ಬೀದರ್: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭಾರೀ ಪ್ರಮಾಣದ ಬೆಳೆ, ಮನೆ ಹಾನಿಯ ಜೊತೆಗೆ ಮೂಲ ಸೌಕರ್ಯಕ್ಕೂ ಹಾನಿಯಾಗಿದೆ. ಈ ಸಂಬಂಧ ವೈಮಾನಿಕ ಸಮೀಕ್ಷೆ ನಡೆಸಿ, ವಿಶೇಷ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿಗಳಿಗೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಪೌರಾಡಳಿತ ಸಚಿವ ರಹೀಮ್ ಖಾನ್ ಅವರು ಮನವಿ ಮಾಡಿದ್ದಾರೆ.
ಭಾನುವಾರ ರಾತ್ರಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಈಶ್ವರ್ ಖಂಡ್ರೆ ಮಾತನಾಡಿ, ತಮ್ಮ ಮನವಿಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಸೆ.30ರಂದು ವೈಮಾನಿಕ ಸಮೀಕ್ಷೆ ನಡೆಸುವ ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC