ತುಮಕೂರು: ಖಾಸಗಿ ಬಸ್ ಮತ್ತು ಕಾರಿನ ಮಧ್ಯೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಬೆಳಧರ ಬಳಿಯಲ್ಲಿ ಶನಿವಾರ ಸಂಜೆ ನಡೆದಿದೆ.
ಮೃತಪಟ್ಟವರನ್ನು ಕೊರಟಗೆರೆ ತಾಲ್ಲೂಕಿನ ಕತ್ತಿನಾಗೇನಹಳ್ಳಿಯ ಶಿವಕುಮಾರ್ (28), ಗೋವಿಂದಪ್ಪ (60), ಬೈಚಾಪುರದ ಶಿವಶಂಕ (28) ಎಂದು ಗುರುತಿಸಲಾಗಿದೆ.
ಕತ್ತಿನಾಗೇನಹಳ್ಳಿಯ ಗೋಪಾಲ್ (28), ರೆಡ್ಡಿಹಳ್ಳಿಯ ಶಂಕರ್ (28) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರೂ ಧರ್ಮಸ್ಥಳಕ್ಕೆ ಹೊರಟಿದ್ದರು. ಮಾರ್ಗ ಮಧ್ಯೆ ಅಪಘಾತ ಸಂಭವಿಸಿದೆ.
ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ‘ಓವರ್ ಟೇಕ್ ಮಾಡುವ ಭರದಲ್ಲಿ ಅಪಘಾತ ಸಂಭವಿಸಿದೆ. ಮೃತದೇಹಗಳನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC