ಮೈಸೂರು: ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಉತ್ಸವದಲ್ಲಿ ಪುಷ್ಪಾರ್ಚನೆ ಮಾಡುತ್ತೇನೆಂಬ ಭರವಸೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ.
ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಹಬ್ಬ ದಸರಾ ವೇಳೆಗೆ ಮುಖ್ಯಮಂತ್ರಿಗಳು ಪುಷ್ಪಾರ್ಚನೆ ಮಾಡುವುದಿಲ್ಲ ಎಂದು ಹೇಳಿದ್ದ ವಿಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ. ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಲು, ಬಜೆಟ್ ಮಂಡಿಸಲು ಸಾಧ್ಯವಿಲ್ಲವೆಂದಿದ್ದರು. ಆದರೂ ನಾನೇ ಎರಡನೇ ಬಾರಿಗೂ ಮುಖ್ಯಮಂತ್ರಿಯಾಗಿ ಮುಂದುವರೆದು ಬಜೆಟ್ ಮಂಡಿಸಿದ್ದೇನೆ ಎಂದರು.
ಆದರೆ ಪಕ್ಷದ ವರಿಷ್ಠರ ಆದೇಶದಂತೆ ಎಲ್ಲರೂ ನಡೆಯಬೇಕಿದೆ. ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಉತ್ಸವದಲ್ಲಿ ಪುಷ್ಪಾರ್ಚನೆ ಮಾಡುತ್ತೇನೆಂಬ ಭರವಸೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ದಸರಾ ಉದ್ಘಾಟಕರ ಬಗ್ಗೆ ಬಿಜೆಪಿಯವರು ವಿರೋಧದ ಧ್ವನಿಯೆತ್ತಿದ್ದರು. ಕರ್ನಾಟಕ ಜಾತ್ಯಾತೀತ ರಾಜ್ಯವಾಗಿದ್ದು, ಸಂವಿಧಾನದ ಬಗ್ಗೆ ಅರಿವಿಲ್ಲದವರೇ ಇಂತಹ ವಿರೋಧವನ್ನು ವ್ಯಕ್ತಪಡಿಸುತ್ತಾರೆ. ಆದ್ದರಿಂದ ಸುಪ್ರೀಂ ಕೋರ್ಟ್ ನಲ್ಲಿಯೂ ಕೂಡ ಅವರ ವಿರೋಧಕ್ಕೆ ಛೀಮಾರಿಯಾಯಿತು. ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC