ಕೊರಟಗೆರೆ: ತಾಲ್ಲೂಕಿನ ಕಸಬಾ ಹೋಬಳಿಯ ಬಜ್ಜನಹಳ್ಳಿಯ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಕರ್ನಾಟಕದಲ್ಲಿ 6ನೇ ರಾಜ್ಯಮಟ್ಟದ ಕಲಾ ಉತ್ಸವ — 2025 ಕಾರ್ಯಕ್ರಮ ಶನಿವಾರ ಜರುಗಿತು.
ಕೇಂದ್ರದ ಬುಡಕಟ್ಟು ಮಂತ್ರಾಲಯದ ಅಧೀನದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮಕ್ಕೆ ಕರ್ನಾಟಕ ಶಿಕ್ಷಣ ಪರಿಶಿಷ್ಟ ಪಂಗಡಗಳ ಸಂಸ್ಥೆಯ (KESTS) ಶಿಕ್ಷಣ ಸಲಹೆಗಾರರಾದ ಅನುಸೂಯಾ ಮತ್ತು ಕನ್ನಯ್ಯ ಭೇಟಿ ಉಪಸ್ಥಿತರಿದ್ದರು.
ಶಾಲೆಯ ಪ್ರಾಂಶುಪಾಲರು ವಿನೋದ ಕುಮಾರ ಯಾದವ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದರು. ನಿರೂಪಣೆಯನ್ನು ನೀನಿ ನಿರ್ವಹಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಗಾಯನ ಸ್ಪರ್ಧೆ ಆಯೋಜಿಸಲಾಗಿದೆ. ನಿರ್ಣಾಯಕರಾಗಿ ತುಮಕೂರಿನ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಚಿದಾನಂದ ದೇವರಮನಿ ಹಾಗೂ ಕೇಂದ್ರಿಯ ವಿದ್ಯಾಲಯ ಮತ್ತು ನವೋದಯ ವಿದ್ಯಾಲಯದ ಸಂಗೀತ ಶಿಕ್ಷಕರು ಆಗಮಿಸಿದರು.
EMRS ಕೊಲಗಲ್ಲು (ಬಳ್ಳಾರಿ) ಶಾಲೆಯ ವಿದ್ಯಾರ್ಥಿಗಳು ಮತ್ತು ಸಂಗೀತ ಶಿಕ್ಷಕರು ಕೂಡ ಉಪಸ್ಥಿತರಿದ್ದರು. ಶಾಲೆಯ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಸಕ್ರಿಯ ಪಾಲ್ಗೊಳ್ಳುವಿಕೆಯೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ಪೂರ್ಣಗೊಂಡಿತು.
ಈ ಸಂದರ್ಭದಲ್ಲಿ ಏಕಲವ್ಯ ವಸತಿ ಶಾಲೆಯ ಪ್ರಾಂಶುಪಾಲರು, ಶಿಕ್ಷಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಮತ್ತು ಕಲಾವಿದರು ಭಾಗವಹಿಸಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC