ಬೆಂಗಳೂರು: ಗಣತಿ ಸರ್ವೇ ವೇಳೆ ಕುರಿ, ಕೋಳಿ, ಚಿನ್ನ, ವಾಚ್ ಎಷ್ಟಿವೆ ಎಂದು ಕೇಳಬಾರದು. ಬೆಂಗಳೂರಲ್ಲಿ ಆ ರೀತಿ ಕೇಳಬಾರದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸದಾಶಿವನಗರ ನಿವಾಸದಲ್ಲಿ ಪ್ರತಿಕ್ರಿಯಿಸಿದ ಅವರು, ನಿಮಗೆ ಏನು ಉತ್ತರ ಕೊಡಬೇಕೋ ಅದಕ್ಕೆ ಉತ್ತರ ಕೊಡಿ. ಕೊಡಬಾರದು ಅನ್ನಿಸಿದರೆ ಕೊಡಬಾರದು. ಎಷ್ಟು ವಾಚ್, ಎಷ್ಟು ಚಿನ್ನ ಇದೆ, ಎಷ್ಟು ಫ್ರಿಡ್ಜ್ ಇದೆ ಅದೆಲ್ಲ ಕೇಳಬೇಡಿ. ಅದು ಅವರ ಪರ್ಸನಲ್ ಬಿಟ್ಟು ಬಿಡಿ ಎಂದು ಅಧಿಕಾರಿಗಳಿಗೂ ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಯಾರು ಬೇಕಾದರೂ ಅಪೇಕ್ಷೆಪಡಲಿ. ಕೋರ್ಟ್ ಹೇಳಿದೆ, ಏನು ಬೇಕೋ ಅದಕ್ಕೆ ಮಾತ್ರ ಉತ್ತರ ನೀಡಿ. ಆದರೆ ಸಮೀಕ್ಷೆ ವಿರೋಧ ಮಾಡೋದರಲ್ಲಿ ಅರ್ಥ ಇಲ್ಲ, ಎಲ್ಲರೂ ಭಾಗಿಯಾಗಬೇಕು. ಇಲಾಖೆಯವರು ಏನು ಮಾಡುತ್ತಾರೆ, ಮಾಡಲಿ. ಎಲ್ಲರೂ ಸಮೀಕ್ಷೆಯಲ್ಲಿ ಭಾಗಿಯಾಗಬೇಕು ಎಂದು ಮನವಿ ಮಾಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC