ತುಮಕೂರು: ಬೆಂಗಳೂರಿನ ಮಾದವರದಿಂದ ತುಮಕೂರುವರೆಗೆ ಮೆಟ್ರೊ ವಿಸ್ತರಿಸಲು ಅಂದಾಜು 20,649 ಕೋಟಿ ವೆಚ್ಚ ಆಗಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಇಲ್ಲಿ ಸೋಮವಾರ ಹೇಳಿದರು.
ಮೆಟ್ರೊ ವಿಸ್ತರಣೆಗೆ ಸಂಬಂಧಿಸಿದಂತೆ ವಿಸ್ಕೃತ ಯೋಜನಾ ವರದಿ (ಡಿಪಿಆರ್) ಸಿದ್ಧ ಪಡಿಸಲು ಸೆ. 25ರಂದು ಸರ್ಕಾರ ಆದೇಶ ಹೊರಡಿಸಿದೆ. ಬಿಎಂಆರ್‌ಸಿಎಲ್‌ಗೆ ಡಿಪಿಆರ್ ಹೊಣೆ ವಹಿಸಲಾಗಿದೆ. ಇದಕ್ಕಾಗಿ 3 ಕೋಟಿ ಖರ್ಚು ಮಾಡಲಾಗುತ್ತಿದೆ. ಆದಷ್ಟು ಶೀಘ್ರ ವರದಿ ಸಲ್ಲಿಕೆಗೆ ಸೂಚಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಬಿಎಂಆರ್ ಸಿಎಲ್ ವತಿಯಿಂದ ಈಗಾಗಲೇ ಕಾರ್ಯ ಸಾಧ್ಯತಾ ವರದಿ ಸಲ್ಲಿಕೆಯಾಗಿದೆ. ನಗರದವರೆಗೆ ಮೆಟ್ರೊ ವಿಸ್ತರಿಸುವ ಯೋಜನೆ ಒಂದೊಂದು ಹಂತ ದಾಟಿಕೊಂಡು ಮುಂದೆ ಸಾಗುತ್ತಿದೆ. ಮೆಟ್ರೊ ನಗರಕ್ಕೆ ಮಾತ್ರ ಸೀಮಿತವಾಗಿದೆ. ಗ್ರಾಮೀಣ ಭಾಗಕ್ಕೆ ವಿಸ್ತರಿಸಲು ಹೊಸ ಕಾನೂನು ರೂಪಿಸಬೇಕು. ಅನೇಕ ನಿಯಮ ಪಾಲಿಸಬೇಕಿದೆ ಎಂದು ಹೇಳಿದರು.
ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಮೆಟ್ರೊ ಕಾಮಗಾರಿ ನಡೆಸಲಾಗುತ್ತದೆ. ಡಿಪಿಆರ್ ಸಲ್ಲಿಕೆಯಾದ ನಂತರ ಅನುಮತಿ ಕೋರಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC