ವಿಷಯವನ್ನ ನಮ್ಮ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ.

    ಮಾವತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಧನಂಜಯ ಮಾತನಾಡಿ, ನಮ್ಮ ಮನೆಯ ಸದಸ್ಯರಿಗೆ ಆರೋಗ್ಯದ ಸಮಸ್ಯೆ ಇರುವ ಕಾರಣ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ವಾರ್ಷಿಕ ಸಭೆಯನ್ನ ಆಯೋಜನೆ ಮಾಡಲು ತಿಳಿಸಲಾಗಿತ್ತು. ವಾರ್ಷಿಕ ಸಭೆ ಮಾಡಲು ಎಂಟು ಜನರ ಹಾಜರಾತಿಯಿಂದಲೇ ಸಭೆಯನ್ನ ಆಯೋಜನೆ ಮಾಡಲಾಗಿದೆ. ಸದಸ್ಯರಿಗೆ ಆಹ್ವಾನ ಪತ್ರಿಕೆ ನೀಡಿಲ್ಲ ಎಂದು ದೂರಿದ್ದಾರೆ. ಅದ್ದರಿಂದ ಸಭೆಯನ್ನ ಮುಂದೂಡಲಾಗಿದೆ.

    ಗ್ರಾಪಂ ಸದಸ್ಯ ಹಾಗೂ ವಿಎಸ್‌ ಎಸ್‌ ಎನ್ ನಿರ್ದೇಶಕ ಮಂಜುನಾಥ್ ಮಾತನಾಡಿ, ಸಂಘದ ಕಾರ್ಯನಿರ್ವಾಹಣಾಧಿಕಾರಿ ಮತ್ತು ಅಧ್ಯಕ್ಷರ ಬೇಜವಾಬ್ದಾರಿತನವೇ ಇಂದಿನ ಸಭೆ ರದ್ದಾಗಲು ಕಾರಣ. ಸದಸ್ಯರಿಗೆ ಆಹ್ವಾನ ಪತ್ರಿಕೆ ನೀಡಿಲ್ಲ ಎಂದು ಸಭೆ ರದ್ದಾಗಿದೆ. ನಿರ್ದೇಶಕರ ಸಭೆಯನ್ನ ಕರೆಯದೆ ಏಕಾ ಚಕ್ರಾಧಿಪತ್ಯ ಧೋರಣೆಯಿಂದ ಇಷ್ಟೇಲ್ಲ ಬೆಳವಣಿಗೆ ಆಗುತ್ತಿದೆ. ನಮ್ಮ ಭಾಗದ ರೈತರಿಗೆ ಒಂದು ಮೂಟೆ ಗೊಬ್ಬರ ಆಗಲಿ ಸಾಲವಾಗಲಿ ನೀಡಿಲ್ಲ. ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಕೆ.ಎನ್.ರಾಜಣ್ಣ ಅವರನ್ನ ಅಪ್ಪನ ಮನೆಯಿಂದ ಸಾಲ ಕೊಡಲ್ಲ ಎಂದು ನಾಲ್ಕು ವರ್ಷದ ಹಿಂದೆ ಮಾತನಾಡಿದ್ದಾರೆ. ಆದ್ದರಿಂದ ಇಲ್ಲಿಯವರೆಗೂ ನಮ್ಮ ಸಂಘಕ್ಕೆ ಸಾಲ ಮಂಜೂರಾಗಿಲ್ಲ ಎಂದು ಅಧ್ಯಕ್ಷರ ವಿರುದ್ದ ಆರೋಪ ಮಾಡಿದರು.

    ಈ ಹಿಂದೆ ರೈತರಿಗೆ ಸಾಲ ಮಂಜೂರು ಮಾಡಲು ಸಲುವಾಗಿ ರೈತರ ಪಹಣಿಯಲ್ಲಿ ಸಾಲ ನೀಡಲಾಗಿದೆ ಎಂದು ನಮೂದಿಸಲಾಗಿದೆ. ಅದನ್ನ ಆದಷ್ಟು ಬೇಗ ತೆಗಿಸಲಾಗುವುದು, ಡಿಸಿಸಿ ಬ್ಯಾಂಕ್ ಜಿಲ್ಲಾ ಅಧ್ಯಕ್ಷರಾದ ಕೆ.ಎನ್.ರಾಜಣ್ಣ ಅವರ ಅಪ್ಪನ ಮನೆಯಿಂದ ಸಾಲ ಕೊಡಲ್ಲ ಎಂದು ಅವರಿಗೆ ಅವಮಾನ ಮಾಡುವ ರೀತಿ ನಾನು ಮಾತನಾಡಿಲ್ಲ, ನನ್ನ ವಿರೋಧಿಗಳು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ.

    — ಧನಂಜಯ ವಿಎಸ್‌ ಎಸ್‌.ಎನ್. ಅಧ್ಯಕ್ಷ ಮಾವತ್ತೂರು.


    ಸಭೆಯಲ್ಲಿ ಸಂಘದ ಸಿಇಒ ತಿಮ್ಮಯ್ಯ, ಉಪಾಧ್ಯಕ್ಷ ನರಸಿಂಹಮೂರ್ತಿ ನಿರ್ದೇಶಕರಾದ ಮತ್ತರಾಜು, ಪ್ರಕಾಶ್, ಮಂಜುನಾಥ್, ನವೀನ್‌ಕುಮಾರ್, ರಂಗದಾಸಯ್ಯ, ರಮೇಶ್, ನಲ್ಲಪ್ಪ, ಪಾರ್ವತಮ್ಮ, ಭಾಗ್ಯಮ್ಮ, ಕೃಷ್ಣಪ್ಪ, ಮುಖಂಡರಾದ ವೆಂಕಟಗೌಡ, ಮಂಜುನಾಥ್, ನರಸೇಗೌಡ, ಸೇರಿದಂತೆ ಇತರರು ಇದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ

    July 9, 2026

    ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ

    July 8, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಹುಬ್ಬಳ್ಳಿ: 14 ವರ್ಷದ ಅಪ್ರಾಪ್ತ ಬಾಲಕಿಯೋರ್ವಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಬೆರಗುಗೊಳಿಸುವ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಈ…

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!

    July 13, 2026

    ಸರಗೂರು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶಂಭುಮೂರ್ತಿ

    July 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.