ಬೀದರ್: ಜಿಲ್ಲೆಯ ಔರಾದ ತಾಲೂಕಿನಲ್ಲಿ ನಿರಂತರವಾಗಿ ಸುರುತ್ತಿರುವ ಮಳೆಯಿಂದಾಗಿ ಸಾಕಷ್ಟು ಹಾನಿ ಸಂಭವಿಸಿದೆ. ತಾಲೂಕಿನ ಬೋರಾಳ ಗ್ರಾಮದಿಂದ ಮುಂಗನಾಳ ಗ್ರಾಮಕ್ಕೆ ಸಂಪರ್ಕ ಕಲಿಸುವ ರಸ್ತೆ ಮಧ್ಯ ಸೇತುವೆ ಮಳೆ ನೀರಿಗೆ ಕೊಚ್ಚಿ ಹೋಗಿದೆ. ಮತ್ತು ಸೇತುವೆ ಅಕ್ಕ–ಪಕ್ಕದ ಹೊಲಗಳಿಗೆ ನೀರು ನುಗ್ಗಿ ರೈತರ ಬೆಳೆನಾಶ ಆಗಿದೆ. ಜೊತೆಗೆ ಹೊಲದಲ್ಲಿರುವ ಮಣ್ಣು ಹರಿದುಕೊಂಡು ಹೋಗಿದೆ.
ಈ ಹಿನ್ನೆಲೆಯಲ್ಲಿ ಬೋರಳ ಗ್ರಾಮಕ್ಕೆ ಕಾಂಗ್ರೆಸ್ ಯುವ ಮುಖಂಡರಾದ ಸುಧಾಕರ್ ಕೊಳ್ಳುರ ಭೇಟಿ ನೀಡಿ ರೈತರಿಗೆ ಧೈರ್ಯ ತುಂಬಿದರು ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ರಸ್ತೆ ಸೇತುವೆ ಸರಿ ಮಾಡುವ ತಿಳಿಸಿದರು.
ತಾಲೂಕಿನಲ್ಲಿ ಭಾರೀ ಮಳೆಯಿಂದ ರೈತರ ಹೊಲಗಳಿಗೆ ಹಾನಿಯಾಗಿದೆ. ಆದರೂ ಅಧಿಕಾರಿಗಳು ತಮಗೂ ಇದಕ್ಕೂ ಸಂಬಂಧ ಇಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ. ಸರಿಯಾದ ಸಮೀಕ್ಷೆ ನಡೆಸುತ್ತಿಲ್ಲ ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡುತ್ತಿದ್ದಾರೆ ಎಂದು ಸುಧಾಕರ್ ಕೊಳ್ಳುರ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಶಿವಶಂಕರ ಮಣಿಗಂಪುರೆ, ಉಮಾಕಾಂತ ಸೋನೆ, ಮಾಧವ್ , ಸಮೃದ್ ಪಾಟೀಲ್, ಮಾರುತಿ ಮಚ್ಕೊರಿ ಮುಂತಾದವು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC