ಶ್ರೀರಂಗಪಟ್ಟಣ: ಕೃಷ್ಣರಾಜ ಸಾಗರ ಅಣೆಕಟ್ಟು (ಕೆಆರ್ ಎಸ್) ಬೃಂದಾವನ ಉದ್ಯಾನದ ಆವರಣದಲ್ಲಿ ನಡೆದ ಐತಿಹಾಸಿಕ ಕಾವೇರಿ ಆರತಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಶಾಸ್ತ್ರೋಕ್ತವಾಗಿ ಶುಕ್ರವಾರ ಸಂಜೆ ಚಾಲನೆ ನೀಡಿದರು.
10 ಸಾವಿರಕ್ಕೂ ಹೆಚ್ಚು ನೆರೆದಿದ್ದ ಭಕ್ತರ ಸಮ್ಮುಖದಲ್ಲಿ ಮೊದಲಿಗೆ ದಕ್ಷಿಣ ಭಾರತ ಶೈಲಿಯಲ್ಲಿ ಸ್ಥಳೀಯ ಪುರೋಹಿತರ ತಂಡ ಆರತಿ ಬೆಳಗಿತು. ಆನಂತರ ವಾರಣಾಸಿಯಿಂದ ಬಂದಿದ್ದ 13 ಜನ ಪುರೋಹಿತರ ತಂಡ ಆರತಿ ಬೆಳಗಿತು. ನಾಡಿನ ಜೀವನದಿ, ನಮ್ಮೆಲ್ಲರ ತಾಯಿ ಕಾವೇರಿಗೆ ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ಆರತಿ ಬೆಳಗುವ ಈ ದಿವ್ಯ ಕ್ಷಣವು ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ನಡೆಯುವ ಗಂಗಾ ಆರತಿಯನ್ನೇ ಮೀರಿಸುವಂತೆ ಭಾವಿಸಿತು.
“ಕಾವೇರಿ ಆರತಿಯನ್ನು ಬರೀ ಧಾರ್ಮಿಕ ಕಾರ್ಯಕ್ರಮವಾಗಿ ರೂಪಿಸಿಲ್ಲ. ನಮ್ಮೆಲ್ಲರನ್ನು ಕಾಪಾಡುವ ಕಾವೇರಿ ತಾಯಿಗೆ ಗೌರವ ಸಲ್ಲಿಸುವ, ಪ್ರಾರ್ಥನೆ ಸಲ್ಲಿಸುವ ಕಾರ್ಯಕ್ರಮವಾಗಿ ರೂಪಿಸಿದ್ದೇವೆ. ಇದನ್ನು ಯಾವುದೇ ತೊಂದರೆ ಬಂದರೂ ನಿಲ್ಲಿಸಲು ಸಾಧ್ಯವಿಲ್ಲ ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC