ಬೀದರ್: ನಗರದ ಬ್ರಿಮ್ಸ್ ಆಸ್ಪತ್ರೆಯಲ್ಲಿ ಬಾಣಂತನದ ವೇಳೆ ಮಗು ಮೃತಪಟ್ಟಿದ್ದು, ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದಲೇ ಮಗು ಸಾವನ್ನಪ್ಪಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.
ಔರಾದ್ ತಾಲ್ಲೂಕಿನ ಬೆಳಕುಣಿ ಚೌದ್ರಿ ಗ್ರಾಮದಿಂದ ಬಾಣಂತನಕ್ಕೆ ಬಂದ ಜ್ಯೋತಿ ಎಂಬ ಮಹಿಳೆ ಬಂದಿದ್ದು, ವೈದ್ಯರು, ಸಿಬ್ಬಂದಿಗಳು ಅತ್ಯಾಧುನಿಕ ಸೌಲಭ್ಯಗಳಿದ್ದರೂ ಸರಿಯಾದ ಚಿಕಿತ್ಸೆ ನೀಡದೇ ನಿರ್ಲಕ್ಷ್ಯ ವಹಿಸಿ ಮಗುವಿನ ಸಾವಿಗೆ ಕಾರಣರಾಗಿದ್ದಾರೆ ಎನ್ನುವ ಆಕ್ರೋಶ ಕೇಳಿ ಬಂದಿದೆ.
ಮೊದಲು ಆರೋಗ್ಯ ಪರಿಸ್ಥಿತಿ ಸರಿಯಿಲ್ಲ ಎಂದು ಹೇಳಿದ ವೈದ್ಯರು, ಸಾಮಾನ್ಯ ಹೆರಿಗೆ ಮಾಡುವುದಾಗಿ ಹೇಳಿದರು. ಆದರೆ ಬಾಣಂತಿ ಜ್ಯೋತಿ ಹಾಗೂ ಕುಟುಂಬದವರು ಸಿಸೇರಿಯನ್ ಗೆ ಒತ್ತಾಯಿಸಿದರು. ಆದರೆ ವೈದ್ಯರು ಅದಕ್ಕೊಪ್ಪದೇ ಕಡೇ ಕ್ಷಣದಲ್ಲಿ ಕುಟುಂಬದವರಿಗೆ ಹೆದರಿಸಿ ಬೆದರಿಸಿ ಒಪ್ಪಿಗೆ ಸಹಿ ಪಡೆದು ಶಸ್ತ್ರಚಿಕಿತ್ಸೆ ಮಾಡಿದ್ದು ತಾಯಿ ಬದುಕಿದ್ದಾಳೆ, ಮಗು ಸಾವನ್ನಪ್ಪಿದೆ. ಆದರೆ ಆಸ್ಪತ್ರೆಯ ದಾಖಲೆಗಳಲ್ಲಿ ತಾಯಿ ಹಾಗೂ ಮಗು ಜೀವಂತವಾಗಿದ್ದಾರೆ ಎಂದು ವರದಿ ನೀಡಲಾಗಿದೆ. ಏಕೆ ಎಂದು ಕೇಳಿದರೆ ಸಬೂಬು ಹೇಳುತ್ತಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಘಟನೆಗೆ ಕಾರಣರಾದ ವೈದ್ಯರು ಹಾಗೂ ಸಿಬ್ಬಂದಿಗಳ ವಿರುದ್ಧ ಏನು ಕ್ರಮ? ಎಂದು ಜ್ಯೋತಿ ಪ್ರಶ್ನಿಸಿದ್ದಾರೆ. ಕ್ರಮ ಕೈಗೊಳ್ಳುವ ತಾಕತ್ತು ಆಳುವವರಿಗೆ ಇದೆಯಾ? ಕನಿಷ್ಠ ಪರಿಶೀಲನೆಯಾದರೂ ನಡೆಸುತ್ತಾರೆ? ಕಾದು ನೋಡಬೇಕಿದೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC