ಮಧುಗಿರಿ: ಪಟ್ಟಣದ ಗೊಬ್ಬರ ಅಂಗಡಿ ಮುಂಭಾಗ ಮಂಗಳವಾರ ತಾಲ್ಲೂಕಿನ ರೈತರು ಮುಗಿಬಿದ್ದು ಯೂರಿಯಾ ಖರೀದಿಸಿದರು.
ಪಟ್ಟಣದ ಗೊಬ್ಬರದ ಅಂಗಡಿಗಳಿಗೆ ಯೂರಿಯಾ ಪೂರೈಕೆಯಾಗಿರುವ ವಿಷಯ ತಿಳಿದ ರೈತರು ತಮ್ಮ ಆಧಾರ್ ಕಾರ್ಡ್‌ಗಳನ್ನು ಕೈಯಲ್ಲಿ ಹಿಡಿದು ಸಾಲಿನಲ್ಲಿ ನಿಂತು ಖರೀದಿಗೆ ಮುಂದಾದರು.
ಮಳೆ ಬಂದಾಗ ಯೂರಿಯಾಗೆ ಬೇಡಿಕೆ ಹೆಚ್ಚಾಗಿದ್ದು, ರೈತರಿಗೆ ಬೇಕಾಗುವಷ್ಟು ಗೊಬ್ಬರ ಕೊಡಬೇಕು. ಆದರೆ ಗೊಬ್ಬರದ ಅಂಗಡಿಗಳಲ್ಲಿ ಯೂರಿಯಾ ಗೊಬ್ಬರವೇ ಸಿಗುತ್ತಿಲ್ಲ. ಇದರಿಂದಾಗಿ ರೈತರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಈ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ರೈತ ಕೃಷ್ಣಪ್ಪ ಆಗ್ರಹಿಸಿದರು.
ರೈತರಿಗೆ ಅಗತ್ಯವಿರುವ ಬೀಜ ಮತ್ತು ಯೂರಿಯಾ ಗೊಬ್ಬರಕ್ಕೆ ಸಾಕಷ್ಟು ಬೇಡಿಕೆಯಿದ್ದರೂ, ಸರ್ಕಾರ ಪೂರೈಸದೇ ನಿರ್ಲಕ್ಷ್ಯ ವಹಿಸಿರುವುದರಿಂದ ಈ ರೀತಿಯ ಸಮಸ್ಯೆ ಎದುರಾಗಿದೆ. ತಕ್ಷಣ ಸರ್ಕಾರವೇ ಈ ಸಮಸ್ಯೆ ತಿಳಿಗೊಳಿಸಬೇಕು ಎಂದು ರೈತ ರಂಗನಾಥಪ್ಪ ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC