ಪಾವಗಡ: ಭಾನುವಾರ ಬೆಳಿಗ್ಗೆ 12 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಪಾವಗಡ ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ ಭಜರಂಗದಳದಿಂದ ಪ್ರತಿಷ್ಠಾಪನೆ ಮಾಡಿದ್ದ ಹಿಂದೂ ಮಹಾ ಗಣಪತಿಯ ವಿಸರ್ಜನಾ ಶೋಭಾಯಾತ್ರೆ ಅದ್ದೂರಿಯಾಗಿ ನಡೆಯಿತು.
ಶೋಭಾಯಾತ್ರೆಗೆ ರಾಮಕೃಷ್ಣ ಸೇವಾಶ್ರಮದ ಶ್ರೀ ಜಪಾನಂದ ಸ್ವಾಮೀಜಿ ಚಾಲನೆ ನೀಡಿದರು. ಯಕ್ಷಗಾನ, ಕಾಳಿತಂಡವ, ಚೆಕ್ಕ ಭಜನೆ, ಕೋಲಾಟ, ನಾಸಿಕ್ ಬ್ಯಾಂಡ್, ಡ್ರಮ್ಸ್ ಸೆಟ್, ಸೇರಿದಂತೆ ವಿವಿಧ ಕಲಾತಂಡಗಳೊಂದಿಗೆ ಶಿರಾ ರಸ್ತೆಯ ಶ್ರೀನಿವಾಸ್ ಚಿತ್ರ ಮಂದಿರದ ವರೆಗೂ ನಂತರ ನಾಗರಕಟ್ಟೆ ಮಾರ್ಗವಾಗಿ ಶನಿಮಹಾತ್ಮ ವೃತ್ತ ಬಳ್ಳಾರಿ ರಸ್ತೆ ಹಾದಿಯಾಗಿ ಅಂಬೇಡ್ಕರ್ ಸರ್ಕಲ್ ಗೆ ತೇರಳಿ ನಂತರ ತುಮಕೂರು ರಸ್ತೆಯ ಪುರಸಭಾ ವಿಸರ್ಜನಾ ಸ್ಥಳದಲ್ಲಿ ಗಣಪತಿಯನ್ನು ವಿಸರ್ಜಿಸಲಾಯಿತು.
ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮಧುಗಿರಿ ಡಿಎಸ್ಪಿ ಮಂಜುನಾಥ್ ಹಾಗೂ ಪಾವಗಡ ಸಿಪಿಐ ಸುರೇಶ್ ಅವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಬಜರಂಗದಳ, ವಿಶ್ವ ಹಿಂದೂ ಪರಿಷತ್, ಶ್ರೀರಾಮ ಸೇನೆ, ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗಿಯೊಂದಿಗೆ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿ ಶೋಭಾಯಾತ್ರೆಯನ್ನು ಯಶಸ್ವಿಗೊಳಿಸಿದ್ದಾರೆ.
ಶೋಭಾ ಯಾತ್ರೆಯಲ್ಲಿ ಅನೇಕ ಪ್ರಮುಖ ನಾಯಕರು ಭಾಗಿಯಾಗುತ್ತಾರೆ ಎಂದು ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಪದಾಧಿಕಾರಿಗಳು ಹೇಳಿದ್ದರು. ಆದರೆ ಸ್ಥಳೀಯ ಶಾಸಕರ ಸಹಿತ ಯಾವುದೇ ನಾಯಕರು ಕಾರ್ಯಕ್ರಮಕ್ಕೆ ಬಾರದ ಹಿನ್ನೆಲೆ ಸಾರ್ವಜನಿಕರು ನಿರಾಸೆಯಾದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC