ಹುಳಿಯಾರು: ತುರ್ತು ಪರಿಸ್ಥಿತಿಯಲ್ಲಿ ಸ್ವಯಂ ಸೇವಕರು ನೀಡಿದ ಬಲಿದಾನವನ್ನು ಇಂದಿನ ಪೀಳಿಗೆ ಮರೆಯಬಾರದು ಮತ್ತು ಯುವಜನರನಲ್ಲಿ ದೇಶಪ್ರೇಮ ಬೆಳೆಸಲು ಒತ್ತು ನೀಡಲಾಗುವುದು ಎಂದು ದಕ್ಷಿಣ ಪ್ರಾಂತ್ಯ ಬಾಲಗೋಕುಲ ಸಂಯೋಜಕ ಉಮೇಶ್ ತಿಳಿಸಿದರು.
ಪಟ್ಟಣದ ಪ್ರಸನ್ನ ಗಣಪತಿ ದೇಗುಲದಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಮತ್ತು ವಿಜಯದಶಮಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಂಘದ ನೂರು ವರ್ಷಗಳ ಪ್ರಯಾಣವು ದೇಶದ ಸಾಮಾಜಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಚಿತ್ರಣವನ್ನು ಬದಲಾಯಿಸಿದೆ, ಡಾ.ಕೇಶವ ಬಲಿರಾಂ ಹೆಡಗೇವಾರ್ ಅವರು 1925 ವಿಜಯದಶಮಿ ದಿನ ಸಂಘವನ್ನು ಸ್ಥಾಪಿಸಿದರು. ಹಿಂದೂ ಸಮಾಜವನ್ನು ಬಲಿಷ್ಠಗೊಳಿಸಿ, ಸಂಘಟಿತ ಶಕ್ತಿಯಿಂದ ಸಮಾಜ ರಕ್ಷಣೆ ಕಾರ್ಯ ಮಾಡುವುದು ಅವರ ಉದ್ದೇಶವಾಗಿತ್ತು ಎಂದು ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಸನ್ನ ಗಣಪತಿ ಸೇವಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಡಿ.ಎಸ್.ಮೋಹನ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC