ಶಿರಾ: ಕೆಎಸ್ ಆರ್ ಟಿಸಿ ಬಸ್ ನಿಂದ ಇಳಿಯುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಮಾರಗೊಂಡನಹಳ್ಳಿ ಗ್ರಾಮದ ಬಳಿ ನಡೆದಿದೆ.
ಕಾಮಕ್ಕ(64) ಮೃತಪಟ್ಟ ಮಹಿಳೆಯಾಗಿದ್ದಾರೆ. ಗುಡ್ಡದಜೋಗಿಹಳ್ಳಿ ಗ್ರಾಮದ ನಿವಾಸಿಯಾಗಿರುವ ಇವರು ತಮ್ಮ ಮಗಳ ಮನೆಗೆ ಹಬ್ಬಕ್ಕಾಗಿ ಬಂದಿದ್ದರು. ಹಬ್ಬ ಮುಗಿಸಿ ತಮ್ಮ ಮನೆಗೆ ಕೆಎಸ್ ಆರ್ ಟಿಸಿ ಬಸ್ ನಲ್ಲಿ ತೆರಳಿದ್ದರು.
ಮಾರಗೊಂಡನಹಳ್ಳಿ ಬಳಿ ಬಸ್ ನಿಂದ ಇಳಿಯಲು ಮುಂದಾಗುತ್ತಿದ್ದಂತೆಯೇ ಚಾಲಕ ಬಸ್ ಮುಂದಕ್ಕೆ ಚಲಾಯಿಸಿದ್ದು, ಪರಿಣಾಮವಾಗಿ ಕಾಮಕ್ಕ ಆಯತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಬಸ್ ಅವರ ಮೇಲೆಯೇ ಹರಿದಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲು ಯತ್ನಿಸಲಾಯಿತು. ಆದರೆ ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಶಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC